Assembly Result; ಬಿಜೆಪಿ ಗ್ಯಾರಂಟಿ ಘೋಷಿಸಿದ್ದು ಅದರ ಗೆಲುವಿಗೆ ಕಾರಣ: ಎಂ.ಬಿ ಪಾಟೀಲ್
Team Udayavani, Dec 3, 2023, 1:24 PM IST
ವಿಜಯಪುರ: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವಿರೋಧಿಸಿದವರೇ ಗ್ಯಾರಂಟಿ ಘೋಷಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪು ಒಪ್ಪಲೇಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ನಾಲ್ಕು ರಾಜ್ಯಗಳ ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ್ದಾರೆ.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಗ್ಯಾರಂಟಿ ಕೆಲಸ ಮಾಡಿದೆ ಎಂದಾಯಿತಲ್ಲವೇ. ಇದೀಗ ಬಿಜೆಪಿ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು ಕೂಡ ಗೆಲುವಿಗೆ ಕಾರಣ ಅಲ್ಲವೇ ಎಂದು ಪ್ರಶ್ನಿಸಿದರು.
ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ತೆಲಂಗಾಣ ರಾಜ್ಯದಲ್ಲಿ ಅಲ್ಲಿನ ಕಾಂಗ್ರೆಸ್ ಪಕ್ಷಕ್ಕೆ ಜನಾದೇಶ ನೀಡಿದ್ದಾರೆ. ಹೀಗಾಗಿ ಚುನಾವಣೆ ಉಸ್ತುವಾರಿ ವಹಿಸಿದ್ದ ಕರ್ನಾಟಕ ರಾಜ್ಯದ ನಾಯಕರ ಪ್ರಭಾವಕ್ಕಿಂತ ಮತದಾರರೇ ಬದಲಾವಣೆ ಬಯಸಿದ್ದಾರೆ ಎಂದರು.
ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಸೋಲಿಗೆ ಹಲವು ಕಾರಣಗಳಿದ್ದು, ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅವರು ಹೇಳಿದ ಅಚ್ಚೆ ದಿನ್ ಬರಲಿಲ್ಲ. ರೈತರ ಆದಾಯ ದ್ವಿಗುಣ ಆಗಲಿಲ್ಲ, ಲಕ್ಷ ಲಕ್ಷ ಉದ್ಯೋಗ ಸೃಷ್ಟಿಯಾಗಲಿಲ್ಲ. ಗಮನಕ್ಕೆ ಏರುತ್ತಿರುವ ಬೆಲೆ ನಿಯಂತ್ರಣ ಆಗಲಿಲ್ಲ. ಹೀಗೆ ಕೇಂದ್ರದ ಬಿಜೆಪಿ ಸರ್ಕಾರದ ವೈಫಲ್ಯಗಳು ಜನತೆಯಲ್ಲಿ ಬೇಸರ ಮೂಡಿಸಬೇಕು. ಐ.ಎನ್.ಡಿ.ಐ.ಎ. ಕೂಟಕ್ಕೆ ದೇಶದ ಜಾತ್ಯಾತೀತ ಮತಗಳು ಒಗ್ಗೂಡಲಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ಹೊಸ ಸೇರ್ಪಡೆ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.