![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Dec 5, 2023, 5:28 PM IST
ಪಣಜಿ: ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆಯಿಲ್ಲ. ರಾಜ್ಯ ಮತ್ತು ಕೇಂದ್ರ ಮಟ್ಟದಲ್ಲಿ ಅಂತಹ ಯಾವುದೇ ಚರ್ಚೆ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಹೇಳಿದ್ದಾರೆ.
ಸಚಿವ ಸಂಪುಟಕ್ಕೆ ಇಬ್ಬರು ಶಾಸಕರು ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ರಾಜ್ಯಾದ್ಯಂತ ವಿವಿಧ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ಕುರಿತಂತೆ ಪಣಜಿಯಲ್ಲಿ ಸುದ್ಧಿಗಾರರಿಗೆ ಅವರು ಈ ಮಾಹಿತಿ ನೀಡಿದರು.
ಛತ್ತೀಸ್‍ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಯಶಸ್ಸಿನ ನಂತರ ಬಿಜೆಪಿಯ ಸ್ಥಾನವು ಎಲ್ಲೆಡೆ ಬಲವಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.
ರಾಷ್ಟ್ರಮಟ್ಟದಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಈ ಹಿಂದೆ ಕೇಂದ್ರ ನಾಯಕರ ಸಲಹೆ ಮೇರೆಗೆ ಸಚಿವ ಸಂಪುಟ ಪುನಾರಚನೆ ಆಗಿದ್ದರೂ ಪಕ್ಷ ಸೇರ್ಪಡೆ ವೇಳೆ ನೀಡಿದ ಭರವಸೆಗಳೇ ಕಾರಣ ಎಂದು ಸಿಎಂ ಸಾವಂತ್ ನುಡಿದರು.
ಈ ಮೂಲಕ ಕಳೆದ ಕೆಲ ದಿನಗಳಿಂದ ಗೋವಾದಲ್ಲಿ ಹರಿದಾಡುತ್ತಿದ್ದ ರಾಜಕೀಯ ಸುದ್ಧಿ ಊಹಾಪೋಹಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ತೆರೆ ಎಳೆದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.