Las Vegas: ನೆವಾಡಾ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ… ನಾಲ್ವರು ಮೃತ್ಯು
Team Udayavani, Dec 7, 2023, 9:38 AM IST
ವಾಷಿಂಗ್ಟನ್: ಅಮೆರಿಕದ ಲಾಸ್ ವೇಗಾಸ್ನ ನೆವಾಡಾ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್ನಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಶಂಕಿತ ವ್ಯಕ್ತಿಯೂ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಲಾಸ್ ವೇಗಾಸ್ ಸಿಟಿ ಪೊಲೀಸ್ ಇಲಾಖೆ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ‘ಎಕ್ಸ್’ ನಲ್ಲಿನ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು ಇನ್ನೋರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಜೊತೆಗೆ ಈ ಪ್ರದೇಶದಿಂದ ದೂರ ಉಳಿಯುವಂತೆ ಪೊಲೀಸರು ನಾಗರಿಕರಿಗೆ ಮನವಿ ಮಾಡಿದ್ದಾರೆ.
ಬಿಸಿನೆಸ್ ಸ್ಕೂಲ್ ಮತ್ತು ಇತರ ಸೌಲಭ್ಯಗಳನ್ನು ಹೊಂದಿರುವ ನೆವಾಡಾ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿರುವ ಬೀಮ್ ಹಾಲ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಗಾಯಗೊಂಡವರ ಸ್ಥಿತಿಗತಿ ಹೇಗಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಘಟನೆಗೆ ಸಂಬಂಧಿಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ತಕ್ಷಣ ವಿದ್ಯಾರ್ಥಿಗಳು ಕ್ಯಾಂಪಸ್ ಬಿಟ್ಟು ಹೊರಉಳಿಯುವಂತೆ ಮನವಿ ಮಾಡಿದೆ. ಆದರೆ ಪೊಲೀಸರ ಹೇಳಿಕೆಯ ಪ್ರಕಾರ ಸದ್ಯದ ಪರಿಸ್ಥಿತಿಯಲ್ಲಿ ಕ್ಯಾಂಪಸ್ ಒಳಗೆ ಯಾವುದೇ ಬೆದರಿಕೆ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: Cops Suspended: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ… ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.