Arjuna: ಅರ್ಜುನ ಸಾವಿನ ಕುರಿತು ಸಮಗ್ರ ತನಿಖೆಯಾಗಬೇಕು


Team Udayavani, Dec 6, 2023, 12:40 AM IST

arjuna

ಮೈಸೂರು ದಸರಾದಲ್ಲಿ ಸತತ ಎಂಟು ವರ್ಷಗಳಿಂದ ಅಂಬಾರಿ ಹೊತ್ತು ಕನ್ನಡಿಗರ ನೆಚ್ಚಿನ ಆನೆ ಎನಿಸಿಕೊಂಡಿದ್ದ ಅರ್ಜುನ ಸೋಮವಾರ ಸಾವಿಗೀಡಾ­ಗಿದೆ. ಈ ಸಾವು ಸಹಜವಾದುದು ಅಲ್ಲದಿರುವುದರಿಂದಲೇ ಇಡೀ ರಾಜ್ಯದಲ್ಲಿ ಭಾರಿ ಚರ್ಚೆಗೆ ಒಳಪಟ್ಟಿದೆ. ಸಕಲೇಶಪುರದ ಯಸಳೂರಿನಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಯಲ್ಲಿ ಗಾಯಗೊಂಡು ಅರ್ಜುನ ಸಾವಿಗೀಡಾಗಿದೆ. ಈ ಸಾವಿನ ಕುರಿತು ಹಲವು ಅನುಮಾನಗಳು ಹುಟ್ಟಿ­ಕೊಂಡಿದ್ದು, ವನ್ಯಜೀವಿ ಪ್ರಿಯರು ಪರಿತಪಿಸುತ್ತಿದ್ದಾರೆ.

ಕಾಡಾನೆಯ ಕಾರ್ಯಾಚರಣೆಗೆ ಬಳಸಲಾಗಿದ್ದ ಐದು ಸಾಕಾನೆಗಳಲ್ಲಿ ಅರ್ಜುನ ಸಹ ಒಂದು. ಹಾಗೆ ನೋಡಿದರೆ ವಯಸ್ಸು 64 ಆದರೂ ಅರ್ಜುನ ದುರ್ಬಲ­ನಾಗಿರಲಿಲ್ಲ. ಹಿಂದೆಯೂ ಹಲವು ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿತ್ತು. ಆದರೆ ಈ ಕಾರ್ಯಾಚರಣೆ ಕುರಿತು ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಮೊದಲನೆಯದಾಗಿ 60 ವರ್ಷ ಮೀರಿದ ಯಾವುದೇ ಆನೆಗಳನ್ನು ಕಾರ್ಯಾಚರಣೆಗೆ ಬಳಸಬಾರದು ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟ ನಿರ್ದೇಶನ ಇದ್ದರೂ ಅರಣ್ಯ ಇಲಾಖೆ ಇದನ್ನು ನಿರ್ಲಕ್ಷಿಸಿದೆ ಎಂದು ವನ್ಯಜೀವಿ ಪ್ರೇಮಿಗಳು ಹೇಳುತ್ತಾರೆ. ಹಲವು ಕಾರ್ಯಾಚರಣೆಯಲ್ಲಿ “ನಿವೃತ್ತ’ ಆನೆಗಳನ್ನು ಬಳಸುತ್ತಿರುವುದು ಈಗಲೂ ಮುಂದುವರಿಯುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ಕೆಲವು ಮೂಲಗಳ ಪ್ರಕಾರ, ಕಾಡಾನೆಗೆ ಹಾರಿಸಬೇಕಾದ ಅರಿವಳಿಕೆ ಚುಚ್ಚುಮದ್ದು ತಪ್ಪಿ ಅರ್ಜುನನಿಗೆ ತಗಲಿ, ಕಾರ್ಯಾಚರಣೆ ನಡುವಲ್ಲೇ ಅದು ಪ್ರಜ್ಞೆ ತಪ್ಪಿ ಬಿತ್ತು. ಹೀಗಾಗಿ ಕಾದಾಡಲಾಗದೆ ಸೋಲೊಪ್ಪಿಕೊಳ್ಳಬೇಕಾಯಿತು ಎಂದು ಹೇಳಲಾಗುತ್ತದೆ. ಮತ್ತೂಬ್ಬರ ವಾದದ ಪ್ರಕಾರ, ಕಾಡಾನೆಗೆ ಹಾರಿಸಬೇಕಾದ ಗುಂಡು ತಪ್ಪಿ ಅರ್ಜುನನಿಗೆ ಬಿತ್ತು ಎಂದು ಹೇಳಲಾಗುತ್ತದೆ. ಇದೆಲ್ಲದರ ನಡುವೆ, ಮದವೇರಿದ ಆನೆಯೊಂದು ಕಾರ್ಯಾಚರಣೆ ವೇಳೆ ಕಾಡಿಗೆ ಬಂದಿರುವ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಇರಲಿಲ್ಲ ಎಂಬ ವಾದವೂ ಇದೆ. ಇವೆಲ್ಲವೂ ಅಲ್ಲಿ-ಇಲ್ಲಿ ಕೇಳಿಬರುತ್ತಿರುವ ಮಾತುಗಳು. ಹಾಗೆಂದು ಇದಾವುದನ್ನೂ ನಿರ್ಲಕ್ಷಿಸುವ ಹಾಗಿಲ್ಲ.

