Belagavi; ಪ್ರತಿಭಟನೆಗೆ ಬಳಸುವ ರೈತರ ಜಮೀನು ಬಾಡಿಗೆ ಹೆಚ್ಚಳ
Team Udayavani, Nov 30, 2023, 1:19 PM IST
ಬೆಳಗಾವಿ: ವಿಧಾನ ಮಂಡಳದ ಅಧಿವೇಶನದ ಸಂದರ್ಭದಲ್ಲಿ ನಡೆಯಲಿರುವ ವಿವಿಧ ಪ್ರತಿಭಟನೆಗಳಿಗೆ ಬಳಸಲಾಗುವ ರೈತರ ಜಮೀನಿನ ಬಾಡಿಗೆಯನ್ನು ಹೆಚ್ಚಳ ಮಾಡಲಾಗಿದೆ.
ರೈತರ ಮನವಿಯ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಕಳೆದ ವರ್ಷ ಪ್ರತಿಭಟನೆಯ ಟೆಂಟ್ ನಿರ್ಮಾಣಕ್ಕೆ ಬಳಸಲಾಗಿದ್ದ ರೈತರ ಜಮೀನಿಗೆ ಪ್ರತಿ ಗುಂಟೆಗೆ 1200 ರೂ ನೀಡಲಾಗಿತ್ತು. ಈ ಜಮೀನಿನಲ್ಲಿ ಯಾವುದೇ ಫಸಲು ಬೆಳೆದಿರಲಿಲ್ಲ.
ಈ ಬಾರಿ ಹಲಗಾ ಗ್ರಾಮದ ರೈತರ 3.28 ಎಕರೆ ಜಮೀನನ್ನು ಪ್ರತಿಭಟನಾ ಪೆಂಡಾಲ್ ಗಳಿಗಾಗಿ ಬಳಸಲಾಗುತ್ತಿದೆ. ಈ ಜಮೀನಿನಲ್ಲಿ ರೈತರು ಫಸಲು ಬೆಳೆದಿದ್ದರಿಂದ ಪ್ರತಿ ಗುಂಟೆಗೆ ರೂ. 3,000 ನೀಡುವಂತೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದ್ದರು.
ಸಚಿವರ ಸೂಚನೆಯಂತೆ ರೈತರಿಗೆ ಪ್ರತಿ ಗುಂಟೆಗೆ 3000 ರೂ ದರ ನೀಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಉಪ ವಿಭಾಗಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.