Ambari Elephant; ಮುಗಿಯಿತು ಗಾಂಭೀರ್ಯದ ಪಯಣ; ಕಾದಾಟದಲ್ಲಿ ಕೊನೆಯುಸಿರೆಳೆದ ಅರ್ಜುನ
Team Udayavani, Dec 4, 2023, 5:09 PM IST
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಲಕ್ಷಾಂತರ ಮಂದಿಯ ಮನೆಸೂರೆಗೊಂಡಿದ್ದ ಆನೆ ಅರ್ಜುನ ಅಸುನೀಗಿದ್ದಾನೆ.
ಹಾಸನ ಜಿಲ್ಲೆಯಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಯುವಾಗ ಒಂಟಿ ಸಲಗದೊಂದಿಗೆ ನಡೆದ ಸಂಘರ್ಷದಲ್ಲಿ ತಿವಿತಕ್ಕೊಳಗಾಗಿ ಅರ್ಜುನ ಆನೆ ಮೃತಪಟ್ಟಿದೆ.
64 ವರ್ಷದ ಅರ್ಜುನ ಆನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಬಳ್ಳೆ ಶಿಬಿರದಲ್ಲಿತ್ತು. ದಸರೆಯಿಂದ ನಾಲ್ಕು ವರ್ಷದ ಹಿಂದೆ ನಿವೃತ್ತಿ ನೀಡಲಾಗಿತ್ತು. ಅಂಬಾರಿ ಹೊರದೆ ಇದ್ದರೂ ದಸರೆಯಲ್ಲಿ ಭಾಗಿಯಾಗುತ್ತಿತ್ತು. ನಂತರ ಆನೆ, ಹುಲಿ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳಲಾಗುತ್ತಿತ್ತು. ಈಗ ಆನೆ ಸೆರೆ ಕಾರ್ಯಾಚರಣೆ ವೇಳೆ ಹಾಸನ ಜಿಲ್ಲೆ ಎಸಳೂರು ಬಳಿ ಸೋಮವಾರ ಮಧ್ಯಾಹ್ನ ಮೃತಪಟ್ಟಿದೆ.
ಹತ್ತು ದಿನದಿಂದ ಹಾಸನ ಜಿಲ್ಲೆಯಲ್ಲಿ ಆನೆಗಳ ಸೆರೆ ಕಾರ್ಯಾಚರಣೆ ನಡೆಯುತ್ತಿದೆ. ಈವರೆಗೂ ಐದು ಆನೆಗಳನ್ನು ಸೆರೆ ಹಿಡಿಯಲಾಗಿದೆ. ಎಲ್ಲಾ ಕಾರ್ಯಾಚರಣೆಯಲ್ಲಿ ಅರ್ಜುನ ಆನೆ ಇತ್ತು. ಸೋಮವಾರ ಬೆಳಗ್ಗೆ ಸಕಲೇಶಪುರ ತಾಲ್ಲೂಕು ಎಸಳೂರಿನಲ್ಲಿ ಪುಂಡಾನೆ ಸೆರೆ ಕಾರ್ಯಾಚರಣೆ ಶುರುವಾಗಿದ್ದು, ಈ ವೇಳೆ ದುರಂತ ನಡೆದಿದೆ.