ಕಳೆದ ಕೆಲವು ತಿಂಗಳ ಹಿಂದೆ ವೆಂಕಟೇಶ್‌ ಎಂಬ 67 ವರ್ಷದ ಆನೆ ಇಂಥದ್ದೇ ಕಾರ್ಯಾಚರಣೆ ವೇಳೆ ಸಾವಿಗೀಡಾಗಿತ್ತು. ಇಲ್ಲಿಯು ನಿವೃತ್ತಿಯಾದ ಆನೆಯ ಬಳಕೆ ಕುರಿತು ಆಕ್ಷೇಪ ಕೇಳಿಬಂದಿತ್ತು. ಆದರೂ ಅರಣ್ಯ ಇಲಾಖೆ ಇದನ್ನು ಗಂಭೀರವಾಗಿ ತೆಗೆದುಕೊಳ್ಳಲೇ ಇಲ್ಲ. ಅದರಲ್ಲೂ ಅರ್ಜುನ ಕಾರ್ಯಾಚರಣೆಯಲ್ಲಿ ಅರಿವಳಿಕೆ ವೈದ್ಯರು, ಅರಣ್ಯ ಇಲಾಖೆ ಅಧಿಕಾರಿಗಳ ಲೋಪ ಇದೆ ಎನ್ನುವುದರಲ್ಲಿ ಅನುಮಾನ ಇಲ್ಲ. ಈ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದಾಗಲೇ ಅರ್ಜುನನ ಸಾವಿಗೆ ನ್ಯಾಯ ಸಿಗುತ್ತದೆ.

ಇನ್ನೊಂದೆಡೆ, ರಾಜ್ಯದಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿ ಹೆಚ್ಚುತ್ತಿದ್ದು, ಜ್ವಲಂತ ಸಮಸ್ಯೆಯಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಆನೆ ಕಾರ್ಯಪಡೆಗಳನ್ನು ರಚಿಸಿ ಅವುಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆದರೆ ಈ ಕಾರ್ಯಪಡೆಯಲ್ಲೂ ಸಿಬಂದಿ ಕೊರತೆ ಇರುವುದರಿಂದ ಕಾರ್ಯಾಚರಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎನ್ನುವುದು ಎಲ್ಲರಿಗೂ ತಿಳಿದ ವಿಚಾರ. ಮೊದಲು ಅರಣ್ಯ ಇಲಾಖೆಗೆ ಅಗತ್ಯ ಸಿಬಂದಿ ವ್ಯವಸ್ಥೆ ಮಾಡುವ ಮೂಲಕ ಮೂಲ ಸಮಸ್ಯೆಯನ್ನು ಬಗೆಹರಿಸಲು ಸರಕಾರ ಚಿಂತಿಸಲೇಬೇಕು.

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

PM-yojana

Education: ಪಿಎಂ ವಿದ್ಯಾಲಕ್ಷ್ಮೀ ಯೋಜನೆ ಬಡ ಪ್ರತಿಭಾನ್ವಿತರಿಗೆ ವರದಾನ

supreme-Court

Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ

Canada

Canada Temple Attack: ಕೆನಡಾ ದೇಗುಲ ದಾಳಿ: ಜಾಗತಿಕ ವಿರೋಧ ಪ್ರತಿಧ್ವನಿಸಲಿ

Flight

Hoax Call: ಹುಸಿ ಬಾಂಬ್‌ ಬೆದರಿಕೆ ಮರುಕಳಿಸದಿರಲಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.