Udupi, ದಕ್ಷಿಣ ಕನ್ನಡದಲ್ಲಿ ಕನಕದಾಸ ಜಯಂತಿ

Team Udayavani, Nov 30, 2023, 11:52 PM IST

kanaka jayanthi

ಕನಕದಾಸರ ಚಿಂತನೆ ಪಸರಿಸೋಣ: ಶೋಭಾ
ಉಡುಪಿ: ಕನಕದಾಸರ ಮಾರ್ಗದಲ್ಲಿ ಸಾಗಿದರೆ ಸಮಾಜದಲ್ಲಿ ಶಾಂತಿ, ಪ್ರೀತಿ ಸಿಗಲು ಸಾಧ್ಯವಿದೆ. ಅವರು ನಮಗೆಲ್ಲ ಮಾರ್ಗದರ್ಶಕರು. ಕನಕದಾಸರಿಗೂ ಉಡುಪಿಗೂ ಅವಿನಾಭವ ಸಂಬಂಧವಿದೆ. ಶ್ರೀ ಕೃಷ್ಣನೇ ಕನಕದಾಸನ ಕಡೆಗೆ ತಿರುಗಿರುವುದಕ್ಕೆ ಕನಕನ ಕಿಂಡಿಯೇ ಸಾಕ್ಷಿ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ, ಹಾಲುಮತ ಮಹಾಸಭಾದ ಸಹಯೋಗದೊಂದಿಗೆ ಗೋವಿಂದ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಕನಕದಾಸ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆದಿಕೇಶವನನ್ನು ಮೆಚ್ಚಿಸಲು ಹಾಡುಗಳ ಮೂಲಕ ಹರಿದಾಸ ಚಳವಳಿಗೆ ಶಕ್ತಿ ತುಂಬಿದ ದೊಡ್ಡ ಭಕ್ತ ಕನಕದಾಸರು. ನಾಡಿನಾದ್ಯಂತ ಸಂಚರಿಸಿ ಶಿಕ್ಷಣ ಇಲ್ಲದ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಅವರು ಮಾಡಿದ್ದರು. ಆಸ್ತಿ-ಅಂತಸ್ತು ಇಲ್ಲದೆ ತುಳಿತಕ್ಕೊಳಗಾದ ವ್ಯಕ್ತಿ ಇಂದು ಪೂಜೆಗೆ ಅರ್ಹರಾಗಿ¨ªಾರೆ. ಅವರ ಚಿಂತನೆಗಳನ್ನು ಪಸರಿಸುವ ಕೆಲಸವಾಗಬೇಕು ಎಂದರು.

ಶಾಸಕರಾದ ಯಶ್‌ಪಾಲ್‌ ಎ. ಸುವರ್ಣ, ಗುರ್ಮೆ ಸುರೇಶ್‌ ಶೆಟ್ಟಿ, ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ., ಜಿ.ಪಂ. ಸಿಇಒ ಪ್ರಸನ್ನ ಎಚ್‌., ಕನಕದಾಸ ಸಮಾಜ ಸಂಘದ ಜಿಲ್ಲಾಧ್ಯಕ್ಷ ಹನುಮಂತ ಡೊಳ್ಳಿನ, ಹಾಲುಮತ ಮಹಾಸಭಾದ ಜಿಲ್ಲಾಧ್ಯಕ್ಷ ಸಿದ್ದಪ್ಪ ಎಚ್‌. ಐಹೊಳೆ, ಸ.ಪ.ಪೂ. ಕಾಲೇಜಿನ ಹಿರಿಯ ಉಪನ್ಯಾಸಕಿ ಡಾ| ಸುಮಾ ಎಸ್‌. ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಪ್ರದೀಪ್‌ ಹಾವಂಜೆ ವಂದಿಸಿದರು.

ಬದಲಾವಣೆಯ ಹರಿಕಾರ: ಮುಲ್ಲೈ ಮುಗಿಲನ್‌

ಮಂಗಳೂರು: ಕನಕದಾಸರು ಬದಲಾವಣೆಯ ಹರಿಕಾರ. ಯೋಧನಾಗಿದ್ದ ಅವರು ದಾಸರಾಗಿ ಬದಲಾಗಿ ಸಮಾನತೆಯ ಸಂದೇಶ ನೀಡಿದರು. ಇಂದಿನ ಸಮಾಜ ಕನಕ ದಾಸರ ಜೀವನಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಆತ್ಮಾವಲೋಕನ ಮಾಡಿಕೊಂಡು ಸಮಾನತೆಯನ್ನು ಸಾರುವ ವ್ಯಕ್ತಿಗಳಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌ ಹೇಳಿದರು.

ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಗುರುವಾರ ಉರ್ವಸ್ಟೋರ್‌ನ ತುಳುಭವನದಲ್ಲಿ ನಡೆದ ಕನಕ ಜಯಂತಿ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು.

ಕನಕದಾಸರು ಸಮಾನತೆಯೊಂದಿಗೆ ಸ್ವಾಭಿಮಾನ ತೋರಿಸಿಕೊಟ್ಟಿದ್ದಾರೆ. ಕುಲವನ್ನು ಮುಂದಿಟ್ಟು ಹೊಡೆದಾಡದೆ, ದಾಸನ ಬದುಕು ಸ್ವೀಕರಿಸಿ ಸಮಾಜದ ಏರುಪೇರುಗಳನ್ನು ಸಮಾನತೆಗೆ ಪರಿವರ್ತಿಸಿದ ವ್ಯಕ್ತಿತ್ವ ಕನಕದಾಸರದ್ದು ಎಂದರು.

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಹಾಗೂ ಚಿಂತಕ ಅರವಿಂದ ಚೊಕ್ಕಾಡಿ ಮಾತನಾಡಿ, ಕನಕದಾಸರ ಭಕ್ತಿ ಮಾರ್ಗ ಜನರನ್ನು ತಲುಪಿದ್ದು, ಆರಾಧನಾ ಮಾನೋಭಾವ ಬೆಳೆಯಿತು. ಕನಕದಾಸರು ದಾಸನಾಗಿ ಉಳಿಯದೆ ಭವ್ಯ ಭವಿಷ್ಯ ತೋರಿಸಿದರು. ವಾದದ ಮೂಲಕ ಸುಸಂಸ್ಕೃತಿಯಿಂದ ಎದುರಾಳಿಯನ್ನು ಗೆಲ್ಲಬೇಕು ಎಂಬುವುದನ್ನು ದಾಸರು ತಿಳಿಸಿದ್ದಾರೆ ಎಂದು ಹೇಳಿದರು.

ಜಿ.ಪಂ. ಸಿಇಒ ಡಾ| ಆನಂದ್‌ ಕೆ., ಕರಾವಳಿ ಕುರುಬರ ಸಂಘದ ಅಧ್ಯಕ್ಷ ಕೆ.ಎಸ್‌. ಬಸವರಾಜಪ್ಪ, ಹಾಲುಮತ ಮಹಾಸಭಾ ಅಧ್ಯಕ್ಷ ಬಸವರಾಜ ಬಿ. ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್‌ ಜಿ. ಸ್ವಾಗತಿಸಿ, ವಂದಿಸಿದರು. ವಾರುಣಿ ನಾಗರಾಜ್‌ ಮಂಗಳಾದೇವಿ ನಿರೂಪಿಸಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.