CID: ಭ್ರೂಣಪತ್ತೆ ಪ್ರಕರಣ ಸಿಐಡಿ ತನಿಖೆ ಸೂಕ್ತ: ಚಲುವರಾಯಸ್ವಾಮಿ
ಪ್ರಕರಣ ಮಂಡ್ಯಕ್ಕೆ ಮಾತ್ರ ಸೀಮಿತವಾಗಿಲ್ಲ. ನಾಲ್ಕೈದು ಜಿಲ್ಲೆಗಳಿಗೆ ಆವರಿಸಿದೆ
Team Udayavani, Nov 30, 2023, 10:04 PM IST
ಮಂಡ್ಯ: ಭ್ರೂಣ ಪತ್ತೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುವುದು ಸೂಕ್ತವಾಗಿದ್ದು, ಇದರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.
ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಕರಣಕ್ಕೆ ಸಂಬಂಧಿ ಸಿದಂತೆ ಅ ಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖಾ ಹಂತದಲ್ಲಿದೆ. ಪ್ರಕರಣ ಮಂಡ್ಯಕ್ಕೆ ಸೀಮಿತವಾಗಿಲ್ಲ. ಇದು ನಾಲ್ಕೆçದು ಜಿಲ್ಲೆಗಳಿಗೆ ಆವರಿಸಿದೆ ಎಂದರು.
ಆರೋಪಿಗಳು ಸ್ಕ್ಯಾನಿಂಗ್‌ಗೆ ಪರ್ಮನೆಂಟ್ ಪ್ಲೇಸ್ ಹೊಂದಿರಲಿಲ್ಲ. ಟೂರಿಂಗ್ ಇಸ್ಪೀಟ್ ತರಹ, ಇವರು ಸ್ಕ್ಯಾನಿಂಗ್ ಜಾಗ ಬದಲಾಯಿಸುತ್ತಿದ್ದರು. ಮೈಸೂರಿನ ಮಾತಾ ಆಸ್ಪತ್ರೆಯಲ್ಲಿ ಆಪರೇಷನ್ ನಡೆಯುತ್ತಿತ್ತು. ಮಂಡ್ಯದ ಯಾವುದೇ ಆಸ್ಪತ್ರೆಯಲ್ಲಿ ಅಬಾರ್ಶನ್ ಆಗಿಲ್ಲ ಎಂಬ ಮಾಹಿತಿ ಇದೆ. ಹಾಡ್ಯ ಗ್ರಾಮದ ಆಲೆಮನೆಯಲ್ಲಿ ಸ್ಕ್ಯಾನಿಂಗ್‌ಗೆ ಸಂಬಂಧಪಟ್ಟ ಕುರುಹು ಸಿಕ್ಕಿಲ್ಲ. ರೆಗ್ಯೂಲರ್ ಆಕ್ಟಿವಿಟಿ ಸ್ಥಳೀಯರು ಕೂಡ ಅಧಿ ಕಾರಿಗಳಿಗೆ ಮಾಹಿತಿ ಕೊಟ್ಟಿಲ್ಲ ಎಂದು ತಿಳಿಸಿದರು.
ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲಿ: ನಾಗಣ್ಣಗೌಡ
ಮಂಡ್ಯ: ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುವ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿದ್ದು, ಸಮಗ್ರ ತನಿಖೆ ನಡೆಸಿ ಇದರ ಮೂಲಪತ್ತೆ ಹಚ್ಚಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು. ಭ್ರೂಣಪತ್ತೆಯ ಕೇಂದ್ರ ಬಿಂದುವಾಗಿರುವ ತಾಲೂಕಿನ ಹಾಡ್ಯ ಗ್ರಾಮದ ಬಳಿ ಇರುವ ಆಲೆಮನೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಉನ್ನತಮಟ್ಟದ ತನಿಖೆ ನಡೆಸುವ ಮೂಲಕ ಆರೋಪಿಗಳನ್ನು ಪತ್ತೆ ಹಚ್ಚಬೇಕು. ಇದರ ಹಿಂದೆ ಇರುವ ಜಾಲವನ್ನು ಭೇದಿಸಬೇಕು. ಆರೋಗ್ಯ ಇಲಾಖೆ ಮುನ್ನಚ್ಚರಿಕೆ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸುತ್ತಲಿನ ಪ್ರದೇಶದಲ್ಲಿ ಯಾವ್ಯಾವ ಚಟುವಟಿಕೆ ನಡೆಯುತ್ತಿದೆ ಎಂಬುದರ ಬಗ್ಗೆ ಗಮನಹರಿಸಬೇಕು ಎಂದು ಸಲಹೆ ನೀಡಿದರು.
