Crime: ಪ್ರೇಯಸಿ ಮನೆಯಲ್ಲೇ ಪ್ರಿಯಕರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
Team Udayavani, Dec 8, 2023, 12:55 PM IST
ಬೆಂಗಳೂರು: ಪ್ರೇಯಸಿ ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದ ಪ್ರಿಯಕರ ಆಕೆಯ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿಯ ಕೋಡಿಪಾಳ್ಯದಲ್ಲಿ ನಡೆದಿದೆ.
ಅನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಲು ಗ್ರಾಮದ ರಾಕೇಶ್(26) ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರ. ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಕೋಡಿಪಾಳ್ಯದಲ್ಲಿ ಘಟನೆ ನಡೆದಿದ್ದು, ಗುರುವಾರ ಬೆಳಗ್ಗೆ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.
ಹೆಮ್ಮಿಗೆಪುರ ಮೂಲದ ಯುವತಿ ಕೆಲ ವರ್ಷಗಳಿಂದ ಕೋಡಿಪಾಳ್ಯದಲ್ಲಿ ಬಾಡಿಗೆ ಮನೆಯೊಂದರಲ್ಲಿ ಪೋಷಕರ ಜತೆ ವಾಸವಾಗಿದ್ದಾಳೆ. ಇನ್ನು ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ರಾಕೇಶ್, ಹೆಮ್ಮಿಗೆಪುರದಲ್ಲಿದ್ದ ಸಂಬಂಧಿಕರ ಮನೆಗೆ ಬಂದಾಗ ಯುವತಿಯ ಪರಿಚಯವಾಗಿ, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದ್ದು, ಕಳೆದ ಐದಾರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಆ ಯುವತಿಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಹೀಗಾಗಿ ಯುವತಿ ಆತನಿಂದ ಅಂತರ ಕಾಯ್ದುಕೊಂಡಿದ್ದಳು. ತಾನು ಪ್ರೀತಿಸಿದ ಯುವತಿ ಬೇರೆ ಯುವಕನ ಜತೆ ಓಡಾಡುತ್ತಿರುವುದು ಕಂಡು ಆಕ್ರೋಶಗೊಂಡಿದ್ದ ರಾಕೇಶ್, ಯುವತಿಗೆ ಫೋನ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದ.
ಈ ಬಗ್ಗೆ ಯುವತಿ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ಬುಧವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ನೇರವಾಗಿ ಯುವತಿ ಮನೆಗೆ ಹೋಗಿದ್ದಾನೆ. ತನ್ನನ್ನು ಪ್ರೀತಿಸುವಂತೆ ಕೇಳಿಕೊಂಡಿದ್ದಾನೆ. ಅದಕ್ಕೆ ಯುವತಿ ನಿರಾಕರಿಸಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಜಗಳವಾ ಗಿದ್ದು, ಅದರಿಂದ ಮನನೊಂದ ಯುವಕ ಪ್ರೀತಿಸದಿ ದ್ದರೆ ಸಾಯುವುದಾಗಿ ಬೆದರಿಸಿ ಬಾಟಲ್ ನಿಂದ ತಂದಿದ್ದ ಪೆಟ್ರೋಲ್ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ನೋಡು ನೋಡುತ್ತಿದ್ದಂತೆ ಬೆಂಕಿ ಇಡೀ ದೇಹಕ್ಕೆ ವ್ಯಾಪಿಸಿ ಗಂಭೀರವಾಗಿ ಗಾಯಗೊಂಡು ಅಸ್ವಸ್ಥಗೊಂಡಿದ್ದ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದೇಹದ ಬಹುತೇಕ ಭಾಗಗಳಲ್ಲಿ ಶೇ.60ರಷ್ಟು ಸುಟ್ಟ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದರು.
ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.