Raipur; ಭಾರತ – ಆಸೀಸ್ ಟಿ20 ಪಂದ್ಯ ನಡೆಯುವ ಸ್ಟೇಡಿಯಂನಲ್ಲಿಲ್ಲ ವಿದ್ಯುತ್ ವ್ಯವಸ್ಥೆ!


Team Udayavani, Dec 1, 2023, 2:14 PM IST

raipur

ರಾಯ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯವು ಇಂದು ರಾಯ್ಪುರದಲ್ಲಿ ನಡೆಯಲಿದೆ. ಈಗಾಗಲೇ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ ಇಂದಿನ ಪಂದ್ಯ ಗೆದ್ದು ಸರಣಿ ವಶಪಡಿಸಕೊಳ್ಳುವ ಇರಾದೆಯಲ್ಲಿದೆ. ಇದೇ ವೇಳೆ ಕಳೆದ ಪಂದ್ಯ ಗೆದ್ದ ಆಸೀಸ್ ಸರಣಿ ಉಳಿಸಿಕೊಳ್ಳುವ ಯೋಜನೆಯಲ್ಲಿದೆ.

ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಕ್ರೀಡಾಂಗಣದಲ್ಲಿ ಇಂದಿನ ಪಂದ್ಯ ನಡೆಯಲಿದೆ. ಆದರೆ ನಿರ್ಣಾಯಕ ಪಂದ್ಯಕ್ಕೆ ಕೆಲವೇ ಗಂಟೆಗಳಿರುವಾಗ, ಕ್ರೀಡಾಂಗಣದ ಕೆಲವು ಭಾಗಗಳಲ್ಲಿ ವಿದ್ಯುತ್ ವ್ಯವಸ್ಥೆಯಿಲ್ಲ. ಇದಕ್ಕೆ ಕಾರಣ 2009 ರಿಂದ ವಿದ್ಯುತ್ ಬಿಲ್ ಪಾವತಿಸಲೇ ಇಲ್ಲ.

ಕ್ರೀಡಾಂಗಣಕ್ಕೆ ₹ 3.16 ಕೋಟಿ ಬಿಲ್ ಬಾಕಿ ಇದ್ದು, 5 ವರ್ಷಗಳ ಹಿಂದೆಯೇ ಕ್ರೀಡಾಂಗಣದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಛತ್ತೀಸ್‌ಗಢ ರಾಜ್ಯ ಕ್ರಿಕೆಟ್ ಸಂಸ್ಥೆಯ ಕೋರಿಕೆಯ ಮೇರೆಗೆ ತಾತ್ಕಾಲಿಕ ಸಂಪರ್ಕವನ್ನು ಸ್ಥಾಪಿಸಲಾಗಿದೆ, ಆದರೆ ಅದು ಪ್ರೇಕ್ಷಕರ ಗ್ಯಾಲರಿ ಮತ್ತು ಬಾಕ್ಸ್‌ಗಳನ್ನು ಮಾತ್ರ ಒಳಗೊಂಡಿದೆ. ಇಂದಿನ ಪಂದ್ಯದ ವೇಳೆ ಫ್ಲಡ್‌ ಲೈಟ್‌ ಗಳನ್ನು ಜನರೇಟರ್ ಬಳಸಿ ಉರಿಸಬೇಕಾಗುತ್ತದೆ.

ಇದನ್ನೂ ಓದಿ:ಜೈ ಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಮುಸ್ಲಿಂ ವೃದ್ಧನ ಮೇಲೆ ದೌರ್ಜನ್ಯ… ಪ್ರಕರಣ ದಾಖಲು

ಸ್ಟೇಡಿಯಂನ ತಾತ್ಕಾಲಿಕ ಸಂಪರ್ಕದ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಿಕೆಟ್ ಸಂಸ್ಥೆಯು ಅರ್ಜಿ ಸಲ್ಲಿಸಿದೆ ಎಂದು ರಾಯ್ಪುರ ಗ್ರಾಮಾಂತರ ವೃತ್ತದ ಉಸ್ತುವಾರಿ ಅಶೋಕ್ ಖಂಡೇಲ್‌ವಾಲ್ ಹೇಳಿದ್ದಾರೆ.

