Kannada Cinema: ‘ಮಾಫಿಯಾ’ದಲ್ಲಿ ಪ್ರಜ್ವಲ್ ಮಿಂಚು; ಟೀಸರ್ ಗೆ ಮೆಚ್ಚುಗೆ
Team Udayavani, Dec 5, 2023, 2:27 PM IST
ನಟ ಪ್ರಜ್ವಲ್ ದೇವರಾಜ್ ನಾಯಕನಾಗಿ ಅಭಿನಯಿಸುತ್ತಿರುವ “ಮಾಫಿಯಾ’ ಸಿನಿಮಾದ ಚಿತ್ರೀಕರಣ ಮುಕ್ತಾಯವಾಗಿದ್ದು, ಬಿಡುಗಡೆ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರು ಕುಮಾರ್ ಫಿಲಂಸ್ನ ಡಿ ಕುಮಾರ್ ಬಿ ನಿರ್ಮಿಸಿರುವ ಈ ಚಿತ್ರವನ್ನು ಲೋಹಿತ್ ನಿರ್ದೇಶನ ಮಾಡಿದ್ದಾರೆ.
ಟೀಸರ್ ಬಿಡುಗಡೆ ವೇಳೆ ಮಾತನಾಡಿದ ಲೋಹಿತ್ “ಈವರೆಗೂ ಯಾರು ತೋರಿಸಿರದ ಮಾಫಿಯಾ ಈ ಚಿತ್ರದಲ್ಲಿ ತೋರಿಸಿದ್ದೇವೆ. ಬೇರೆ ಬೇರೆ ಮಾರ್ಕೆಟ್ ಹೆಸರು ಕೇಳಿರುತ್ತೀರಾ. ಆದರೆ ಇದೆ ಮೊದಲ ಬಾರಿಗೆ ರೆಡ್ ಮಾರ್ಕೆಟ್ ಪರಿಚಯಿಸಲಾಗಿದೆ. ಅದು ಏನೆಂಬುದನ್ನು ಚಿತ್ರದಲ್ಲೇ ನೋಡಬೇಕು’ ಎಂದರು.
“ಪ್ರಜ್ವಲ್ ದೇವರಾಜ್ ಅಭಿನಯದ 35 ನೇ ಚಿತ್ರವನ್ನು ನಿರ್ಮಿಸುತ್ತಿರುವುದು ಖುಷಿಯಾಗಿದೆ. ನಿರ್ದೇಶಕ ಲೋಹಿತ್ ಸೇರಿದಂತೆ ಚಿತ್ರತಂಡದ ಸಹಕಾರದಿಂದ ಮಾಫಿಯಾ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಜನವರಿಯಲ್ಲಿ ಚಿತ್ರವನ್ನು ಬಿಡುಗಡೆ ಮಾಡುವ ಯೋಜನೆಯಿದೆ’ ಎಂದರು.
ನಿರ್ಮಾಪಕ ಕುಮಾರ್ ಬಿ. ಪ್ರಜ್ವಲ್ ಅವರಿಗೂ ಈ ಚಿತ್ರದ ಮೇಲೆ ನಿರೀಕ್ಷೆ ಇದೆ. “ಮಾಫಿಯಾ ಚಿತ್ರದ ಬಗ್ಗೆ ಹೇಳಬೇಕಾದರೆ, ಕುಮಾರ್ ಅವರು ಒಳ್ಳೆಯ ಚಿತ್ರ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ಲೋಹಿತ್ ಅವರ ವಯಸ್ಸು ಚಿಕ್ಕದಾಗಿದ್ದರೂ ಕೆಲಸದಲ್ಲಿ ಅಸಾಧಾರಣ. ನಾನು, ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ’ ಎಂದರು ನಾಯಕ ಪ್ರಜ್ವಲ್ ದೇವರಾಜ್.
ಪಟಪಟ ಎಂದು ಮಾತನಾಡುವ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವುದಾಗಿ ನಾಯಕಿ ಅದಿತಿ ಪ್ರಭುದೇವ ಹೇಳಿದರು. ನಟ ಶೈನ್ ಶೆಟ್ಟಿ, ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್, ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಮಾಫಿಯಾ ಚಿತ್ರದ ಬಗ್ಗೆ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.