Mizoram ನೂತನ ಮುಖ್ಯಮಂತ್ರಿಯಾಗಿ ಲಾಲ್ಡುಹೋಮ ಪ್ರಮಾಣವಚನ ಸ್ವೀಕಾರ
Team Udayavani, Dec 8, 2023, 12:14 PM IST
ನವದೆಹಲಿ: 2023ರ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಝೋರಾಮ್ ಪೀಪಲ್ಸ್ ಮೂವ್ ಮೆಂಟ್ ನ ನಾಯಕ ಲಾಲ್ಡುಹೋಮ ಅವರು ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ ಅನ್ನು ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದು, ಶುಕ್ರವಾರ (ಡಿಸೆಂಬರ್ 08) ಲಾಲ್ಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಇದನ್ನೂ ಓದಿ:Joram; ಕನ್ನಡದ ಸಾಕಷ್ಟು ಸಿನಿಮಾಗಳು ನನ್ನನ್ನು ತುಂಬ ಕಾಡಿದೆ: ಮನೋಜ್ ಬಾಜಪಾಯಿ
40 ಸದಸ್ಯ ಬಲದ ಮಿಜೋರಾಂ ವಿಧಾನಸಭಾ ಚುನಾವಣೆಯಲ್ಲಿ ಝೋರಾಂ ಪೀಪಲ್ಸ್ ಮೂವ್ ಮೆಂಟ್ಸ್ ಪಕ್ಷ ಬರೋಬ್ಬರಿ 27 ಸ್ಥಾನಗಳಲ್ಲಿ ಜಯಗಳಿಸಿತ್ತು. 1987ರಲ್ಲಿ ಮಿಜೋರಾಂ ರಾಜ್ಯ ರಚನೆಯಾಗಿದ್ದು, ಮತದಾರರು ಕಾಂಗ್ರೆಸ್ ಅಥವಾ ಎಂಎನ್ ಎಫ್ ಗೆ ಅಧಿಕಾರ ನೀಡುತ್ತಿದ್ದು, ಇದೇ ಮೊದಲ ಬಾರಿ ಎರಡೂ ಪಕ್ಷಗಳನ್ನು ತಿರಸ್ಕರಿಸಿ ಝಡ್ ಪಿಎಂಗೆ ಗದ್ದುಗೆ ಏರಲು ಅವಕಾಶ ನೀಡಿದ್ದಾರೆ.
ಡಿಸೆಂಬರ್ 6ರಂದು ಲಾಲ್ಡುಹೋಮ ಅವರು ರಾಜ್ಯಪಾಲ ಹರಿ ಬಾಬು ಕಂಬಂಪತಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರು. ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಲಾಲ್ಡುಹೋಮ ಅವರು ಮಿಜೋರಾಂ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.