Politics: ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ
ಚರ್ಚೆಗೆ ಬರ ಬಾರದಿರಲಿ ಜನಪರ ಸಮಸ್ಯೆಗಳ ಕುರಿತು ಪ್ರಸ್ತಾವವಾಗಲಿ
Team Udayavani, Dec 3, 2023, 12:17 AM IST
ಬೆಂಗಳೂರು: ಸೋಮವಾರ ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ ಆರಂಭವಾಗಲಿದೆ. ಇಡೀ ಆಡಳಿತ ವ್ಯವಸ್ಥೆ ಬೆಳಗಾವಿಯಲ್ಲಿ ಮೊಕ್ಕಾಂ ಹೂಡಿದ್ದು, ಸರಕಾರವನ್ನು ಬರಮಾಡಿಕೊಳ್ಳಲು ಸಜ್ಜಾಗಿದೆ.
ಎರಡು ವಾರಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನ ಹಲವು ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ಜತೆಗೆ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಬೆಳಗಾವಿಯದು ಈ ಸಲದ ಮೊದಲ ಅಧಿವೇಶನ. ಅದೇ ರೀತಿ ವಿಪಕ್ಷ ನಾಯಕರಾಗಿರುವ ಆರ್. ಅಶೋಕ್ ಅವರಿಗೂ ಹೊಸ ಜವಾಬ್ದಾರಿ ದೊರೆತ ಬಳಿಕ ಇದು ಮೊದಲ ಅಧಿವೇಶನ. ಸರಕಾರಕ್ಕೆ ಒಂದು ರೀತಿ ಪ್ರತಿಷ್ಠೆಯಾಗಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ವಿಪಕ್ಷಕ್ಕೆ ಸರಕಾರದ ವಿರುದ್ಧ ಹೋರಾಡುವ ದೊಡ್ಡ ಸವಾಲು ಇದೆ.
ಅಧಿವೇಶನದ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹಾಗೂ ವಿಪಕ್ಷಗಳು ಸಾಕಷ್ಟು ತಯಾರಿ ಮಾಡಿಕೊಂಡಿವೆ. ಸರಕಾರದ 6 ತಿಂಗಳ ಸಾಧನೆ, ವೈಫಲ್ಯಗಳನ್ನು ಒರೆಗೆ ಹಚ್ಚಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಿದ್ಧತೆ ಮಾಡಿಕೊಂಡಿದ್ದರೆ, ಸರಕಾರ ಪ್ರತಿತಂತ್ರ ರೂಪಿಸುತ್ತಿದೆ. ಹೀಗಾಗಿ ಈ ಬಾರಿಯೂ ಅಧಿ ವೇಶನ ರಾಜಕೀಯ ಮೇಲಾಟಕ್ಕೆ ಸಾಕ್ಷಿಯಾಗುವ ಸಾಧ್ಯತೆಗಳು ಹೆಚ್ಚಿವೆ. ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆ ಹಾಗೂ ರವಿವಾರ ಹೊರಬೀಳಲಿರುವ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಧಿವೇಶನದಲ್ಲಿ ಪ್ರತಿಧ್ವನಿಸುವ ಸಾಧ್ಯತೆಯಿದ್ದು, ಸರಕಾರ-ವಿಪಕ್ಷಗಳ ಹಗ್ಗಜಗ್ಗಾಟದಲ್ಲಿ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿ ಸಹಿತ ಅನೇಕ ಜ್ವಲಂತ ಸಮಸ್ಯೆಗಳ ಮೇಲಿನ ಚರ್ಚೆ ನೇಪಥ್ಯಕ್ಕೆ ಸರಿಯದಿರಲಿ ಎಂಬುದೇ ಆಶಯ.
ಅಸ್ತ್ರ-ಪ್ರತ್ಯಸ್ತ್ರಗಳು
ಬರಗಾಲ, ಕಾವೇರಿ ಜಲ ವಿವಾದ, ಅಭಿವೃದ್ಧಿ ಕೆಲಸಗಳಿಗೆ ಅನುದಾನ ಸ್ಥಗಿತ, ವರ್ಗಾವಣೆ ದಂಧೆ, ಭ್ರಷ್ಟಾಚಾರ (ಗುತ್ತಿಗೆ ದಾರರಿಂದ ಕಮಿಷನ್ ವಸೂಲಿ ಆರೋಪ), ಕಾನೂನು ಮತ್ತು ಸುವ್ಯವಸ್ಥೆ, ಎನ್‌ಇಪಿ-ಎಸ್‌ಇಪಿ ವಿವಾದ ಹಾಗೂ ಸ್ಪೀಕರ್ ಕುರಿತು ಸಚಿವ ಜಮೀರ್ ನೀಡಿದ ಹೇಳಿಕೆ, ವಿಶೇಷವಾಗಿ ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ಪ್ರಕರಣವನ್ನು ಹಿಂತೆಗೆದುಕೊಂಡ ಸಚಿವ ಸಂಪುಟದ ನಿರ್ಣಯ, ಆಡಳಿತ ಪಕ್ಷಕ್ಕೆ ಸೇರಿದ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು ಸಚಿವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಬರೆದಿರುವ ಪತ್ರಗಳು ವಿಪಕ್ಷಗಳ ಹೋರಾಟಕ್ಕೆ ಕೆಲವು ಅಸ್ತ್ರಗಳು.
6 ತಿಂಗಳಲ್ಲಿ ಸರಕಾರದ 60 ತಪ್ಪುಗಳು
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಕೇವಲ ಆರು ತಿಂಗಳಲ್ಲಿ 60 ತಪ್ಪುಗಳನ್ನು ಮಾಡಿದೆ. ಅಧಿವೇಶನದಲ್ಲಿ ಈ ಸಂಬಂಧ ಕಿವಿ ಹಿಂಡುವ ಕಾರ್ಯ ಕೈಗೆತ್ತಿಕೊಳ್ಳುತ್ತೇವೆ ಎಂದು ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು. ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ಪ್ರಾರಂಭದಲ್ಲೇ ವರ್ಗಾವಣೆ ದಂಧೆಯ ಅಂಗಡಿಗಳನ್ನು ತೆರೆದಿದ್ದಾರೆ. ಆಡಳಿತವು ಭ್ರಷ್ಟಾಚಾರದ ಕೂಪವಾಗಿದೆ. ತಮಿಳುನಾಡಿನ ಮಿತ್ರ ಸ್ಟಾಲಿನ್‌ಗೆ ಸಹಾಯ ಮಾಡಲು ಕಾವೇರಿ ವಿಚಾರದಲ್ಲಿ ಕರ್ನಾಟಕದ ಜನರಿಗೆ ಈ ಸರಕಾರ ಮೋಸ ಮಾಡಿದೆ. ಇಂತಹ ಅನೇಕ ವಿಷಯಗಳಲ್ಲಿ ಬಿಜೆಪಿಯ 66 ಶಾಸಕರು ಹಾಗೂ ಜೆಡಿಎಸ್‌ನ 19 ಶಾಸಕರು ಒಂದಾಗಿ ಹೋರಾಟ ಕೈಗೊಳ್ಳುತ್ತೇವೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆದ ಸಂವಿಧಾನವಿರೋಧಿ ಕ್ರಮದ ಕುರಿತು ಪ್ರಶ್ನಿಸುತ್ತೇವೆ ಎಂದರು.
ಎಂ.ಎನ್. ಗುರುಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.