CM ಜತೆ ಚರ್ಚಿಸಿ ಸೈಕಲ್ ವಿತರಣೆಗೆ ಕ್ರಮ: ಮಧು
Team Udayavani, Dec 7, 2023, 11:40 PM IST
ಬೆಳಗಾವಿ: ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಸದಸ್ಯ ಪ್ರದೀಪ್ ಈಶ್ವರ್ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಈ ಹಿಂದೆ 2019-20ನೇ ಸಾಲಿನಲ್ಲಿ ಉಚಿತ ಸೈಕಲ್ ವಿತರಣೆ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲಾಗುತ್ತಿಲ್ಲ. ಸೈಕಲ್ ನೀಡುವಂತೆ ವಿದ್ಯಾರ್ಥಿಗಳು ಬೇಡಿಕೆ ಇಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯೊಂದಿಗೆ ಚರ್ಚಿಸಲಾಗುವುದು ಎಂದರು.
ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿ ತಮ್ಮ ವ್ಯಾಪ್ತಿ ಮೀರಿದ ಶಾಲೆಗಳಿಗೆ ಕ್ರಮಿಸಲು ಪ್ರತಿ ವಿದ್ಯಾರ್ಥಿಗೆ ಮಾಸಿಕ 600 ರೂ.ನಂತೆ 6 ತಿಂಗಳಿಂದ ಸಾರಿಗೆ ಭತ್ತೆ ನೀಡಲಾಗುತ್ತಿದೆ. ಅಲ್ಲದೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಕೂಡ ವಿತರಿಸಲಾಗುತ್ತಿದೆ ಎಂದರು.
ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆ ಅಡಿ ಒಂದು ಜತೆ ಶೂ ಮತ್ತು ಎರಡು ಜತೆ ಸಾಕ್ಸ್ ಉಚಿತವಾಗಿ ನೀಡಲಾಗುತ್ತಿದೆ ಎಂದೂ ಸಚಿವರು ಹೇಳಿದರು.
9,604 ಶಾಲಾ ಕೊಠಡಿಗಳ ನಿರ್ಮಾಣ
ಮೂರು ವರ್ಷಗಳಿಗೆ 7,098 ಶಾಲೆಗಳಿಗೆ 9,604 ಕೊಠಡಿಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳಿಗೆ ಒಟ್ಟು 1,297 ಕೋಟಿ ರೂ. ನಿಗದಿಯಾಗಿದ್ದು, 8,940 ಕೋಟಿ ರೂ. ಖರ್ಚಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು. ಸದಸ್ಯ ಯು.ಬಿ. ಬಣಕಾರ್ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕೊಠಡಿಗಳ ನಿರ್ಮಾಣಕ್ಕೆ ಕೊರತೆ ಅನುದಾನವನ್ನು 2023-24ನೇ ಸಾಲಿನಲ್ಲಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಬಜೆಟ್‌ನಲ್ಲಿ ಒದಗಿಸಲಾದ ಅನುದಾನ ಲಭ್ಯತೆ ಆಧರಿಸಿ ಅಗತ್ಯಕ್ಕೆ ಅನುಗುಣವಾಗಿ ಹಂತಹಂತವಾಗಿ ರಾಜ್ಯಾದ್ಯಂತ ಶಾಲೆಗಳಲ್ಲಿ ಕೊಠಡಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಮಲೆನಾಡು ಭಾಗದ ಎಲ್ಲ ಸರಕಾರಿ ನೌಕರರಿಗೆ 6ನೇ ರಾಜ್ಯ ವೇತನ ಆಯೋಗದ ಶಿಫಾರಸಿನಂತೆ ಗಿರಿತಾಣ ಭತ್ತೆ ರದ್ದುಪಡಿಸಿ ಆದೇಶಿಸಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸದ್ಯಕ್ಕೆ ಗಿರಿಭತ್ತೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ.
-ಮಧು ಬಂಗಾರಪ್ಪ, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.