Fraud Case ಆನ್ಲೈನ್ ಬೆಟ್ಟಿಂಗ್ ಹೆಸರಿನಲ್ಲಿ 7ಲಕ್ಷ ರೂ. ವಂಚನೆ
Team Udayavani, Dec 4, 2023, 8:43 PM IST
ಕೋಟ: ಆನ್ಲೈನ್ ಬೆಟ್ಟಿಂಗ್ ಹೆಸರಿನಲ್ಲಿ ಹಣ ಪಡೆದು ವಂಚನೆ ನಡೆಸಿದ ಘಟನೆ ಕೋಟದಲ್ಲಿ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಸ್ಥಳೀಯ ನಿವಾಸಿ ಅಜಿತ್ ಕುಮಾರ್ ಹಾಗೂ ಪ್ರವೀಣ್ ಪ್ರಕರಣದ ಆರೋಪಿಯಾಗಿದ್ದು, ಕೋಟ ನಿವಾಸಿ ಆದಿತ್ಯ ವಂಚನೆಗೊಳಗಾದವರು.
ಅಜಿತ್ ಅವರು ಆದಿತ್ಯ ಅವರಲ್ಲಿ ಆನ್ಲೈನ್ ಬೆಟ್ಟಿಂಗ್ ಆ್ಯಪ್ ಬಗ್ಗೆ ತಿಳಿಸಿ ಆನ್ಲೈನ್ ಗೇಮ್ ಆಡಿದರೆ ಹಣ ಡಬ್ಬಲ್ ಆಗುತ್ತದೆ ಎಂಬುದಾಗಿ ನಂಬಿಕೆ ಹುಟ್ಟಿಸಿ ಹಣ ಹೂಡಿಕೆ ಮಾಡುವಂತೆ ಪುಸಲಾಯಿಸಿದ್ದರು. ಅದರಂತೆ ಆದಿತ್ಯ ಅವರು 2021ನೇ ಜುಲೈತಿಂಗಳಿನಲ್ಲಿ ಬ್ಯಾಂಕಿನ ತಮ್ಮ ಖಾತೆಯಿಂದ ಪ್ರವೀಣ ಅವರಿಗೆ 25,000 ರೂ. ಹಣವನ್ನು ವರ್ಗಾವಣೆ ಮಾಡಿದ್ದರು.
ಅನಂತರ ಆರೋಪಿಗಳಿಬ್ಬರೂ ಆದಿತ್ಯ ಅವರಿಂದ ಈತನಕ 7ಲಕ್ಷ ರೂ. ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದು, ಹಣವನ್ನು ತಮ್ಮ ಸ್ವಂತ ಲಾಭಕ್ಕೆ ದುರುಪಯೋಗಪಡಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.