ಗೃಹ ಸಚಿವರಿಗೆ ಪತ್ರ ಬರೆದ ಶಾಸಕ
ಮಂಡ್ಯ: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ ಕುರಿತಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಪತ್ರ ಬರೆದಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಕರಣದ ತನಿಖೆ ಸಂಬಂಧ ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂ ಧಿಸಿದಂತೆ ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಒತ್ತಾಯಿಸಿರುವ ಅವರು, ಸ್ಥಳೀಯ ಅ ಧಿಕಾರಿಗಳ ಸಹಕಾರವಿಲ್ಲದೇ ಈ ಕೃತ್ಯ ನಡೆಯಲು ಸಾಧ್ಯವಿಲ್ಲ. ಗರ್ಭವತಿಯಾದ ಮಹಿಳೆಯರ ಪ್ರಾಥಮಿಕ ಮಾಹಿತಿ ಆಶಾ ಕಾರ್ಯಕರ್ತೆ ಮತ್ತು ತಾಲೂಕು ಅ ಧಿಕಾರಿಗಳಿಗೆ ಇರುವುದಿಲ್ಲವೇ ಎಂದು ಪ್ರಶ್ನಿಸಿ ಪತ್ರದಲ್ಲಿ ಉಲ್ಲೇಖೀಸಿದ್ದಾರೆ.
ಮೈಸೂರು-ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಮಕ್ಕಳ ಮಾರಾಟ ಪ್ರಕರಣ ಅತ್ಯಂತ ಹೇಯ, ಅಮಾನವೀಯ ಹಾಗೂ ಅಕ್ಷಮ್ಯ ಅಪರಾಧ. ಇಂಥ ಹೀನಾಯ ಕೃತ್ಯದಲ್ಲಿ ವೈದ್ಯರು, ಶಾಮೀಲಾದವರು ಯಾರೇ ಇದ್ದರೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ನಾಗರಿಕ ಸಮಾಜ ತಲೆ ತಗ್ಗಿಸುವಂಥ ಕೃತ್ಯವೆಸಗಿದವರು ಯಾರೇ ಇದ್ದರೂ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ.
-ಎಂ.ಬಿ.ಪಾಟೀಲ, ಕೈಗಾರಿಕಾ ಸಚಿವ
ಆರೋಗ್ಯ ಸಚಿವರಿಂದ ಪರಿಶೀಲನೆ
ಮಂಡ್ಯ: ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ 900ಕ್ಕೂ ಹೆಚ್ಚು ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆಯಂಥ ಘಟನೆಗಳು ಕ್ರೂರವಾಗಿದ್ದು, ಇಂತಹ ಜಾಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ ಎಂದರು.
ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಜೊತೆಯಲ್ಲಿ ಕೆಲಸ ಮಾಡಬೇಕು. ಇದಕ್ಕೆ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಿ ಕೆಲಸ ಮಾಡಿಲ್ಲ. ಇದನ್ನು ನೋಡಿದರೆ ಅಧಿಕಾರಿಗಳ ಬೇಜವಾಬ್ದಾರಿ ಕಾಣುತ್ತದೆ. ಈ ಬಗ್ಗೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ಕ್ರಮ ವಹಿಸಲು ಹೊಸ ಕಾರ್ಯಕ್ರಮ ರೂಪಿಸುತ್ತೇವೆ. ಈ ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ಮಾಡಲು ಒತ್ತಾಯಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.