Aviation; ಜಾಗತಿಕ ಸಂಪರ್ಕದ ಕೊಂಡಿ ವಾಯುಯಾನ
ಇಂದು ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ದಿನ
Team Udayavani, Dec 7, 2023, 5:40 AM IST
ರೆಕ್ಕೆಗಳಿಲ್ಲದಿದ್ದರೂ ಮನುಷ್ಯ ಆಗಸದೆತ್ತರಕ್ಕೆ ಸಾಗಿ ಮೋಡಗಳ ಮರೆಯಲ್ಲಿ ಭುವಿಯನ್ನು ಇಣುಕಿ ನೋಡುತ್ತಾನೆ. ಇದೆಲ್ಲ ಸಾಧ್ಯವಾಗಿದ್ದು ವಿಮಾನದ ಆವಿಷ್ಕಾರದಿಂದ. ವೇಗದ ಸಾರಿಗೆ ವ್ಯವಸ್ಥೆಯಲ್ಲಿ ಒಂದಾದ ವಿಮಾನಯಾನ ವಿಶ್ವ ಸಮುದಾಯಕ್ಕೆ ನಿರಂತರ ಸೇವೆ ನೀಡುತ್ತಲೇ ಬಂದಿದೆ. ಈ ಮೂಲಕ ವಿಶ್ವದ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿಗೆ ಗಮನಾರ್ಹ ಕೊಡುಗೆ ನೀಡುತ್ತಿದೆ. ನಾಗರಿಕ ವಿಮಾನ ಯಾನದ ಮಹತ್ವ ಮತ್ತದರ ಪ್ರಾಮುಖ್ಯದ ಕುರಿತಂತೆ ನಾಗರಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಪ್ರತೀ ವರ್ಷ ಡಿಸೆಂಬರ್ 7ರಂದು ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ದಿನವನ್ನು ಆಚರಿಸಿಕೊಂಡು ಬರಲಾಗಿದೆ.
ಹಿನ್ನೆಲೆ ಮತ್ತು ಉದ್ದೇಶ
1944ರ ಡಿಸೆಂಬರ್ 7ರಂದು ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ಸಂಸ್ಥೆ (ಐಇಅO)ಸ್ಥಾಪನೆಯಾಯಿತು. ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನದ ಮಹತ್ವಪೂರ್ಣ ಒಪ್ಪಂದಕ್ಕೆ ಸಹಿ ಹಾಕಿದ 50ನೇ ವರ್ಷದ ಸವಿನೆನಪಿಗಾಗಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 1996ರಲ್ಲಿ ಪ್ರತೀವರ್ಷ ಡಿಸೆಂಬರ್ 7ರಂದು ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ದಿನವನ್ನು ಆಚರಿಸುವ ನಿರ್ಣಯ ಕೈಗೊಂಡಿತು. ವಿಮಾನ ಯಾನ ಸುರಕ್ಷೆಗೆ ಇರುವ ಅಂತಾರಾಷ್ಟ್ರೀಯ ಮಾನದಂಡಗಳನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವುದು, ವಿಮಾನ ಯಾನ ಸೇವೆಯ ವೇಳೆಯ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಸುರಕ್ಷೆಯನ್ನು ಖಾತರಿಪಡಿಸುವುದು, ಯಾನಿಗಳಿಗೆ ಗುಣಮಟ್ಟದ ಸೇವೆ ನೀಡಲು ಆದ್ಯತೆ, ನಾಗರಿಕ ವಿಮಾನ ಯಾನ ಸೇವೆಯಲ್ಲಿ ಅಂತಾರಾಷ್ಟ್ರೀಯ ಸಹಕಾರವನ್ನು ಇನ್ನಷ್ಟು ಬಲಪಡಿಸುವುದು ಮತ್ತು ನಾಗರಿಕ ವಿಮಾನಗಳಲ್ಲಿ ಸುಧಾರಿತ ಮತ್ತು ಅತ್ಯಾಧುನಿಕ ತಂತ್ರಜ್ಞಾನಗಳ ಬಳಕೆ ಇತ್ಯಾದಿಗಳ ಬಗೆಗೆ ವಿಚಾರವಿಮರ್ಶೆಗಳನ್ನು ನಡೆಸಿ ಈ ದಿಸೆಯಲ್ಲಿ ಕಾರ್ಯೋನ್ಮುಖವಾಗುವ ಉದ್ದೇಶವನ್ನು ಈ ದಿನ ಒಳಗೊಂಡಿದೆ. ಅಲ್ಲದೆ ನಾಗರಿಕ ವಿಮಾನ ಯಾನ ಕ್ಷೇತ್ರದಲ್ಲಿ ಐಇಅO ಮತ್ತು ಇನ್ನಿತರ ವಿಮಾನ ಯಾನ ಸಂಸ್ಥೆಗಳ ಸಲ್ಲಿಸುತ್ತಿರುವ ಸೇವೆ ಮತ್ತು ಕೊಡುಗೆಗೆ ಮೆಚ್ಚುಗೆ ಸೂಚಿಸುವುದರ ಜತೆಗೆ ಈ ನಿಟ್ಟಿನಲ್ಲಿ ಇನ್ನಷ್ಟು ಪ್ರೋತ್ಸಾಹ ನೀಡುವುದೇ ಈ ದಿನದ ಪ್ರಮುಖ ಉದ್ದೇಶವಾಗಿದೆ.
