ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆಡಳಿತ ವ್ಯವಸ್ಥೆ,ರಾಜಕೀಯ ಪದ್ದತಿ ಅರ್ಥೈಸಿಕೊಳ್ಳಬೇಕು: ಲಾಡ್
Team Udayavani, Dec 8, 2023, 3:27 PM IST
ಸುವರ್ಣ ವಿಧಾನಸೌಧ (ಬೆಳಗಾವಿ): ವಿದ್ಯಾರ್ಥಿ ಜೀವನ ಪ್ರತಿಯೊಬ್ಬರ ಬದುಕಿನಲ್ಲೂ ಮುಖ್ಯ. ಶಾಲಾ ಶಿಕ್ಷಣದೊಂದಿಗೆ ನಮ್ಮ ಆಡಳಿತ ವ್ಯವಸ್ಥೆ, ರಾಜಕೀಯ ಪದ್ದತಿಗಳನ್ನು ಅರ್ಥೈಸಿಕೊಳ್ಳಬೇಕು. ವಿಧಾನಮಂಡಲ ಅಧಿವೇಶನವು ವಿದ್ಯಾರ್ಥಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಎಲ್ಲರಿಗೂ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಜ್ಞಾನ ನೀಡುತ್ತದೆ ಎಂದು ಕಾರ್ಮಿಕ ಇಲಾಖೆ ಸಚಿವರಾದ ಸಂತೋಷ ಎಸ್. ಲಾಡ್ ಹೇಳಿದರು.
ವಿಧಾನಮಂಡಲ ಅಧಿವೇಶನ ವೀಕ್ಷಣೆಗಾಗಿ ತಮ್ಮ ಮತಕ್ಷೇತ್ರ ಕಲಘಟಗಿಯ ಸರಕಾರಿ ಪದವಿ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ಎರಡು ಸದನಗಳ ಕಾರ್ಯಕಲಾಪ ಪರಿಚಯಿಸಿ, ವಿಧಾನಮಂಡಲ ಅಧಿವೇಶನ ಮತ್ತು ಸುವರ್ಣಸೌಧ ನಿರ್ಮಾಣದ ಬಗ್ಗೆ ಮಾಹಿತಿ ನೀಡಿ ಮಾತನಾಡಿದರು.
ಮನುಷ್ಯ ರಾಜಕೀಯ ಜೀವಿ. ಬಲಿಷ್ಠ ಭಾರತ ನಿರ್ಮಾಣ ಆಗಬೇಕಾದರೆ ಇಂದಿನ ಯುವ ಸಮುದಾಯ ಪ್ರಾಮಾಣಿಕವಾದ ಸಮಾಜ ಸೇವೆಯ ದೀಕ್ಷೆ ತೊಡಬೇಕು. ರಾಜಕೀಯ ಪಕ್ಷ, ಆಡಳಿತ, ಸರ್ಕಾರ, ಮಂತ್ರಿಮಂಡಳ, ಅಧಿಕಾರಶಾಹಿ ಬಗ್ಗೆ ಅರಿವು ಹೊಂದಬೇಕು. ಪ್ರತಿಯೊಬ್ಬರು ಮತದಾನ, ಚುನಾವಣೆ ಮುಂತಾದ ರಾಜಕೀಯ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಇದರಿಂದ ಉತ್ತಮ ಜನಪ್ರತಿನಿಧಿ, ಉತ್ತಮ ಸರ್ಕಾರ ಹೊಂದಲು, ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಚಿವ ಸಂತೋಷ ಲಾಡ್ ಅವರು ವಿದ್ಯಾರ್ಥಿಗಳಿಗೆ ಹೇಳಿದರು.
ವಿಧಾನ ಮಂಡಲ ಅಧಿವೇಶನ ನಮ್ಮ ಸಂಸದೀಯ ವ್ಯವಸ್ಥೆ, ಪ್ರಜಾಪ್ರಭುತ್ವದ ಮಹತ್ವ, ಕಾಯ್ದೆ, ಕಾನೂನುಗಳ ರಚನೆ, ಜನಪ್ರತಿನಿಧಿಗಳ ಹಕ್ಕು, ಕರ್ತವ್ಯಗಳನ್ನು ಪರಿಚಯಿಸುತ್ತದೆ. ನನ್ನ ಕ್ಷೇತ್ರದ ನೂರಾರು ಜನ ಅಧಿವೇಶನ ವೀಕ್ಷಣೆಗಾಗಿ ಬೆಳಗಾವಿ ಸುವರ್ಣಸೌಧಕ್ಕೆ ಆಗಿಮಿಸುತ್ತಾರೆ. ವಿಶೇಷವಾಗಿ ವಿದ್ಯಾರ್ಥಿಗಳಿಗೆ ಅಧಿವೇಶನ ವೀಕ್ಷಿಸಲು ನಮ್ಮ ಸಿಬ್ಬಂದಿಗಳ ಸಹಾಯ, ಮಕ್ಕಳಿಗೆ ಉಪಹಾರ, ವಿಧಾನ ಮಂಡಲ ಗ್ರಂಥಾಲಯ ವೀಕ್ಷಣೆಗೆ ಅವಕಾಶ ಮಾಡಿದ್ದೇನೆ ಎಂದರು.
ಕಾಲೇಜು ವಿದ್ಯಾರ್ಥಿಗಳು ಬೆಳಿಗ್ಗೆ ಸುವರ್ಣಸೌಧಕ್ಕೆ ಆಗಮಿಸಿದ ತಕ್ಷಣ, ಮೊದಲ ಮಹಡಿಯಲ್ಲಿ ಸ್ಥಾಪಿಸಿರುವ ವಿಶೇಷ ಕೊಠಡಿಯಲ್ಲಿ ಸಂವಿಧಾನದ ಮೌಲ್ಯಗಳು, ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಪಡೆದುಕೊಂಡರು ಮತ್ತು ಈ ಕುರಿತು ಪ್ರಸ್ತುತ ಪಡಿಸಿದ ಸಾಕ್ಷ್ಯಚಿತ್ರ ವೀಕ್ಷಿಸಿದರು.
ನಂತರ ವಿಧಾನಸಭೆ ಕಲಾಪ, ವಿಧಾನ ಪರಿಷತ್ತ ಕಲಾಪ ವೀಕ್ಷಿಸಿದರು. ವಿಧಾನ ಮಂಡಲ ಗ್ರಂಥಾಲಯಕ್ಕೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.