Lokayukta: ಭ್ರಷ್ಟರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತರು
9 ಜಿಲ್ಲೆಗಳ 13 ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ಲೋಕಾಯುಕ್ತ ತಂಡ ದಾಳಿ
Team Udayavani, Dec 5, 2023, 11:48 PM IST
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ಬೆನ್ನು ಬಿದ್ದಿರುವ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ 9 ಜಿಲ್ಲೆಗಳಲ್ಲಿ 13 ಮಂದಿ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳು ಹಾಗೂ ಅವರ ಸಂಬಂಧಿಕರ ನಿವಾಸಗಳು ಸೇರಿ 68 ಕಡೆ ದಾಳಿ ನಡೆಸಿದ್ದಾರೆ.
ಸುಮಾರು 200 ಮಂದಿ ಲೋಕಾಯುಕ್ತ ಅಧಿಕಾರಿಗಳ ತಂಡ ಮುಂಜಾನೆ 6 ಗಂಟೆಯಿಂದ ರಾಜ್ಯದ ಎಲ್ಲೆಡೆ ಏಕಕಾಲಕ್ಕೆ ದಾಳಿ ನಡೆಸಿ ಸಂಜೆ 7 ಗಂಟೆವರೆಗೆ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಕೋಟ್ಯಂತರ ರೂ. ನಗದು, ಕೆ.ಜಿ.ಗಟ್ಟಲೆ ಚಿನ್ನಾಭರಣ, ಬೆಳ್ಳಿ ವಸ್ತುಗಳ ಸಹಿತ ಕೋಟ್ಯಂತರ ರೂ. ಮೌಲ್ಯದ ಚರಾಸ್ತಿ ಹಾಗೂ ಸ್ಥಿರಾಸ್ತಿಗಳನ್ನು ಪತ್ತೆ ಹಚ್ಚಿದ್ದಾರೆ.
ಬಲೆಗೆ ಬಿದ್ದ ತಿಮಿಂಗಲಗಳು
ಬೆಂಗಳೂರಿನ ಬೆಸ್ಕಾಂ ಜಯನಗರ ಉಪ ವಿಭಾಗದ ಕಾರ್ಯಪಾಲಕ ಅಭಿಯಂತರ(ಇಇ) ಎಚ್.ಡಿ. ಚೆನ್ನಕೇಶವ, ರಾಮನಗರ ಜಿಲ್ಲೆ ಕಣಿಮಿಣಿಕೆ ಗ್ರಾಮದ ಕೆಎಂಎಫ್ ಮುಖ್ಯ ಕಾರ್ಯನಿರ್ವಾಹಕ (ಕಾರ್ಯದರ್ಶಿ) ಎಚ್.ಎಸ್. ಕೃಷ್ಣಮೂರ್ತಿ, ಬೆಂಗಳೂರು ಬೆಸ್ಕಾಂ ಜಾಗೃತ ದಳದ ಉಪ ಪ್ರಧಾನ ವ್ಯವಸ್ಥಾಪಕ ಟಿ.ಎನ್. ಸುಧಾಕರ್ ರೆಡ್ಡಿ, ಹುಬ್ಬಳ್ಳಿ ನಗರ ಹೆಸ್ಕಾಂ ನಗರ ವಿಭಾಗೀಯ ಸ್ಟೋರ್‌ನ ನಿವೃತ್ತ ಕಿರಿಯ ಅಭಿಯಂತರ (ಗ್ರೇಡ್-2) ಬಸವರಾಜ, ಮೈಸೂರು ಜಿಲ್ಲೆ ನಂಜನಗೂಡು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಎಂ.ಎಸ್. ಮಹದೇವಸ್ವಾಮಿ.
ಬೆಳಗಾವಿ ಕೆಆರ್‌ಐಡಿಎಲ್‌ನ ಅಧೀಕ್ಷಕ ಎಂಜಿನಿಯರ್ ತಿಮ್ಮರಾಜಪ್ಪ, ರಾಮನಗರ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಎನ್. ಮುನೇಗೌಡ, ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ ಮತ್ತು ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾನಿಲಯದ ನಿವೃತ್ತ ಉಪಕುಲಪತಿ ಎಚ್.ಡಿ. ನಾರಾಯಣಸ್ವಾಮಿ, ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ ಮತ್ತು ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾನಿಲಯದ ಲೆಕ್ಕ ಸಹಾಯಕ (ಹೊರಗುತ್ತಿಗೆ) ಸುನಿಲ್ ಕುಮಾರ್.
ಕೊಪ್ಪಳ ಜಿಲ್ಲೆ ಆನೆಗುಂದಿ ವಿಭಾಗದ ಡಿಎಫ್ಓ ಬಿ. ಮಾರುತಿ, ಬಳ್ಳಾರಿ ಜಿಲ್ಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಚಂದ್ರಶೇಖರ್ ಹಿರೇಮನಿ, ಯಾದಗಿರಿ ನಗರ ಸಭೆ ಆಯುಕ್ತ ಶರಣಪ್ಪ, ಯಾದಗಿರಿ ಜಿಲ್ಲೆ ಡಿಎಚ್‌ಒ ಡಾ| ಕೆ. ಪ್ರಭುಲಿಂಗ ಅವರಿಗೆ ಸೇರಿದ ಮನೆ, ಕಚೇರಿಗಳು ಹಾಗೂ ಅವರ ಸಂಬಂಧಿಗಳ ಮನೆಗಳಲ್ಲಿ ತಪಾಸಣೆ ನಡೆಸಲಾಗಿದೆ.
ವಿಜಯೇಂದ್ರ ಸಂಬಂಧಿ ಮನೆ ಮೇಲೂ ದಾಳಿ
ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಯಾದಗಿರಿ ಡಿಎಚ್‌ಒ ಡಾ| ಪ್ರಭುಲಿಂಗ ಮಾನಕರ್ ಅವರಿಗೆ ಸೇರಿದ ನಾಲ್ಕು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದು, 1 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ, 49.04 ಲಕ್ಷ ರೂ. ಮೌಲ್ಯದ ನಗದು, ಚಿನ್ನ, ಬೆಳ್ಳಿ ಹಾಗೂ ಇತರ ಗೃಹೋಪಯೋಗಿ ವಸ್ತುಗಳು ಸೇರಿ 1.49 ಕೋಟಿ ರೂ. ಮೌಲ್ಯದ ವಸ್ತುಗಳು ಪತ್ತೆಯಾಗಿವೆ. ಕಲಬುರಗಿ ಮಾನಕರ್ ಕುಟುಂಬದವರಾದ ಡಾ| ಪ್ರಭುಲಿಂಗ ಮಾನಕರ್ ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಪತ್ನಿಯ ಸಹೋದರ ಸಂಬಂಧಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.