ಅತ್ಯಂತ ಬಲಶಾಲಿಯಾದ ಅರ್ಜುನ ಒಂಬತ್ತು ಬಾರಿ ಅಂಬಾರಿ ಹೊತ್ತಿದ್ದ. ಪುಂಡಾನೆಗಳನ್ನು ಪಳಗಿಸುವಲ್ಲಿಯೂ ಅರ್ಜುನ ನಿಸ್ಸೀಮನಾಗಿದ್ದ. ಈ ಹಿಂದೆ ಬಲರಾಮನ ನಿವೃತ್ತಿಯ ನಂತರ 2012ರಿಂದ ಜಂಬೂಸವಾರಿಯಲ್ಲಿ ಅಂಬಾರಿಯನ್ನು ಹೊರಲು ಆರಂಭಿಸಿದ್ದ. ಅದಕ್ಕೂ ಹಿಂದೆ ಒಮ್ಮೆ ಅಂಬಾರಿ ಹೊತ್ತು ಸೈ ಎನಿಸಿಕೊಂಡಿದ್ದ. 2012ರಿಂದ 2019ರವರಗೆ ಒಟ್ಟು 8 ಬಾರಿ ಅಂಬಾರಿ ಹೊತ್ತಿರುವ ಅರ್ಜುನ ಗಾತ್ರದಲ್ಲಿ ಬಲಭೀಮನಾಗಿ ಎಲ್ಲರ ಗಮನ ಸೆಳೆದಿದ್ದ. ಗಜಪಡೆಯೊಂದಿಗೆ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಅರ್ಜುನ ತುಂಟಾಟ ಆಡುತ್ತಾ ತಾಲೀಮಿನಲ್ಲಿ ಶಿಸ್ತಿನ ಹೆಜ್ಜೆ ಹಾಕುತ್ತಿದ್ದ ಅರ್ಜುನನ್ನು ಈಗ ಮಾವುತ ವಿನು ನೋಡಿಕೊಳ್ಳುತ್ತಿದ್ದರು.
ಅರ್ಜುನ ಎಲ್ಲಾ ಆನೆಗಳಿಗಿಂತ ಹೆಚ್ಚು ಅಂದರೆ ಅಂದಾಜು 5725 ಕೆ.ಜಿ. ತೂಕ ಹೊಂದಿದ್ದ. ಈ ಮೂಲಕ ಅಂಬಾರಿ ಹೊತ್ತು ತಾನು ಶಕ್ತಿ ಶಾಲಿ ಎಂಬುದನ್ನು ನಿರೂಪಿಸಿದ್ದ. 2019ರವರೆಗೆ ಸುಸೂತ್ರವಾಗಿ ಅಂಬಾರಿ ಹೊತ್ತು ಗಮನ ಸೆಳೆದಿದ್ದ.
ಈ ಹಿಂದೆ ಈತನ ಉಸ್ತುವಾರಿಯನ್ನು ಮಾವುತ ದೊಡ್ಡಮಾಸ್ತಿ ನೋಡಿ ಕೊಳ್ಳುತ್ತಿದ್ದರು. ಅವರ ನಿಧನದ ಬಳಿಕ ವಿನು ಅವರು ಮಾವುತರಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದರು. ಹೆಚ್.ಡಿ.ಕೋಟೆಯ ಬಳ್ಳೆ ಶಿಬಿರದ ಅರ್ಜುನ 2.80 ಮೀಟರ್ ಎತ್ತರ, 3.75 ಮೀಟರ್ ಉದ್ದ ಹೊಂದಿದ್ದ. ಈತನನ್ನು 1968ರಲ್ಲಿ ಖೆಡ್ಡಾ ವಿಧಾನದಲ್ಲಿ ಕಾಕನಕೋಟೆ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು. ಒಂಬತ್ತು ಅಂಬಾರಿ ಹೊತ್ತಿದ್ದರೂ ಜಂಬೂಸವಾರಿಯಲ್ಲಿ ಹಲವು ವರ್ಷಗಳ ಕಾಲ ಭಾಗವಹಿಸುತ್ತಾ ಬಂದಿರುವುದು ವಿಶೇಷವಾಗಿದೆ.
ಹಲವು ವರ್ಷಗಳ ಹಿಂದೆ ನಡೆದ ಆ ಒಂದು ಘಟನೆ ಅರ್ಜುನನಿಗೆ ನೋವು ತಂದಿತ್ತು. ಗಜಮಜ್ಜನಕ್ಕೆಂದು ಮೃಗಾಲಯದ ಬಳಿಯಿರುವ ಕಾರಂಜಿ ಕೆರೆಗೆ ಗಜಪಡೆಯನ್ನು ಕರೆದೊಯ್ಯಲಾಗಿತ್ತು. ಗಜಮಜ್ಜನದ ಬಳಿಕ ಕೆರೆಯಿಂದ ದಡಕ್ಕೆ ಹತ್ತಿಸುವ ವೇಳೆ ಅರ್ಜುನನ ಮುಂದೆ ಹೋಗುತ್ತಿದ್ದ ಇನ್ನೊಂದು ಆನೆಯ ಕಾವಡಿ ಜಾರಿ ಕೆಳಗೆ ಬಿದ್ದ. ಆ ಸಂದರ್ಭ ನೀರಿನಿಂದ ಮೇಲೆ ಬಂದ ಅರ್ಜುನನ ಕಾಲಿಗೆ ಆಕಸ್ಮಿಕವಾಗಿ ಸಿಕ್ಕಿ ಆತ ಸಾವನ್ನಪ್ಪಿದ್ದ. ಅದೊಂದು ಕಹಿ ಘಟನೆ ನಡೆದಿತ್ತು.
