![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 7, 2023, 6:52 PM IST
ವಿಜಯಪುರ: ಐಸಿಸ್ ಉಗ್ರರೊಂದಿಗೆ ನಾನು ಸಂಪರ್ಕ ಹೊಂದಿರುವ ಆರೋಪವನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಂದು ವಾರದಲ್ಲಿ ಸಾಬೀತು ಮಾಡಿದರೆ ನಾನು ದೇಶ ತೊರೆಯುತ್ತೇನೆ. ಆರೋಪ ಸುಳ್ಳಾದರೆ ಯತ್ನಾಳ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತ ದೇಶ ತೊರೆದು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಮುಸ್ಲಿಂ ಧರ್ಮಗುರು ಸಯ್ಯದ್ ಮೊಹಮ್ಮದ್ ತನ್ವೀರ್ ಪೀರಾ ಹಾಶ್ಮಿ ಸವಾಲು ಹಾಕಿದ್ದಾರೆ.
ತಮ್ಮ ವಿರುದ್ಧ ತನಿಖೆ ನಡೆಸಲು ಕೇಂದ್ರ ಸರ್ಕಾರಕ್ಕೆ ಯತ್ನಾಳ ಪತ್ರ ಬರೆದ ವಿಷಯ ಬಹಿರಂಗವಾದ ಬೆನ್ನಲ್ಲೇ ಪ್ರಕಟಣೆ ನೀಡಿದ ಧರ್ಮಗುರು ಸೈಯದ್ ಮೊಹಮದ್ ತನ್ವೀರ ಹಾಶ್ಮಿ, ನಾನು ಐಎಸ್‍ಐ ಸಂಘಟನೆಯೊಂದಿಗೆ ನಂಟು, ಭಯೋತ್ಪಾಕದರೊಂದಿಗೆ ಸಂಪರ್ಕ ಹೊಂದಿದನ್ನು ಯತ್ನಾಳ ಸಾಬೀತು ಮಾಡಿದರೆ ಭಾರತದ ದೇಶ ತೊರೆದು ಪಲಾಯನ ಮಾಡುತ್ತೇನೆ. ಸಾಬೀತು ಮಾಡದಿದ್ದರೆ ಯತ್ನಾಳ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕೆಂದು ಸವಾಲು ಎಸೆದಿದ್ದಾರೆ.
ನನ್ನ ಮೇಲೆ ಯತ್ನಾಳ ಮಾಡಿರುವ ಆರೋಪಗಳಲ್ಲಿ ಸತ್ಯಾಂಶ ಹೊಂದಿಲ್ಲ. ದಿ.4ರಂದು ಹುಬ್ಬಳ್ಳಿಯಲ್ಲಿ ನಡೆದ ಅವಲಾದ ಗೌಸ್ ಎ ಆಜಮ್ ಸಮ್ಮೇಳನದಲ್ಲಿ ನಾನು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದೆ. ಇದೇ ವೇದಿಕೆಯಲ್ಲಿ ವಿವಿಧ ದರ್ಗಾದ ಪೀಠಾಧೀಶರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ.ಪಾಟೀಲ, ಸೇರಿದಂತೆ ಹಲವು ಮಂತ್ರಿಗಳು-ಶಾಸಕರು, ರಾಜಕೀಯ ಧುರೀಣರು, ಪಾಲ್ಗೊಂಡಿದ್ದರು ಎಂದು ವಿವರಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನದಲ್ಲಿ ಇರುವವರು ಯಾವುದೇ ಕೋಮು ಅಥವಾ ಸಮಾಜದವರಿಗೆ ಸೀಮಿತವಾಗಿಲ್ಲ. ರಾಜಕಾರಣದಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಜನಪ್ರಿಯತೆ ಸಹಿಸದೆ ಹತಾಶರಾಗಿ, ಯತ್ನಾಳ ನನ್ನ ವಿರುದ್ಧ ನೀಡಿರುವ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ಅಂತಾರಾಷ್ಟ್ರೀಯ ಭಯೋತ್ಪಾದನೆ ಖಂಡಿಸುವ ಸಮ್ಮೇಳನದಲ್ಲಿ ದೇಶದ ಪ್ರತಿನಿಧಿಯಾಗಿ ಪಾಲ್ಗೊಂಡಿದ್ದ ನನ್ನ ಬಗ್ಗೆ ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನಿಸಿದ್ದಾರೆ. ನನಗೆ ಐಸಿಸ್ ಜೊತೆ ನಂಟಿ ಎಂಬ ಹೇಳಿಕೆ ಮೂಲಕ ಮುಸ್ಲಿಂ ಸಮಾಜದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಯತ್ನಾಳ ವಿರುದ್ಧ ಪೀರಾ ಕಿಡಿ ಕಾರಿದ್ದಾರೆ.
