![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 4, 2023, 8:14 PM IST
ವಿಜಯಪುರ : ನಗರದ ಖಾಸಗಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೆಕ್ಕೆಜೋಳ ತುಂಬಿದ್ದ ಚೀಲ ನಿಟ್ಟು ಕುಸಿದು ಸುಮಾರು 20 ಕ್ಕೂ ಹೆಚ್ಚು ಕಾರ್ಮಿಕರು ಚೀಲದ ಅಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾತ್ರಿ ವೇಳೆ ಕತ್ತಲಲ್ಲೂ ರಕ್ಷಣ ಕಾರ್ಯಾಚರಣೆ ಮುಂದುವರೆದಿದೆ.
ಸೋಮವಾರ ಸಂಜೆ ಬಿಹಾರ ಮೂಲದ ಕಾರ್ಮಿಕರು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಸ್ ಸಂಸ್ಥೆಯ ಗೋದಾಮಿನಲ್ಲಿ ಧಾನ್ಯಗಳ ಚೀಲಗಳನ್ನು ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದರು.ಈ ಹಂತದಲ್ಲಿ ಚೀಲಗಳ ನಿಟ್ಟು ಜೋಡಿಸುವ ಕೆಲಸದಲ್ಲಿ ತೊಡಗಿದ್ದಾಗಲೇ ಏಕಾಏಕಿ ತುಂಬಿದ ಚೀಲಗಳ ನಿಟ್ಟು ಕುಸಿದು ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಬಿದ್ದಿದೆ. ಇದರಿಂದಾಗಿ ಸುಮಾರು 20-25 ಕಾರ್ಮಿಕರು ಕುಸಿದ ಚೀಲಗಳ ಅಡಿಯಲ್ಲಿ ಸಿಲುಕಿದ್ದು, ಜೀವನ್ಮರಣದೊಂದಿಗೆ ಹೋರಾಟ ನಡೆಸಿದ್ದಾಗಿ ಪ್ರತ್ಯಕ್ಷದರ್ಶಿ ಕಾರ್ಮಿಕರು ವಿವರಿಸಿದ್ದಾರೆ.
ಬಿಹಾರ ಮೂಲದ ಸುಮಾರು 50ಕ್ಕೂ ಹೆಚ್ಚು ಕಾರ್ಮಿಕರು ರಾಜಗುರು ಇಂಡಸ್ಟ್ರೀಸ್ ಅವರ ಫುಡ್ ಪ್ರೊಸೆಸಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಸೋಮವಾರ ಸಂಜೆ ಮೆಕ್ಕೆಜೋಳ ತುಂಬಿದ್ದ ಚೀಲಗಳನ್ನು ನಿಟ್ಟಿನಂತೆ ಜೋಡಿಸುವ ಕೆಲಸದಲ್ಲಿ ತೊಡಗಿದ್ದರು.
ಸ್ಥಳದಲ್ಲಿರುವ ಕಾರ್ಮಿಕರು ಹೇಳುವ ಪ್ರಕಾರ ಮೆಕ್ಕೆಜೋಳದ ಚೀಲಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿದ್ದು, 3-4 ಕಾರ್ಮಿಕರು ರಕ್ಷಣೆಗೆ ಕೂಗಿಕೊಳ್ಳುವ ಧ್ವನಿ ಕೇಳಿಸುತ್ತಿದೆ ಎಂದು ವಿವರಿಸಿದ್ದಾರೆ.ಘಟನೆಯಲ್ಲಿ ಗಾಯಗೊಂಡಿರುವ ಸುಮಾರು 3 ಕಾರ್ಮಿಕರರನ್ನು ನಗರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿದ್ದು, ರಕ್ಷಣ ಕಾರ್ಯಾಚರಣೆ ಸಂದರ್ಭದಲ್ಲಿ ಸೊಂಟದ ವರೆಗೆ ಚೀಲದ ನಿಟ್ಟಿಯಲ್ಲಿ ಮೂವರು ಕಾರ್ಮಿಕರು ಪತ್ತೆಯಾಗಿದ್ದಾರೆ. ಆತಂಕದಲ್ಲಿರುವ ಕಾರ್ಮಿಕರಿಗೆ ಆತ್ಮ ಸ್ಥೈರ್ಯ ತುಂಬುತ್ತಿರುವ ಅಧಿಕಾರಿಗಳು, ಕುಡಿಯಲು ನೀರು ಒದಗಿಸಿದ್ದಾರೆ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, 3 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಇರಿಸಸಲಾಗಿದೆ. 5 ಜೆಸಿಬಿ ಯಂತ್ರಗಳ ಸಹಾಯದಿಂದ ಅಪಾಯದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಿಸುವ ಕಾರ್ಯಾಚರಣೆ ನಡೆದಿದೆ.
ರಕ್ಷಿಸಲ್ಪಡುವ ಕಾರ್ಮಿಕರನ್ನು ತುರ್ತಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲು ಸ್ಥಳದಲ್ಲಿ 5 ಅಂಬ್ಯುಲೆನ್ಸ್‍ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಗೋದಾಮುಗಳಲ್ಲಿ ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲ. ಹೀಗಾಗಿ ರಾತ್ರಿ ವೇಳೆ ಕಾರ್ಯಾರಣೆಗೆ ಹೆಚ್ಚಿನ ಬೆಳಕಿಗಾಗಿ 2 ಜನರೇಟರ್ ತರಿಸಲಾಗಿದೆ.
ಕಾರ್ಯಚರಣೆಯಲ್ಲಿ ತೊಡಗಿರುವ ತಂಡಗಳ ಅಧಿಕಾರಿಗಳ ಮಾಹಿತಿ ಪ್ರಕಾರ ಮೂವರು ಕಾರ್ಮಿಕರು ಚೀಲಗಳ ಅಡಿಯಲ್ಲಿ ಸಿಲುಕಿದ್ದರೂ ಸುರಕ್ಷಿತವಾಗಿರುವುದು ಗೋಚರಿಸುತ್ತಿದೆ. ಇನ್ನೂ ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಚೀಲಗಳ ಅಡಿಯಲ್ಲಿ ಇರುವ ಸಾಧ್ಯತೆ. ಪೂರ್ಣ ಕಾರ್ಯಾಚರಣೆಯ ಬಳಿಕವೇ ಅಪಾಯಕ್ಕೆ ಸಿಲುಕಿರುವ ಕಾರ್ಮಿಕರ ನಿಖರ ಸಂಖ್ಯೆ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.
ಅವಘಡ ಸಂಭಸಿರುವ ಗೋದಾಮಿನಲ್ಲಿ ಭಾರಿ ಪ್ರಮಾಣ ಧಾನ್ಯ ತುಂಬಿರುವ ಚೀಲಗಳನ್ನು ನಿಟ್ಟಾಗಿ ಒಟ್ಟಿದ್ದು, ಕಾರ್ಯಾಚರಣೆ ವೇಳೆ ಮತ್ತೆ ಕುಸಿಯುವ ಭೀತಿ ಇದೆ. ಹೀಗಾಗಿ ಮನುಷ್ಯರು ನೇರವಾಗಿ ಕಾರ್ಯಚರಣೇ ನಡೆಸದೆ ಜೆಸಿಬಿ ಯಂತ್ರಗಳ ಸಹಾಯದಿಂದ ಸೂಕ್ಷ್ಮವಾಗಿ ರಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ತೆರಳಿ ಬೀಡುಬಿಟ್ಟಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್, ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಮೇಲೆ ನಿಗಾ ವಹಿಸಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.