Udupi ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ್ ಡಿ. 5ರಿಂದ ನವೀಕರಣ
Team Udayavani, Dec 2, 2023, 12:26 AM IST
ಮಲ್ಪೆ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಸಹಯೋಗ, ಮಾಹೆ ವಿಶ್ವವಿದ್ಯಾನಿಲಯದ ಸಹಕಾರದೊಂದಿಗೆ ಜಿ. ಶಂಕರ್ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಮತ್ತು ಹೊಸ ಕಾರ್ಡುಗಳ ನೋಂದಣಿ ಡಿ. 5ರಂದು ಆರಂಭವಾಗಲಿದೆ. ಮಣಿಪಾಲ ಸಮೂಹ ಆಸ್ಪತ್ರೆಗಳಿಗೆ ಮಾತ್ರ ಈ ಯೋಜನೆ ಸೀಮಿತವಾಗಿದ್ದು ಕಡಿಮೆ ವರಮಾನವಿರುವ ಕುಟುಂಬಗಳಿಗೆ ಈ ಯೋಜನೆ ವರದಾನವಾಗಲಿದೆ.
ಹೊರರೋಗಿ ವಿಭಾಗದ ವೈದ್ಯಕೀಯ ಚಿಕಿತ್ಸೆಯಲ್ಲಿ ಮಣಿಪಾಲ ಆಸ್ಪತ್ರೆಯ ಶೇ. 50, ಉಡುಪಿ ಟಿಎಂಎ ಪೈ ಆಸ್ಪತ್ರೆಯಲ್ಲಿ ಶೇ. 20, ಮಂಗಳೂರು ಅತ್ತವರ ಆಸ್ಪತ್ರೆಯಲ್ಲಿ ಶೇ. 50, ಮಂಗಳೂರು ಅಂಬೇಡ್ಕರ್ ಸರ್ಕಲ್ ಕೆಎಂಸಿ ಆಸ್ಪತ್ರೆಯಲ್ಲಿ ಶೇ. 25, ಕಾರ್ಕಳ ಡಾ| ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಶೇ. 20, ಕಟೀಲು ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆಯಲ್ಲಿ ಶೇ. 50 ರಿಯಾಯಿತಿ ಇರುತ್ತದೆ. ಆರೋಗ್ಯ ಸುರûಾ ಕಾರ್ಡಿನ ಸದಸ್ಯನು ಒಳರೋಗಿಯಾಗಿ ದಾಖಲಾದಲ್ಲಿ ಯಾವುದೇ ನಿರ್ಬಂಧವಿಲ್ಲದೆ ಶೇ. 35 ರಿಯಾಯಿತಿ ಪಡೆಯುವ ಸೌಲಭ್ಯ ಈ ಕಾರ್ಡಿನಲ್ಲಿರುತ್ತದೆ.
ನೋಂದಣಿಗೆ ಒಳಪಡುವ ಎಲ್ಲ ಸದಸ್ಯರ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಡಿ. 5ರಿಂದ 25ರೊಳಗಾಗಿ ಮೊಗವೀರ ಯುವ ಸಂಘಟನೆಯ ಜಿಲ್ಲಾ ಕಚೇರಿ, ಮಾಧವ ಮಂಗಲ ಸಮುದಾಯ ಭವನ, ಶ್ಯಾಮಿಲಿ ಸಭಾಂಗಣದ ಎದುರು, ಅಂಬಲಪಾಡಿ, ಉಡುಪಿ ಅಥವಾ ಮೊಗವೀರ ಯುವ ಸಂಘಟನೆಯ ವಿವಿಧ ಘಟಕಗಳನ್ನು ಸಂಪರ್ಕಿಸಿ ಈ ಯೋಜನೆಯನ್ನು ನೋಂದಾಯಿಸಬಹುದಾಗಿದೆ.
ಒಂದು ಕುಟುಂಬ ಅಥವಾ ಕುಟುಂಬದ ಸದಸ್ಯರು ಯಾವುದೇ ಒಂದು ಘಟಕದಲ್ಲಿ ರಿಯಾಯಿತಿ ಸೌಲಭ್ಯ ಯೋಜನೆಯನ್ನು ನೋಂದಾಯಿಸಿ ಕೊಳ್ಳಬಹುದು. ಒಂದಕ್ಕಿಂತ ಹೆಚ್ಚು ಘಟಕಗಳಲ್ಲಿ ನೋಂದಾಯಿಸಿಕೊಂಡರೆ ಅಂತಹ ವ್ಯಕ್ತಿಯ ಅಥವಾ ಕುಟುಂಬದ ರಿಯಾಯಿತಿ ಸೌಲಭ್ಯ ಯೋಜನೆಯ ಸದಸ್ಯತ್ವವನ್ನು ರದ್ದು ಪಡಿಸಲಾಗುವುದು ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ಸುವರ್ಣ ಹಿರಿಯಡ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.