ತಮ್ಮ ತಮ್ಮ ರಾಜಕೀಯ ಬೇಳೆ ಬೇಯಿಸುವುಕ್ಕಾಗಿ ಇಂಥ ಹೇಳಿಕೆ ನೀಡಿರುವ ಯತ್ನಾಳ, ನಾನು ಐಸಿಸ್ ಉಗ್ರರ ಜೊತೆ ನಂಟಿದೆ ಎಂಬುದನ್ನು ಕೇಂದ್ರ ಮತ್ತು ರಾಜ್ಯದ ಎಲ್ಲಾ ತನಿಖಾ ಸಂಸ್ಥೆಗಳಿಗೆ ದಾಖಲೆ ನೀಡಿ, ಒಂದು ವಾರದಲ್ಲಿ ಸಾಬೀತು ಮಾಡಲಿ ಎಂದು ಆಗ್ರಹಿಸಿದ್ದಾರೆ.
ಒಂದು ವಾರದೊಳಗೆ ಐಸಿಸ್ ಉಗ್ರರ ಜೊತೆಗೆ ನನ್ನ ನಂಟಿದೆ ಎಂಬುದನ್ನು ದಾಖಲೆ ಸಮೇತ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಯತ್ನಾಳ ಶಾಸಕರ ಸ್ಥಾನಕ್ಕೆ ರಾಜಿನಾಮೆ ನೀಡಿ, ಪಾಕಿಸ್ತಾನಕ್ಕೆ ಪಲಾಯನ ಮಾಡಬೇಕೆಂದು ಸವಾಲು ಹಾಕಿದ ಧರ್ಮಗುರು, ನಾನನಷ್ಟೇ ಅಲ್ಲ, ನನ್ನ ಭಕ್ತರು, ಶಿಷ್ಯರು ಐಸಿಸ್ ಜೊತೆ ನಂಟಿದೆ ಎಂದು ಸಾಬೀತು ಪಡಿಸಿದರೆ ನಾನು ದೇಶವನ್ನು ತ್ಯಾಗ ಮಾಡುತ್ತೇನೆ ಎಂದು ಸವಾಲು ಹಾಕಿದ್ದಾರೆ.
ಯತ್ನಾಳ ಅವರು ಮಾಧ್ಯಮದಲ್ಲಿ ಬಿಂಬಿಸುವ ಫೋಟೋಗಳು ಫೆಸ್‍ಬುಕ್‍ನಲ್ಲಿ ನಾನು ಹೊಂದಿರುವ ಸ್ವಂತ ಖಾತೆಯಲ್ಲಿ ಹಾಕಿರುವ ಫೋಟೋಗಳೇ ಆಗಿವೆ. 12 ವರ್ಷಗಳ ಹಿಂದೆ ಇರಾಕ್ ದೇಶದ ಅಂತಾರಾಷ್ಟ್ರೀಯ ಪ್ರಸಿದ್ದ ಮಹಾನ್ ಸೂಫಿ ಮಹೆಬೂಬ ಎ ಸುಭಾನಿ ಗೌಸ ಎ ಆಜಮ ಅವರ ದರ್ಶನಕ್ಕೆ ಹೋಗಿದ್ದೆ ಎಂದು ವಿವರಿಸಿದ್ದಾರೆ.
ಆಗ ಅಲ್ಲಿನ ದರ್ಗಾದ ಖಾಲೀದ್ ಜಿಲಾನಿ ಅವರ ಆರ್ಶೀವಚನ ಪಡೆಯುವ ಸಂಧರ್ಭದಲ್ಲಿ ತೆಗೆದಿರುವ ಫೋಟೋಗಳು. ಮತ್ತೊಂದು ಫೋಟೋ ಖಾಲೀದ ಜಿಲಾನಿ ಅವರ ಅಂಗರಕ್ಷಕ ನನ್ನನ್ನು ಅವರ ಪೀಠಕ್ಕೆ ಕರೆದುಕೊಂಡು ಹೋಗುವ ಸಮಯದಲ್ಲಿ ತೆಗೆಯಲಾಗಿದೆ ಎಂದು ವಿವರಣೆ ನೀಡಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.