Gudibanda: ಮನೆಗೆ ನುಗ್ಗಿ12 ಲಕ್ಷ ರೂ ಮೌಲ್ಯದ ಬಂಗಾರ, ನಗದು ಕಳ್ಳತನ
Team Udayavani, Dec 7, 2023, 8:49 PM IST
ಗುಡಿಬಂಡೆ: ತಾಲೂಕಿನ ಕೊಂಡರೆಡ್ಡಿಹಳ್ಳಿ ಗ್ರಾಮದ ಶ್ರೀರಾಮಪ್ಪ ಎಂಬುವವರ ಮನೆಗೆ ಕಳ್ಳರು ನುಗ್ಗಿ ಸುಮಾರು 12 ಲಕ್ಷ ರೂ. ಬೆಲೆ ಬಾಳುವ ಬಂಗಾರದ ಒಡವೆಗಳು, ಎರಡು ಲಕ್ಷ ರೂ.ನಗದು ಕಳ್ಳತನ ಮಡಿರುವ ಘಟನ ಗುಡಿಬಂಡೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಂಡರೆಡ್ಡಿಹಳ್ಳಿ ಗ್ರಾಮದ ಶ್ರೀರಾಮಪ್ಪ ಎಂಬುವವರ ಮನೆಯ ಮಂದಿಯವರೆಲ್ಲಾ ಬೆಳಿಗ್ಗೆಯೆ ಹತ್ತಿರುದಲ್ಲಿರುವ ಅವರ ಸ್ವಂತ ಹೊಲಕ್ಕೆ ಮನೆಗೆ ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗಿದ್ದು, ಇದನ್ನೇ ಗಮನಸಿದ ಕಳ್ಳರು ಬೆಳಗ್ಗೆ ಸುಮಾರು11.30 ರಿಂದ 12 ಗಂಟೆಯ ಒಳಗೆ, ಮನೆಯಲ್ಲಿ ಯಾರೂ ಇಲ್ಲದೆ ಇರುವುದನ್ನು ಗಮನಿಸಿ, ಮನೆಯ ಬೀಗವನ್ನು ಮುರಿದು, ಬೀರುವಿನಲ್ಲಿದ್ದ ಎರಡು ಲಕ್ಷ ರೂ. ನಗದು, ಬಂಗಾರದ ಒಡವೆಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದ ಶ್ರೀರಾಮಪ್ಪ ಮತ್ತು ಮಗ ಸತೀಶ್ ರವರಿಗೆ ಮನೆಯಾಕೆ ರತ್ನಮ್ಮ ಬೆಳಗ್ಗೆ ಸುಮಾರು 11 ಗಂಟೆಗೆ ಊಟ ತೆಗೆದುಕೊಂಡು ಮನೆಗೆ ಬೀಗ ಹಾಕಿಕೊಂಡು ಹೋಗಿದ್ದು, ಇದೇ ಸಮಯ ನೊಡಿಕೊಂಡು ಕಳ್ಳಲು ಮನೆಯ ಬೀಗ ಮುರಿದು ನಗದು, ಒಡವೆ ದೋಚಿ ಪರಾರಿಯಾಗಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ರೈತ ಶ್ರೀರಾಮಪ್ಪ, ಸತೀಶ್ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿದ್ದು, ಒಳ ಹೋಗಿ ನೋಡಿದಾಗ ಬೀರು ಬಾಗಿಲು ಹೊಡೆದಿರುವುದನ್ನು ನೋಡಿ ಗುಡಿಬಂಡೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ, ಸ್ಥಳಕ್ಕೆ ಪೊಲೀಸ್ ಉಪನಿರೀಕ್ಷಕ ಶಿವಣ್ಣ ಸಿಬ್ಬಂದಿ ಸ್ಥಳಕ್ಕೆ ಪರಿಶೀಲನೆ ನಡೆಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು, ಶ್ವಾನದಳದ ತಂಡದವರು ಅಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.