ಈ ವರ್ಷದ ಧ್ಯೇಯ
“ಜಾಗತಿಕ ವಾಯುಯಾನ ಅಭಿವೃದ್ಧಿಗಾಗಿ ಆವಿಷ್ಕಾರಗಳನ್ನು ಮುಂದುವರಿಕೆ’ ಎಂಬ ಧ್ಯೇಯವಾಕ್ಯದೊಂದಿಗೆ ಈ ಸಾಲಿನ ಅಂತಾರಾಷ್ಟ್ರೀಯ ನಾಗರಿಕ ವಿಮಾನ ಯಾನ ದಿನವನ್ನು ಆಚರಿಸಲಾಗು ತ್ತಿದೆ. ಅದರಂತೆ ನಾಗರಿಕ ವಿಮಾನ ಯಾನದಲ್ಲಿ ನಾವೀನ್ಯತೆಯ ಪಾತ್ರದ ಬಗ್ಗೆ ತಿಳಿಸುವ ಜತೆಗೆ ತಾಂತ್ರಿಕ ಪ್ರಗತಿ ಮತ್ತು ಸಮಸ್ಯೆಗಳಿಗೆ ಸೃಜನಾತ್ಮಕ ಪರಿಹಾರ ಕಂಡುಕೊಳ್ಳುವ ದಿಸೆಯಲ್ಲಿ ಚಿಂತನೆ ನಡೆಸಲಾಗುತ್ತಿದೆ.
ಆಚರಣೆ ಹೇಗೆ ?
ಅಂತಾರಾಷ್ಟ್ರೀಯ ನಾಗರಿಕ ವಿಮಾನಯಾನ ದಿನವನ್ನು ಐಇಅO ನೇತೃತ್ವದಲ್ಲಿ ನಾಗರಿಕ ವಿಮಾನ ಯಾನಕ್ಕೆ ಸಂಬಂಧಿಸಿದ ವಿವಿಧ ಸಂಸ್ಥೆಗಳ ಸಹಭಾಗಿತ್ವದೊಂದಿಗೆ ಆಚರಿಸಲಾಗು ತ್ತದೆ. ನಾಗರಿಕ ವಿಮಾನಯಾನಕ್ಕೆ ಸಂಬಂಧಿಸಿದಂತೆ ವಿಚಾರಗೋಷ್ಠಿ, ಶೈಕ್ಷಣಿಕ ಉಪನ್ಯಾಸ, ತರಗತಿಗಳನ್ನು ಏರ್ಪಡಿಸಿ ನಾಗರಿಕರಲ್ಲಿ ಅರಿವು ಮೂಡಿಸುವ ಜತೆಯಲ್ಲಿ ನಾಗರಿಕ ವಿಮಾನ ಯಾನ ಕ್ಷೇತ್ರ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತಂತೆ ಅವಲೋಕನ ನಡೆಸಿ ಪರಿಹಾರ ಕಂಡುಕೊಳ್ಳಲು ತಜ್ಞರಿಂದ ಸಲಹೆ ಸೂಚನೆ ಗಳನ್ನು ಪಡೆದುಕೊಳ್ಳಲಾಗುತ್ತದೆ. ಜಾಗತಿಕ ಸಂಪರ್ಕದ ಕೊಂಡಿಯಾಗಿರುವ ನಾಗರಿಕ ವಿಮಾನ ಯಾನ, ಪ್ರವಾ ಸೋದ್ಯಮ, ಜಾಗತಿಕ ವ್ಯಾಪಾರ ವೃದ್ಧಿಸುವ ಜತೆಗೆ ಸಂಸ್ಕೃತಿ ವಿನಿಮಯ ದಲ್ಲಿ ತನ್ನದೇ ಆದ ಮಹತ್ತರ ಪಾತ್ರವನ್ನು ಹೊಂದಿದೆ. ತ್ವರಿತ ಸಾರಿಗೆ ಜಾಲವಾಗಿ ರುವ ನಾಗರಿಕ ವಿಮಾನ ಯಾನ ಸೇವೆಯನ್ನು ಇನ್ನಷ್ಟು ವಿಸ್ತರಿಸುವುದರ ಜತೆಯಲ್ಲಿ ಆಧುನಿಕ ಬದಲಾವಣೆಗಳಿಗೆ ತಕ್ಕಂತೆ ಇಡೀ ವ್ಯವಸ್ಥೆಯನ್ನು ಬಲಪಡಿಸು ವುದು ಅತೀ ಆವಶ್ಯಕವಾಗಿದೆ.
ರಾಧಿಕಾ, ಕುಂದಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Kannada; ಅನಿವಾಸಿ ಕನ್ನಡಿಗರ ಮಕ್ಕಳಲ್ಲೂ ಕನ್ನಡ ಚಿಗುರಲಿ
Kanchi swamiji; ದೇವಸ್ಥಾನಗಳ ಭೂಮಿ ದೇವಸ್ಥಾನಗಳಿಗೇ ಇರಲಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.