Terrorism: ಉಗ್ರರಿಗೆ ಅಂತಾರಾಷ್ಟ್ರೀಯ ಸಹಕಾರ- ತನಿಖೆಗೆ ಸಮಿತಿ
-ಅಮೆರಿಕ ಸರ್ಕಾರದ ಮಾಹಿತಿ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ
Team Udayavani, Nov 29, 2023, 11:30 PM IST
ನವದೆಹಲಿ: ಅಪರಾಧಿಗಳು, ಭಯೋತ್ಪಾದಕರು, ಬಂದೂಕು ಮಾರಾಟಗಾರರ ನಡುವೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಕ್ರಮ ಬಾಂಧವ್ಯ ಇರುವ ಬಗ್ಗೆ ಅಮೆರಿಕ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ. ಈ ಬಗ್ಗೆ ತನಿಖೆ ನಡೆಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಿದೆ. ಈ ಬಗ್ಗೆ ವಿದೇಶಾಂಗ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.
ಎರಡೂ ದೇಶಗಳ ನಡುವೆ ಭದ್ರತೆಗೆ ಸಂಬಂಧಿಸಿದ ಮಾತುಕತೆ ವೇಳೆ ಈ ಬಗ್ಗೆ ಪ್ರಸ್ತಾಪವಾಗಿದೆ. ತನಿಖಾ ಸಮಿತಿ ನೀಡುವ ವರದಿಯ ಆಧಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ. ಕೆಲದಿನಗಳ ಹಿಂದಷ್ಟೇ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಂಬಾತನನ್ನು ಅಮೆರಿಕದಲ್ಲಿಯೇ ಕೊಲ್ಲುವ ನಿಟ್ಟಿನಲ್ಲಿ ಸಂಚು ನಡೆದಿತ್ತು. ಅದನ್ನು ಅಮೆರಿಕ ಸರ್ಕಾರ ತಡೆಯುವಲ್ಲಿ ಯಶಸ್ವಿಯಾಗಿತ್ತು ಎಂದು “ಪೈನಾನ್ಶಿಯಲ್ ಟೈಮ್ಸ್’ನಲ್ಲಿ ಪ್ರಕಟಗೊಂಡ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗಚಿ ಅಪರಾಧಿಗಳು, ಬಂದೂಕು ವ್ಯಾಪಾರಿಗಳು, ಭಯೋತ್ಪಾದಕರ ನಡುವೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇರುವ ಅಕ್ರಮ ಸಂಪರ್ಕದ ಬಗ್ಗೆ ಅಮೆರಿಕ ಮಾಹಿತಿ ನೀಡಿದೆ. ಅದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಏಕೆಂದರೆ ಅದು ನಮ್ಮ ದೇಶದ ಏಕತೆ, ಭದ್ರತೆಗೆ ಧಕ್ಕೆಯಾಗುವ ಅಂಶ ಎಂದು ಹೇಳಿದ್ದಾರೆ. ಕೆನಡಾದಲ್ಲಿ ಸಕ್ರಿಯವಾಗಿರುವ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಅಮೃತಸರ ಮೂಲದವನು. ಅಮೆರಿಕ ಪ್ರಜೆಯಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.