ಬಾಂಬ್ ಬೆದರಿಕೆಯ ಮೂಲ ಪತ್ತೆ ಹಚ್ಚುವವರೆಗೂ ಬಿಡುವ ಪ್ರಶ್ನೆ ಇಲ್ಲ: ಗೃಹ ಸಚಿವ ಪರಮೇಶ್ವರ್
Team Udayavani, Dec 1, 2023, 11:20 AM IST
ಬೆಂಗಳೂರು: ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಮೂಲವನ್ನು ಪತ್ತೆ ಹಚ್ಚುವವರೆಗೂ ಪ್ರಕರಣವನ್ನು ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಶಾಲೆಗಳಲ್ಲಿ ಬಾಂಬ್ ಬೆದರಿಕೆ ಪ್ರಕರಣದ ಕುರಿತು ಗೃಹ ಸಚಿವರಾದ ಡಾ. ಜಿ.ಪರಮೇಶ್ವರ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ.ದಯಾನಂದ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದುಕೊಂಡರು.
ಅಲ್ಲದೆ ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಅಧಿಕಾರಿ ಮತ್ತು ಸಿಬ್ಬಂದಿ ಹಾಗೂ ಎಲ್ಲ ಸ್ಕ್ವೈಡ್ಗಳನ್ನು ಕಳುಹಿಸಿ ತಪಾಸಣೆ ನಡೆಸಬೇಕು. ಕಟ್ಟೆಚ್ಚರಿಕೆ ವಹಿಸುವಂತೆ ನಿರ್ದೇಶಿಸಿದರು.
ಬೆದರಿಕೆ ಬಂದಿರುವ 15 ಶಾಲೆಗಳಲ್ಲಿಯೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸಲಿದ್ದಾರೆ. ಕಳೆದ ವರ್ಷವು ಇದೇ ರೀತಿ ಕರೆ ಬಂದಿತ್ತು ಎನ್ನಲಾಗುತ್ತಿದೆ. ಪ್ರಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಿದರು. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಾಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮಕ್ಕಳು ಆತಂಕಪಡುವುದು ಬೇಡ ಎಂದು ಹೇಳಿದ್ದಾರೆ.
ಇದನ್ನೂ ಓದಿ: Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ 15ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.