ಫೈಟರ್ ಆನೆ: ದಸರಾ ಹೊರತುಪಡಿಸಿ ಇತರೆ ದಿನಗಳಲ್ಲಿ ಬಳ್ಳೆ ಆನೆ ಶಿಬಿರದಲ್ಲಿ ವಾಸ್ತವ್ಯ ಹೂಡುವ ಅರ್ಜುನ ಎಲ್ಲಿಯೇ ಹುಲಿ ಸೆರೆ, ಪುಂಡಾನೆ ಸೆರೆ ಕಾರ್ಯಾಚರಣೆ ಇರಲಿ ಅಲ್ಲಿ ಹಾಜರಿರುತ್ತಿದ್ದ. ಇದೀಗ ಅಂಬಾರಿ ಹೊರುತ್ತಿರುವ ಅಭಿಮನ್ಯು ಜತೆ ಸೇರಿ ಹಲವು ಕಾರ್ಯಾಚರಣೆಗಳನ್ನು ಮಾಡಿದ್ದಾನೆ. ಇವರಿಬ್ಬರನ್ನೂ ಕರ್ನಾಟಕದ ಫೈಟರ್ ಆನೆಗಳು ಎಂದು ಕೂಡ ಕರೆಯಲಾಗುತ್ತದೆ.
ಪಶ್ಚಿಮ ಬಂಗಾಳ, ಮಧ್ಯಪ್ರದೇಶ ಮತ್ತು ಒರಿಸ್ಸಾಗಳಲ್ಲಿ ಆನೆಗಳನ್ನು ಹಿಡಿಯಲು ಬಳಸಿರುವುದು ಅರ್ಜುನನ ಶೌರ್ಯಕ್ಕೆ ಸಾಕ್ಷಿ. ಈ ಫೈಟರ್ ಎಂತಹ ಕಾಡುಪ್ರಾಣಿಯನ್ನಾದರೂ ಹುಡುಕಿ ಸದ್ದಡಗಿಸುವುದರಲ್ಲಿ ನಿಸ್ಸೀಮ ಎನ್ನುವುದರಲ್ಲಿ ಎರಡು ಮಾತಿಲ್ಲ.
2019ರಲ್ಲಿ ನಾಲ್ಕು ಜನರನ್ನು ತಿಂದಿದ್ದ ಹುಲಿಯನ್ನು ಸೆರೆ ಹಿಡಿಯಲು ಅರ್ಜುನನ್ನು ಬಳಸಿಕೊಂಡು ಮೂರು ದಿನ ಕಾರ್ಯಾಚರಣೆ ನಡೆಸಿ ಹುಲಿಯ ಹೆಜ್ಜೆಗುರುತು ಆಧರಿಸಿ ಹುಲಿಯನ್ನು ಹಿಡಿಯಲಾಗಿತ್ತು. ಇದಕ್ಕೆ ಮೆಚ್ಚಿ ಸರಕಾರ ಅರ್ಜುನ ಮತ್ತು ಮಾವುತ ವಿನುಗೆ ಪ್ರಶಸ್ತಿ ಪತ್ರ ನೀಡಿತ್ತು. ಇಷ್ಟೆಲ್ಲಾ ಕೀರ್ತಿ ಹೊಂದಿದ್ದ ಅರ್ಜುನ ಇಂದು ಪುಂಡ ಕಾಡಾನೆಯೊಂದರ ದಾಳಿಗೆ ಸಿಲುಕಿ ದುರ್ಮರಣಕ್ಕೆ ಈಡಾಗಿರುವುದು ನೋವಿನ ಸಂಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.