Telangana: ತೆಲಂಗಾಣದ 2ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿ
Team Udayavani, Dec 7, 2023, 1:58 PM IST
ಹೈದರಾಬಾದ್: ನವೆಂಬರ್ 30 ರಂದು ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಬ್ಬರದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಅನುಮುಲಾ ರೇವಂತ್ ರೆಡ್ಡಿ ಇಂದು ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹೈದರಾಬಾದ್‌ನ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 1 ಲಕ್ಷ ಜನಸಮೂಹದ ಮುಂದೆ ತೆಲಂಗಾಣ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಅವರು ರೇವಂತ್ ರೆಡ್ಡಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಜೊತೆಗೆ ರಾಜ್ಯದ ಉಪಮುಖ್ಯಮಂತ್ರಿಯಾಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಈ ವೇಳೆ ದಾಮೋದರ ರಾಜ ನರಸಿಂಹ, ಉತ್ತಮ್ ಕುಮಾರ್ ರೆಡ್ಡಿ, ಕೋಮಟಿರೆಡ್ಡಿ ವೆಂಕಟ್ ರೆಡ್ಡಿ, ಸೀತಕ್ಕ, ಪೊನ್ನಂ ಪ್ರಭಾಕರ್, ಶ್ರೀಧರ್ ಬಾಬು, ತುಮ್ಮಲ ನಾಗೇಶ್ವರ್ ರಾವ್, ಕೊಂಡ ಸುರೇಖಾ, ಜೂಪಲ್ಲಿ ಮತ್ತು ಕೃಷ್ಣ ಪೊಂಗುಲೇಟಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ: Mulki: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಹಾರಿ ಹಲವು ಅವಘಡಕ್ಕೆ ಕಾರಣವಾದ ಲಾರಿ
Shri @revanth_anumula takes the oath as the CM of Telangana.
📍 Hyderabad pic.twitter.com/LrioYA0XYu
— Congress (@INCIndia) December 7, 2023
Shri @BhattiCLP takes the oath as the Deputy CM of Telangana. pic.twitter.com/svVaccbjB2
— Congress (@INCIndia) December 7, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.