Revanth Reddy; ತೆಲಂಗಾಣದಲ್ಲಿ ರೇವಂತ್ ರೆಡ್ಡಿ ಕಾಂಗ್ರೆಸ್ ನಸೀಬು ಬದಲಿಸಿದ್ದು ಹೇಗೆ?

Team Udayavani, Dec 3, 2023, 2:30 PM IST

How did Revanth Reddy change the fortunes of Congress in Telangana?

ಹೊಸದಿಲ್ಲಿ: 2014ರಲ್ಲಿ ರಚನೆಯಾದ ತೆಲಂಗಾಣ ರಾಜ್ಯ ಇದೀಗ ಮೊದಲ ಬಾರಿಗೆ ಕೆ.ಚಂದ್ರಶೇಖರ್ ರಾವ್ ಹೊರತಾದ ಮುಖ್ಯಮಂತ್ರಿಯನ್ನು ನೋಡುತ್ತಿದೆ. ಸತತ ಎರಡು ಅವಧಿಯಲ್ಲಿ ಅಧಿಕಾರ ಅನುಭವಿಸಿದ ಬಿಆರ್ ಎಸ್ (ಆಗ ಟಿಆರ್ ಎಸ್) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದೆ. ಕಳೆದ ಚುನಾವಣೆಯಲ್ಲಿ (2018) ಕೇವಲ 19 ಸ್ಥಾನ ಗಳಿಸಿದ್ದ ಕಾಂಗ್ರೆಸ್ ಈ ಬಾರಿ ಅದ್ಭುತ ಪ್ರದರ್ಶನ ನೀಡಿ ಅಧಿಕಾರ ಪಡೆಯುವತ್ತ ಮುನ್ನುಗ್ಗುತ್ತಿದೆ.

ತೆಲಂಗಾಣ ಕಾಂಗ್ರೆಸ್ ನ ಈ ಸಾಧನೆಯಲ್ಲಿ ಪ್ರಮುಖ ಪಾತ್ರ ವಹಿಸಿದವರು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ. ಅವರ ಕಾರ್ಯದ ಶೈಲಿಯು ಅವರಿಗೆ ಪಕ್ಷದಲ್ಲಿ ಹಲವಾರು ವಿರೋಧಿಗಳನ್ನು ಗಳಿಸಿತ್ತು, ಆದರೆ 54 ವರ್ಷ ರೇವಂತ್ ದಕ್ಷಿಣದ ರಾಜ್ಯದಲ್ಲಿ ಪಕ್ಷವನ್ನು ಗೆಲುನೆಡೆ ಮುನ್ನಡೆಸಿದ್ದಾರೆ. ಇದಕ್ಕಿಂತ ಹೆಚ್ಚಾಗಿ, ರೇವಂತ್ ರೆಡ್ಡಿ ಬಿಆರ್‌ಎಸ್ ಭದ್ರಕೋಟೆ ಕಾಮರೆಡ್ಡಿಯಲ್ಲಿ ಮುಖ್ಯಮಂತ್ರಿ ಮತ್ತು ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ ಚಂದ್ರಶೇಖರ ರಾವ್ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ತೆಲುಗು ದೇಶಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿರುವ ರೇವಂತ್ ಸದ್ಯ ಮಲ್ಕಾಜ್ ಗಿರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ. ಅವರು 2017ರಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದರು.

ಜುಲೈ 2021 ರಲ್ಲಿ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥರಾಗಿ ನೇಮಕಗೊಂಡ ನಂತರ, ರೆಡ್ಡಿ ಅವರು ಹೆಚ್ಚು ತಳಮಟ್ಟದ ಕಾರ್ಯಗಳಲ್ಲಿ ಕಾಣುತ್ತಿದ್ದರು. ಆಡಳಿತಾರೂಢ ಬಿಆರ್ ಎಸ್ ಸರ್ಕಾರದ ವಿರುದ್ಧ ಹಲವಾರು ಸಮಸ್ಯೆಗಳ ಕುರಿತು ಬೀದಿ ಪ್ರತಿಭಟನೆಗಳನ್ನು ನಡೆಸಿದರು.

ಇದನ್ನೂ ಓದಿ:3 ರಾಜ್ಯಗಳಲ್ಲಿ BJP ಭರ್ಜರಿ ಜಯಭೇರಿ, ಕಾಂಗ್ರೆಸ್‌ ಗೆ ಮುಖಭಂಗ:ತೆಲಂಗಾಣದಲ್ಲಿ ಕೈಗೆ ಗದ್ದುಗೆ

ಸ್ಥಳೀಯ ನಾಯಕರ ಗುರುತಿಸುವಿಕೆ ಮತ್ತು ಪ್ರಾಮುಖ್ಯತೆಯು ಫಲ ನೀಡಿದ ಕರ್ನಾಟಕದ ಪಾಠ ಕಲಿತ ಕಾಂಗ್ರೆಸ್ ನಾಯಕತ್ವವು ಪಕ್ಷದೊಳಗಿನ ಅವರ ಪ್ರತಿಸ್ಪರ್ಧಿಗಳ ಪ್ರತಿಭಟನೆಯ ಹೊರತಾಗಿಯೂ ರೇವಂತ್ ರೆಡ್ಡಿ ಅವರನ್ನು ಬೆಂಬಲಿಸಿತು. ರೆಡ್ಡಿಯನ್ನು ದೊಡ್ಡ ವೇದಿಕೆಯ ನಾಯಕ ಎಂದು ಬಿಂಬಿಸಲಾಯಿತು, ಬೃಹತ್ ರ್ಯಾಲಿಗಳಲ್ಲಿ ಮತ್ತು ಪಕ್ಷದ ರಾಷ್ಟ್ರೀಯ ನಾಯಕರ ಜೊತೆಗೆ ನಿರಂತರವಾಗಿ ರೆಡ್ಡಿ ವೇದಿಕೆ ಹಂಚಿಕೊಂಡರು.

ಕೆಸಿಆರ್ ವಿರುದ್ಧದ ಸ್ಪರ್ಧಿಯಾಗಿ ರೆಡ್ಡಿಯನ್ನು ಹೈಕಮಾಂಡ್ ಆಯ್ಕೆ ಮಾಡಿರುವುದು ರಾಜ್ಯ ಚುನಾವಣೆಯ ಪೂರ್ವದಲ್ಲಿ ಅವರ ಇಮೇಜನ್ನು ವರ್ಧಿಸಿತು. ರೆಡ್ಡಿ ಅವರು ಸ್ಪರ್ಧಿಸಿದ ಎರಡನೇ ಸ್ಥಾನವಾದ ಕೊಡಂಗಲ್‌ ನಲ್ಲಿಯೂ ಅವರು ಜಯ ಸಾಧಿಸಿದ್ದಾರೆ.

ಮತ ಎಣಿಕೆಗೂ ಮುನ್ನ ಮಾತನಾಡಿದ ರೇವಂತ್ ರೆಡ್ಡಿ, ಕಾಂಗ್ರೆಸ್ ರಾಜ್ಯದಲ್ಲಿ ಭಾರಿ ಬಹುಮತದ ಗೆಲುವು ಕಾಣಲಿದೆ. ಪಕ್ಷವು 80ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.