Kottigehara; ಸಂಪರ್ಕ ಕಡಿತದ ಭೀತಿಯಲ್ಲಿ ಬಣಕಲ್ ದೇವರಮನೆ ರಸ್ತೆ
Team Udayavani, Nov 30, 2023, 8:58 PM IST
ಕೊಟ್ಟಿಗೆಹಾರ: ಬಣಕಲ್ ಗ್ರಾಮ ಹಾಗೂ ದೇವರಮನೆಗೆ ಸಾಗುವ ರಸ್ತೆಯಲ್ಲಿ ಸೇತುವೆ ಶಿಥಿಲಗೊಂಡಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಬಣಕಲ್ ಗ್ರಾಮ ದೇವರಮನೆ ಕೋಗಿಲೆ ಕೋಡೆಬೈಲ್ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಬಣಕಲ್ ದೇವರಮನೆ ರಸ್ತೆಯು ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ ರಾಷ್ಟ್ರೀಯ ಹೆದ್ದಾರಿಗೆ ಬಣಕಲ್ ಗ್ರಾಮದಿಂದ ಸಂಪರ್ಕಿಸುವ ಸೇತುವೆಯ ಮಧ್ಯಭಾಗದಲ್ಲಿ ಕುಸಿತವಾಗಿದ್ದು ಅಪಘಾತಕ್ಕೆ ಆಹ್ವಾನ ನೀಡುವಂತಾಗಿದೆ ದೇವರ ಮನೆಯು ಧಾರ್ಮಿಕ ಹಾಗೂ ಪ್ರವಾಸಿ ತಾಣವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ.
ಭಾರೀ ಹಳೆಯ ಸೇತುವೆ ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ. ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ.ಈ ರಸ್ತೆಯಲ್ಲಿ ಸರಕು ತುಂಬಿದ ವಾಹನಗಳು, ಪ್ರವಾಸಿಗರ ವಾಹನಗಳು ತಿರುಗುತ್ತಿರುವುದರಿಂದ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಈ ರಸ್ತೆ ದೇವರಮನೆ ದೇವಸ್ಥಾನಕ್ಕೆ ತೆರಳುವ ಪ್ರಮುಖ ರಸ್ತೆಯಾಗಿದ್ದು ಪ್ರವಾಸಿಗರ ವಾಹನಗಳು ಮಂಜು ಕವಿದ ವಾತಾವರಣ ಇರುವುದರಿಂದ ಇಲ್ಲಿ ಅಪಘಾತ ಸಂಭವಿಸಿ ಪ್ರಾಣಹಾನಿಯಾಗುವ ಸಾಧ್ಯತೆಗಳಿವೆ.
ಈಗ ಈ ರಸ್ತೆಗೆ ಕಾಮಗಾರಿಗೆ ಅನುದಾನ ಬರುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಿ ಈ ಸೇತುವೆ ಮೇಲೆ ಸಂಚಾರ ಸ್ಥಗಿತಗೊಳಿಸುವುದರಿಂದ ಸಂಪರ್ಕ ಸೇತುವೆ ಉಳಿಯಲಿದೆ.ಹಾಗೂ ಈ ರಸ್ತೆಯಲ್ಲಿ ಘನ ಹಾಗೂ ಟೆಂಪೊ, ಮಿನಿ ಬಸ್ ಸಂಚಾರ ಸ್ಥಗಿತಗೊಳಿಸಿ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಬೇಕು. ಕೆಲವು ದಿನದ ಹಿಂದೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ.ಆದರೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೂತನ ಸೇತುವೆ ಆಗುವವರೆಗೂ ತಾತ್ಕಾಲಿಕ ರಸ್ತೆ ನಿರ್ಮಿಸಬೇಕೆಂದು ಮುಖಂಡ ಬಿಎಸ್ ವಿಕ್ರಂ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.