Telangana Congress; ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಆಯ್ಕೆ
Team Udayavani, Dec 5, 2023, 6:53 PM IST
ಹೊಸದಿಲ್ಲಿ: ಮೊದಲ ಬಾರಿಗೆ ತೆಲಂಗಾಣ ರಾಜ್ಯದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷವು ಇದೀಗ ನೂತನ ಮುಖ್ಯಮಂತ್ರಿಯ ನೇಮಕ ಮಾಡಿದೆ. ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.
ಹೊಸದಿಲ್ಲಿಯಲ್ಲಿ ನಡೆದ ಹೈಕಮಾಂಡ್ ಸಭೆಯ ಬಳಿಕ ಈ ನಿರ್ಧಾರ ಹೊರಬಿದ್ದಿದೆ. ತೆಲಂಗಾಣ ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ರೇವಂತ್ ರೆಡ್ಡಿ ಅಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.
ಡಿಸೆಂಬರ್ 7 ರಂದು ತೆಲಂಗಾಣ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕರಾದ ಉತ್ತಮ್ ಕುಮಾರ್ ರೆಡ್ಡಿ ಮತ್ತು ಭಟ್ಟಿ ವಿಕ್ರಮಾರ್ಕ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬಹುದು ಅಥವಾ ಉತ್ತಮ ಖಾತೆಗೆ ಅವಕಾಶ ಕಲ್ಪಿಸಬಹುದು. ರಾಜ್ಯದಲ್ಲಿ ರೊಟೇಶನ್ ಸಿಎಂ ಸೂತ್ರ ಇರುವುದಿಲ್ಲ ಎಂದು ಮೂಲಗಳು ತಿಳಿಸಿವೆ.
#WATCH | Congress General Secretary KC Venugopal says, “Congress President has decided to go with Revanth Reddy as the new CLP of Telangana Legislative Party.”
Swearing-in ceremony of new Telangana CM to be held on December 7. pic.twitter.com/4bkAGMjTmg
— ANI (@ANI) December 5, 2023
ಅನುಭವಿ ರಾಜಕಾರಣಿ ಮತ್ತು ಮಲ್ಕಾಜ್‌ಗಿರಿಯ ಲೋಕಸಭಾ ಸಂಸದ, ರೇವಂತ್ ರೆಡ್ಡಿ ತೆಲಂಗಾಣ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. 2017 ರಲ್ಲಿ ತೆಲುಗು ದೇಶಂ ಪಕ್ಷದಿಂದ (ಟಿಡಿಪಿ) ಕಾಂಗ್ರೆಸ್‌ಗೆ ಬಂದ ರೇವಂತ್ ರೆಡ್ಡಿ ಬಳಿಕ ರಾಜ್ಯದ ಪ್ರಮುಖ ರಾಜಕಾರಣಿಯಾಗಿ ಬೆಳೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.