PoK: ಪಾಕ್‌ ಆಕ್ರಮಿತ ಕಾಶ್ಮೀರ ಜನರಿಗೆ 24 ಕ್ಷೇತ್ರ ಮೀಸಲು ಸ್ತುತ್ಯರ್ಹ

Team Udayavani, Dec 7, 2023, 11:03 PM IST

Amith shah

ಪಾಕ್‌ ಆಕ್ರಮಿತ ಕಾಶ್ಮೀರವೂ ಸೇರಿದಂತೆ ಸಂಪೂರ್ಣ ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎನ್ನುವುದು ನಿರ್ವಿವಾದ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಸ್ತಿತ್ವಕ್ಕೆ ಬಂದ ಅನಂತರ ಈ ಮಾತನ್ನು ಗಟ್ಟಿ ಧ್ವನಿಯಲ್ಲಿ ಪದೇಪದೆ ಹೇಳಲಾಗುತ್ತದೆ ಎನ್ನುವುದು ಮೆಚ್ಚಬೇಕಾದಂಥ ವಿಚಾರವೇ ಹೌದು. ಲೋಕಸಭೆಯಲ್ಲಿ ಬುಧವಾರ ಅಂಗೀಕಾರಗೊಂಡ ಜಮ್ಮು -ಕಾಶ್ಮೀರ ಪುನರ್‌ ಸಂಘಟನೆ (ತಿದ್ದುಪಡಿ)ಮಸೂದೆ ಮತ್ತು ಜಮ್ಮು -ಕಾಶ್ಮೀರ ಮೀಸಲು (ತಿದ್ದುಪಡಿ) ಮಸೂದೆಗಳಲ್ಲಿ ಮಂಡಿಸಲಾಗಿರುವ ವಿಚಾರಗಳು ಸ್ಪಷ್ಟ ಮತ್ತು ನೇರವಾಗಿರುವ ವಿಚಾರಗಳೇ ಆಗಿವೆ.
ವಿಶೇಷವಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದಲ್ಲಿನ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಉದ್ದೇಶಿತ ಜಮ್ಮು – ಕಾಶ್ಮೀರ ವಿಧಾನಸಭೆಯಲ್ಲಿ 24 ಸ್ಥಾನಗಳನ್ನು ಮೀಸಲಾಗಿ ಇರಿಸುವುದು, ಇಬ್ಬರು ನಾಮ ನಿರ್ದೇಶಿತ ಸದಸ್ಯರ ಬದಲಾಗಿ ಐವರನ್ನು ಆ ಸ್ಥಾನಕ್ಕೆ ನೇಮಿಸುವುದನ್ನು ಈ ಮಸೂದೆಯಲ್ಲಿ ಸೇರ್ಪಡೆ ಮಾಡಲಾಗಿದೆ.

ಎಪ್ಪತ್ತು ವರ್ಷಗಳಿಂದ ರಕ್ತ ಮತ್ತು ಕಣ್ಣೀರ ಧಾರೆಗಳನ್ನು ಕಣಿವೆಯ ಜನರು ನೋಡಿದ್ದಾರೆ. ಅದನ್ನು ಒರೆಸಿ, ಸಂತೋಷ ಮತ್ತು ನಗುವಿನ ದಿನಗಳನ್ನು ತರುವ ನಿಟ್ಟಿನಲ್ಲಿ ಇದೊಂದು ಅಂಬೆಗಾಲಿನ ಪ್ರಯತ್ನವೇ ಸರಿ.

ಸದ್ಯಕ್ಕೆ ಜಮ್ಮು – ಕಾಶ್ಮೀರದಲ್ಲಿ ಕ್ಷೇತ್ರಗಳ ಪುನರ್‌ ವಿಂಗಡಣೆಗೆ ಸಂಬಂಧಿಸಿದ ಸಮಿತಿ 2022ರ ಮೇಯಲ್ಲಿ ತನ್ನ ಅಂತಿಮ ವರದಿ ಸಲ್ಲಿಸಿತ್ತು. ಆ ಸಂದರ್ಭದಲ್ಲಿಯೂ ಕೂಡ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾರತದ ಜತೆಗೆ ವಿಲೀನಗೊಳ್ಳಲಿರುವ ಸಂದರ್ಭದಲ್ಲಿ ಆ ಭಾಗದ ಜನರ ಆಶೋತ್ತರಗಳನ್ನು ಪ್ರತಿನಿಧಿಸುವ ನಿಟ್ಟಿನಲ್ಲಿ 24 ಕ್ಷೇತ್ರಗಳನ್ನು ಮೀಸಲಾಗಿ ಇರಿಸುವ ಬಗ್ಗೆ ಪ್ರಸ್ತಾವ ಮಾಡಲಾಗಿತ್ತು. ಸದ್ಯದ ಎರಡು ಮಸೂದೆಗಳಿಂದ ಮತ್ತೂಮ್ಮೆ ಕೇಂದ್ರ ಸರಕಾರ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಮತ್ತು ಅದರಲ್ಲಿ ಯಾವ ರಾಜಿಯೂ ಇಲ್ಲ ಎನ್ನುವ ಅಂಶವನ್ನು ಜಗತ್ತಿಗೇ ಮತ್ತೂಮ್ಮೆ ಸ್ಪಷ್ಟವಾಗಿ ಸಾರಿದಂತಾಗಿದೆ.

