Fraud: ಡೀಸಿ ದಯಾನಂದ ಹೆಸರಿನಲ್ಲಿ ವಂಚನೆ
Team Udayavani, Dec 8, 2023, 12:21 PM IST
ಬೆಂಗಳೂರು: ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಅವರ ಫೋಟೋ ಮತ್ತು ಹೆಸರು ಬಳಸಿಕೊಂಡು ಕಿಡಿಗೇಡಿ ಗಳು ಸಂದೇಶಗಳನ್ನು ಕಳುಹಿಸಿ ಹಣಕ್ಕೆ ಬೇಡಿಕೆ ಇರಿಸಲಾಗಿದ್ದು, ಈ ಸಂಬಂಧ ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜಿಲ್ಲಾಧಿಕಾರಿ ದಯಾನಂದ್ ಅವರು ನೀಡಿದ ದೂರಿನ ಮೇರೆಗೆ ಕೇಂದ್ರ ವಿಭಾಗದ ಸೆನ್ ಠಾಣೆ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವ್ಯಕ್ತಿಗಳ ವಿರುದ್ಧ ತನಿಖೆ ಮುಂದುವರಿಸಿದ್ದಾರೆ.
ದಯಾನಂದ್ ಅವರ ಫೋಟೋ ದುರ್ಬಳಕೆ ಮಾಡಿಕೊಂಡಿರುವ ಆರೋಪಿಗಳು, ಅವರ ಹೆಸರಿನಲ್ಲಿ ವಾಟ್ಸ್ಆ್ಯಪ್ ಸಂಖ್ಯೆಯೊಂದನ್ನು ಸೃಷ್ಟಿಸಿದ್ದಾರೆ. ಅದೇ ಸಂಖ್ಯೆಯಿಂದ ಜಿಲ್ಲಾಡಳಿತದ ಹಲವು ಇಲಾಖೆಗಳ ಅಧಿಕಾರಿಗಳು ಹಾಗೂ ಇತರರಿಗೆ ಸಂದೇಶ ಕಳುಹಿಸಿದ್ದಾರೆ. ಆಗ ತುರ್ತು ಅಗತ್ಯಕ್ಕೆ ಹಣ ಬೇಕಿದೆ. ಈ ಕೂಡಲೇ ಕಳುಹಿಸಿ ಎಂದು ಆರೋಪಿಗಳು ಸಂದೇಶದಲ್ಲಿ ಬರೆದಿದ್ದರು. ಅನುಮಾನಗೊಂಡ ಕೆಲ ಅಧಿಕಾರಿಗಳು, ಜಿಲ್ಲಾಧಿಕಾರಿ ದಯಾನಂದ ಗಮನಕ್ಕೆ ತಂದಿದ್ದಾರೆ.ಈ ಬಳಿಕ ದೂರು ನೀಡಿದ್ದಾರೆ ಎಂದು ಸೆನ್ ಠಾಣೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.