Election result; 4 ರಾಜ್ಯಗಳಲ್ಲಿ 2018ರ ಚುನಾವಣೆ ಫಲಿತಾಂಶ ಹೇಗಿತ್ತು? ಇಲ್ಲಿದೆ ವರದಿ
Team Udayavani, Dec 3, 2023, 1:11 PM IST
ಬೆಂಗಳೂರು: ಛತ್ತೀಸ್ ಗಢ್, ರಾಜಸ್ಥಾನ, ಮಧ್ಯ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಈ ನಾಲ್ಕು ರಾಜ್ಯಗಳಲ್ಲಿ ನವೆಂಬರ್ 7ರಿಂದ 30ರವರೆಗೆ ಮತದಾನ ನಡೆದಿತ್ತು. ಮೂರು ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆದಿದ್ದರೆ, ಛತ್ತೀಸ್ ಗಢ ರಾಜ್ಯದಲ್ಲಿ ಮಾತ್ರ ಎರಡು ಹಂತದಲ್ಲಿ ಮತದಾನವಾಗಿತ್ತು.
ಮುಂಬರುವ ಲೋಕಸಭಾ ಚುನವಣೆಗೆ ಈ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶ ಪ್ರಕಮುಖವಾಗಿದೆ. ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆಯಿದ್ದರೆ, ತೆಲಂಗಾಣದಲ್ಲಿ ಬಿಆರ್ ಎಸ್, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆಯಿದೆ.
ಈ ನಾಲ್ಕು ರಾಜ್ಯಗಳಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಏನಾಗಿತ್ತು? ಯಾವ ರೀತಿಯ ಫಲಿತಾಂಶ ಬಂದಿತ್ತು ಎಂಬ ವರದಿ ಇಲ್ಲಿದೆ.
ರಾಜಸ್ಥಾನ
200 ವಿಧಾನಸಭಾ ಕ್ಷೇತ್ರಗಳ ರಾಜಸ್ಥಾನದಲ್ಲಿ ಕಳೆದ ಚುನಾವಣೆ 2018ರ ಡಿಸೆಂಬರ್ 7ರಂದು ನಡೆದಿತ್ತು. 101 ಮ್ಯಾಜಿಕ್ ನಂಬರ್ ಇರುವ ರಾಜ್ಯದಲ್ಲಿ 100 ಸ್ಥಾನ ಗೆದ್ದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಿಜೆಪಿಯು 73 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್ ಪಿ ಪಕ್ಷದ ಸಹಕಾರದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸಿ, ಅಶೋಕ್ ಗೆಹ್ಲೋಟ್ ಅವರು ಸಿಎಂ ಆಗಿದ್ದರು.
ಛತ್ತೀಸ್ ಗಢ್
90 ಕ್ಷೇತ್ರಗಳ ಛತ್ತೀಸ್ ಗಢ ರಾಜ್ಯದಲ್ಲಿ 2018ರ ನವೆಂಬರ್ 12 ಮತ್ತು 20ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು. 68 ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್ ಭರ್ಜರಿ ವಿಜಯ ಸಾಧಿಸಿದ್ದರೆ, ಆಡಳಿತದಲ್ಲಿದ್ದ ಬಿಜೆಪಿ ಕೇವಲ 15 ಸೀಟು ಪಡೆದು ಮುಖಭಂಗ ಅನುಭವಿಸಿತ್ತು. 15 ವರ್ಷಗಳ ಕಾಲ ವಿಪಕ್ಷದಲ್ಲಿ ಕುಳಿತಿದ್ದ ಕಾಂಗ್ರೆಸ್ ಸರ್ಕಾರ ರಚಿಸಿ, ಭೂಪೇಶ್ ಬಾಘೇಲ್ ಸಿಎಂ ಆಗಿ ನೇಮಕಗೊಂಡಿದ್ದರು.