ದೇಶಕ್ಕೆ ಸ್ವಾತಂತ್ರ್ಯ ಬಂದ ಸಂದರ್ಭದಿಂದಲೇ 2019ರ ವರೆಗೆ, ಜಾರಿಗೆ ಬಂದಿದ್ದ ಸಂವಿಧಾನದ 370ನೇ ವಿಧಿಯಿಂದಾಗಿ 45 ಸಾವಿರ ಮಂದಿ ಮುಗ್ಧ ನಾಗರಿಕರು ತಮ್ಮದಲ್ಲದ ಅಪರಾಧಕ್ಕಾಗಿ ಭಯೋತ್ಪಾದಕರ ಬಂದೂಕುಗಳಿಗೆ ಆಹುತಿಯಾದರು. ಕಾಶ್ಮೀರಿ ಪಂಡಿತ ಸಮುದಾಯ ಸೇರಿದಂತೆ ದೇಶದ ಮುಕುಟಮಣಿಯಾಗಿರುವ ಜಮ್ಮು-ಕಾಶ್ಮೀರದ 46,631 ಕುಟುಂಬಗಳ 1,57,967 ಮಂದಿ ನಮ್ಮ ದೇಶದಲ್ಲಿಯೇ ನಿರ್ವಸತಿಗರಂತೆ ಬಾಳುವೆ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ಹೊರತಾಗಿರುವ ಇತರ ಪಕ್ಷಗಳ ಸರಕಾರಗಳು ಕಾಶ್ಮೀರದ ಹಿತಾಸಕ್ತಿಯನ್ನು ಅವಗಣಿಸಿದ್ದವು. ಹೀಗಾಗಿ ಅಲ್ಲಿನ ಪರಿಸ್ಥಿತಿ ಕೈಮೀರಿ ಹೋಗಿತ್ತು ಎನ್ನುವುದು ಹಲವರ ವಾದಗಳು ಹೌದಾದರೂ, ಅವುಗಳು ಹೊಂದಿದ್ದ ನಿಲುವುಗಳು ಕಣಿವೆ ರಾಜ್ಯದ ಪರಿಸ್ಥಿತಿಯನ್ನು ಬಾಣಲೆಯಿಂದ ಬೆಂಕಿಗೆ ತಳ್ಳಿದ್ದು ಸುಳ್ಳಲ್ಲ.

2019ರ ಆ.5ರಿಂದ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ಮಾಡಲಾಗಿದೆ. ಆ ದಿನದಿಂದ ಇದುವರೆಗೆ ಅಲ್ಲಿ ಪರಿಸ್ಥಿತಿ ಸುಧಾರಿಸಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. 70 ವರ್ಷಗಳಿಂದ ರಕ್ತ ಮತ್ತು ಕಣ್ಣೀರು ಹೊಳೆಯಂತೆ ಹರಿದು ಹೋಗಿರುವ ಸ್ಥಳದಲ್ಲಿ ಐದು ಅಥವಾ ಹತ್ತು ವರ್ಷಗಳ ಅವಧಿಯಲ್ಲಿ ಸಾಮಾನ್ಯ ಪರಿಸ್ಥಿತಿ ನಿರ್ಮಾಣ ಅಸಾಧ್ಯ. ಆದರೆ ಆ ನಿಟ್ಟಿನಲ್ಲಿ ಪುಟ್ಟ ಹೆಜ್ಜೆಗಳನ್ನು ಇರಿಸಲಾಗಿದೆ ಎನ್ನುವುದು ಹಗಲಿನಷ್ಟೇ ಸತ್ಯ. ಜಮ್ಮು-ಕಾಶ್ಮೀರದಲ್ಲಿ ಸಾಮಾನ್ಯ ಸ್ಥಿತಿ ನಿರ್ಮಾಣ ಆಗಬೇಕು ಎಂಬ ಕಳಕಳಿ ಇರುವ ಮನಃಸ್ಥಿತಿಯವರು ಕೇಂದ್ರ ಸರಕಾರದ ಪ್ರಯತ್ನಗಳಿಗೆ ಬೆಂಬಲ ನೀಡಬೇಕು.

ಟಾಪ್ ನ್ಯೂಸ್

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

TREKKING: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

India Market: ಚೀನ ಬೆಳ್ಳುಳ್ಳಿ ಮೇಲಿನ ನಿಷೇಧ ಕಟ್ಟುನಿಟ್ಟಾಗಿ ಕಾರ್ಯಗತಗೊಳ್ಳಲಿ

supreme-Court

Encroachment: ಅಕ್ರಮ ನಿರ್ಮಾಣಗಳ ತೆರವು: ಸುಪ್ರೀಂಕೋರ್ಟ್‌ ನಿಲುವು ಸ್ವಾಗತಾರ್ಹ

immifra

Illegal immigrants: ಅಕ್ರಮ ವಲಸಿಗರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಅಗತ್ಯ

Fake-Medicine

Medicines: ನಶೆಭರಿತ ಔಷಧಗಳಿಗೆ ಲಗಾಮು ಕಾಳಸಂತೆಯತ್ತಲೂ ಇರಲಿ ನಿಗಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.