![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Dec 3, 2023, 11:29 PM IST
ತೆಕ್ಕಟ್ಟೆ: ತೆಕ್ಕಟ್ಟೆಯ ರೈಸ್‌ಮಿಲ್ ಉದ್ಯಮಿ ರಮೇಶ್ ನಾಯಕ್ ಅವರು ಕುಂದಾಪುರ ತಾಲೂಕಿನ ಕೆದೂರು ಗ್ರಾಮದಲ್ಲಿ ಸುಮಾರು 13 ಎಕರೆ ಜಾಗದಲ್ಲಿ ಸುಮಾರು 11 ಜಾತಿಯ, ಸುಮಾರು 1,634 ವಿವಿಧ ತಳಿಯ ಹಣ್ಣಿನ ಗಿಡಗಳನ್ನು ನೆಟ್ಟು ಉತ್ತಮ ಫಸಲು ಕಂಡುಕೊಳ್ಳುವ ಮೂಲಕ ನಿಸರ್ಗ ಪ್ರೇಮ ಮೆರೆದು ಜಿಲ್ಲೆಯಲ್ಲಿ ಮಾದರಿಯಾಗಿದ್ದಾರೆ.
ರೈಸ್‌ಮಿಲ್ ಉದ್ಯಮದ ಜತೆಗೆ ಕೃಷಿ ಮೌಲ್ಯವರ್ಧನೆ ಹಾಗೂ ಗ್ರಾಮೀಣ ರೈತರಿಗೆ ಬೆನ್ನೆಲುಬಾಗಿ ನಿಂತು ವಾರ್ಷಿಕ ಸುಮಾರು ಕೋಟಿ ರೂ.ಗಳಿಗೂ ಅಧಿಕ ವಹಿವಾಟು ಮಾಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಕೊಡಮಾಡುವ ಬಿಲಿಯನೇರ್ ರೈತ ಪ್ರಶಸ್ತಿಗೆ ಉಡುಪಿ ಜಿಲ್ಲೆಯಿಂದ ಆಯ್ಕೆ ಯಾಗಿದ್ದಾರೆ. ಹೊಸದಿಲ್ಲಿಯಲ್ಲಿ ಡಿ. 7ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
1,634 ವಿವಿಧ ಜಾತಿಯ ಹಣ್ಣಿನ ಗಿಡಗಳ ನಾಟಿ
ಇಂಗು ಗುಂಡಿ ಯಿಂದ ತೆಗೆಯ ಲಾದ ಮಣ್ಣನ್ನು ಉಪಯೋಗಿಸಿ 30 ಸಾವಿರ ಅನಾನಸ್ ಗಿಡಗಳನ್ನು ನಾಟಿ ಮಾಡಲಾಗಿದ್ದು 2 ಗಿಡಗಳ ಮಧ್ಯದಲ್ಲಿ ಪಪ್ಪಾಯಿ ಗಿಡಗಳನ್ನು ಅಂತರದ ಬೆಳೆಯಾಗಿ ಬೆಳೆಯಲಾಗಿದೆ. ಈ ನಡುವೆ ಡೆಂಗ್ ಸೂರ್ಯ, ಪ್ರಕಾಶ್ಚಂದ್ರ, ವಿಯೆಟ್ನಾಂ ಸೂಪರ್ ಅರ್ಲಿ, ಸಿಂಗಾಪುರ, ಅತ್ತಾವರ ಜಾತಿಯ ಸುಮಾರು 285 ಹಲಸು ಹಾಗೂ 500 ಡ್ರಾಗನ್ ಫ್ರೂಟ್ ಸೇರಿದಂತೆ ಒಟ್ಟು 1,634 ವಿವಿಧ ಜಾತಿಯ ಹಣ್ಣಿನ ಗಿಡಗಳು ಇವರ ತೋಟದಲ್ಲಿ ಮೈದಳೆದು ನಿಂತಿವೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.