ಮಧ್ಯ ಪ್ರದೇಶ
230 ಕ್ಷೇತ್ರಗಳ ಮಧ್ಯ ಪ್ರದೇಶ ವಿಧಾನಸಭೆಗೆ 2018ರ ನವೆಂಬರ್ 28ರಂದು ಮತದಾನ ನಡೆದಿತ್ತು. ನಾಲ್ಕನೇ ಬಾರಿಗೆ ಶಿವರಾಜ್ ಸಿಂಗ್ ಚೌಹಾಣ್ ಗೆಲುವಿನ ಪ್ರಯತ್ನದಲ್ಲಿದ್ದರು. 116 ಮ್ಯಾಜಿಕ್ ನಂಬರ್ ನ ಮಧ್ಯಪ್ರದೇಶದಲ್ಲಿ 114 ಸ್ಥಾನ ಗೆದ್ದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಮೂಡಿತ್ತು. 2003ರಿಂದ ಅಧಿಕಾರ ಅನುಭವಿಸಿದ್ದ ಬಿಜೆಪಿ 109 ಸ್ಥಾನ ಪಡೆದಿತ್ತು. ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿತ್ತು. ಆದರೆ 2020ರ ಮಾರ್ಚ್ ನಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ನೇತೃತ್ವದಲ್ಲಿ ಶಾಸಕರ ಗುಂಪು ಬಿಜೆಪಿಗೆ ವಲಸೆ ಬಂದ ಕಾರಣ ಸರ್ಕಾರ ಪತನವಾಗಿತ್ತು. ಹೀಗಾಗಿ ಶಿವರಾಜ್ ಸಿಂಗ್ ಚೌಹಾಣ್ ಮತ್ತೆ ಸಿಎಂ ಆಗಿದ್ದರು.
ತೆಲಂಗಾಣ
ಭಾರತದ ಅತ್ಯಂತ ಯುವ ರಾಜ್ಯದ ತೆಲಂಗಾಣದಲ್ಲಿ 2018ರ ಡಿಸೆಂಬರ್ 7ರಂದು ಎರಡನೇ ವಿಧಾನಸಭಾ ಚುನಾವಣೆ ನಡೆದಿತ್ತು. ಕೆ ಚಂದ್ರಶೇಖರ್ ರಾವ್ ಅವರ ಟಿಆರ್ ಎಸ್ (ಈಗ ಬಿಆರ್ ಎಸ್) ಪಕ್ಷವನ್ನು ಸೋಲಿಸಲು ಕಾಂಗ್ರೆಸ್, ತೆಲುಗು ದೇಶಂ, ತೆಲಂಗಾಣ ಜನ ಸಮಿತಿ ಮತ್ತು ಸಿಪಿಐ ಪಕ್ಷಗಳು ಒಂದಾಗಿ ಪ್ರಜಾ ಕುಟಮಿ ಎಂಬ ಒಕ್ಕೂಟ ರಚಿಸಿತ್ತು, ಆದರೆ ಚುನಾವಣೆಯಲ್ಲಿ ಟಿಆರ್ ಎಸ್ (ಬಿಆರ್ ಎಸ್) 88 ಸ್ಥಾನ ಗೆದ್ದು ಅಧಿಕಾರ ಹಿಡಿಯಿತು. ಪ್ರಜಾ ಕುಟಮಿ ಒಕ್ಕೂಟ 21 ಸ್ಥಾನ ಮಾತ್ರ ಪಡೆದಿತ್ತು. (ಇದರಲ್ಲಿ ಕಾಂಗ್ರೆಸ್ 19 ಸ್ಥಾನ ಗೆದ್ದಿತ್ತು) ಓವೈಸಿ ಅವರ ಎಐಎಂಇಎಂ ಪಕ್ಷವು ಎಳು ಸ್ಥಾನ ಗೆದ್ದಿದ್ದರೆ, ಬಿಜೆಪಿ ಒಂದು ಸ್ಥಾನಕ್ಕೆ ತೃಪ್ತಿಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.