2018ರಲ್ಲಿ ಹಾಫ್ ಮ್ಯಾರಥಾನ್‌ ನಲ್ಲಿ ಭಾಗವಹಿಸಿದ್ದ ಅಥ್ಲೀಟ್‌ಗಳು ಸ್ಟೇಡಿಯಂನಲ್ಲಿ ವಿದ್ಯುತ್ ಪೂರೈಕೆ ಇಲ್ಲ ಎಂದು ತಿಳಿದಾಗ ಗಲಾಟೆ ಉಂಟಾಗಿತ್ತು. ನಂತರ 2009 ರಿಂದ ವಿದ್ಯುತ್ ಬಿಲ್ ಪಾವತಿಸಿಲ್ಲ ಅದು 3.16 ಕೋಟಿಗೆ ಏರಿದೆ ಎಂದು ಘೋಷಿಸಲಾಯಿತು.

ಕ್ರೀಡಾಂಗಣದ ನಿರ್ಮಾಣದ ನಂತರ, ಅದರ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆಗೆ (ಪಿಡಬ್ಲ್ಯೂಡಿ) ಹಸ್ತಾಂತರಿಸಲಾಯಿತು, ಉಳಿದ ವೆಚ್ಚವನ್ನು ಕ್ರೀಡಾ ಇಲಾಖೆ ಭರಿಸಬೇಕಾಗಿತ್ತು. ಎರಡು ಇಲಾಖೆಗಳು ವಿದ್ಯುತ್ ಬಿಲ್ ಪಾವತಿಯಾಗದೆ ಪರಸ್ಪರ ಆರೋಪ ಮಾಡುತ್ತಿವೆ.

ಟಾಪ್ ನ್ಯೂಸ್

Salman Khan’s ex Somy Ali spoke about Sushant Singh Rajput’s demise

Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!

Not supporting Raj Thackeray’s son Amit Thackeray: BJP U Turn!

Maha Polls; ರಾಜ್‌ ಠಾಕ್ರೆ ಪುತ್ರ ಅಮಿತ್‌ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

MP: Flies helped the police to arrest the murder accused!

MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!

VIjayendra

Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ

Ranji trophy: ಕರ್ನಾಟಕ-ಬಂಗಾಲ ಸೆಣಸಾಟ

Ranji trophy: ಕರ್ನಾಟಕ-ಬಂಗಾಲ ಸೆಣಸಾಟ

Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ

Mangaluru: ಎಂಟು ಹೊಸ ರೂಟ್‌ಗಳಲ್ಲಿ ಪರವಾನಿಗೆಗೆ ಪ್ರಸ್ತಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji trophy: ಕರ್ನಾಟಕ-ಬಂಗಾಲ ಸೆಣಸಾಟ

Ranji trophy: ಕರ್ನಾಟಕ-ಬಂಗಾಲ ಸೆಣಸಾಟ

PKL 11: Panthers won against Yoddhas

PKL 11: ಯೋಧಾಸ್‌ ವಿರುದ್ಧ ಗೆದ್ದ ಪ್ಯಾಂಥರ್

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Salman Khan’s ex Somy Ali spoke about Sushant Singh Rajput’s demise

Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!

Not supporting Raj Thackeray’s son Amit Thackeray: BJP U Turn!

Maha Polls; ರಾಜ್‌ ಠಾಕ್ರೆ ಪುತ್ರ ಅಮಿತ್‌ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ

MP: Flies helped the police to arrest the murder accused!

MP: ಕೊಲೆ ಆರೋಪಿ ಬಂಧನಕ್ಕೆ ಪೊಲೀಸರಿಗೆ ನೆರವಾದ ನೊಣಗಳು!

Europe’s Proba-3 will be launched in India next month

ISRO: ಮುಂದಿನ ತಿಂಗಳು ಯುರೋಪ್‌ನ ಪ್ರೋಬಾ-3 ಭಾರತದಲ್ಲಿ ಉಡಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.