J&K: 370ನೇ ವಿಧಿ ರದ್ದು ಬಳಿಕ ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆ ಶೇ.86ರಷ್ಟು ಹೆಚ್ಚಳ!
Team Udayavani, Dec 7, 2023, 5:49 PM IST
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370ನೇ ವಿಧಿಯನ್ನು ಕೇಂದ್ರ ಸರ್ಕಾರ ರದ್ದುಪಡಿಸಿದ ನಂತರ 2023ನೇ ಸಾಲಿನ ಏಳು ತಿಂಗಳಲ್ಲಿ ಕೈಗಾರಿಕಾ ಕ್ಷೇತ್ರಕ್ಕೆ ಶೇ.86ರಷ್ಟು ಹೂಡಿಕೆ ಹರಿದು ಬಂದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Canada;ಥಿಯೇಟರ್ ಗಳಲ್ಲಿ ಹಿಂದಿ ಚಿತ್ರ ವೀಕ್ಷಿಸುತ್ತಿದ್ದವರನ್ನು ಗುರಿಯಾಗಿಸಿ ಸ್ಪ್ರೇ ದಾಳಿ!
2019ರಿಂದ ಈವರೆಗೆ ಜಮ್ಮು-ಕಾಶ್ಮೀರದ ಕೈಗಾರಿಕಾ ಕ್ಷೇತ್ರದ ಹೂಡಿಕೆ 5,319.35 ಕೋಟಿ ರೂಪಾಯಿಗೆ ತಲುಪಿದೆ ಎಂದು ಇಂಡಸ್ಟ್ರೀಸ್ & ಕಾಮರ್ಸ್ ಡಿಪಾರ್ಟ್ ಮೆಂಟ್ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ವಿವರಿಸಿದೆ.
2019ರಲ್ಲಿ ಕೇಂದ್ರ ಸರ್ಕಾರ ಆರ್ಟಿಕಲ್ 370ನೇ ವಿಧಿಯನ್ನು ರದ್ದುಪಡಿಸಿದ ನಂತರ, 2019-20ರಲ್ಲಿ ಜಮ್ಮು-ಕಾಶ್ಮೀರದ ಕೈಗಾರಿಕಾ ಕ್ಷೇತ್ರ 296.64 ಕೋಟಿ ರೂಪಾಯಿ ಹೂಡಿಕೆಗೆ ಸಾಕ್ಷಿಯಾಗಿತ್ತು. ಇದೀಗ 2022-23ರ ಅವಧಿಯವರೆಗೆ ಕೈಗಾರಿಕಾ ಕ್ಷೇತ್ರ ಶೇ.85ರಷ್ಟು ಹೂಡಿಕೆಯನ್ನು ಕಂಡಿರುವುದಾಗಿ ವರದಿ ತಿಳಿಸಿದೆ.
2020-21ರಲ್ಲಿ 412.74 ಕೋಟಿ ರೂಪಾಯಿ, 2021-22ರಲ್ಲಿ 376.76 ಕೋಟಿ ರೂಪಾಯಿಯಷ್ಟು ಕೈಗಾರಿಕಾ ಕ್ಷೇತ್ರದಲ್ಲಿ ಹೂಡಿಕೆಯಾಗಿತ್ತು. 2022-23ರಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ 2,153 ಕೋಟಿ ರೂಪಾಯಿ ಹೂಡಿಕೆಯಾಗಿದೆ.
ಅಧಿಕೃತ ದಾಖಲೆಯಲ್ಲಿ ಉಲ್ಲೇಖಿಸಿದ ಮಾಹಿತಿ ಪ್ರಕಾರ, ಜಮ್ಮು-ಕಾಶ್ಮೀರ ಸರ್ಕಾರವು 88,915 ಕೋಟಿ ರೂಪಾಯಿಯ ಬಂಡವಾಳ ಹೂಡಿಕೆಯ ಪ್ರಸ್ತಾವನೆಯನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದು, ಈ ಮೂಲಕ 3.98 ಲಕ್ಷ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬಹುದಾಗಿದೆ ಎಂದು ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.