Actress Leelavathi; ಪ್ರಖ್ಯಾತ ನಟಿ ಲೀಲಾವತಿ ವಿಧಿವಶ
Team Udayavani, Dec 8, 2023, 6:02 PM IST
ಬೆಂಗಳೂರು: ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ ಅವರು ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ನೆಲಮಂಗಲದ ಸೋಲದೇವನ ಹಳ್ಳಿಯ ನಿವಾಸದಲ್ಲೇ ಅವರಿಗೆ ಆರೈಕೆ ಮಾಡಲಾಗುತ್ತಿತ್ತು. ಪುತ್ರ ವಿನೋದ್ ರಾಜ್ ಅವರು ನೋಡಿ ಕೊಳ್ಳುತ್ತಿದ್ದರು.
ದಕ್ಷಿಣ ಕನ್ನಡ ದ ಬೆಳ್ತಂಗಡಿ ಮೂಲದ ಲೀಲಾವತಿ ( ಲೀಲಾ ಕಿರಣ್) ಕನ್ನಡ, ತಮಿಳು ಮತ್ತು ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಭಾರತೀಯ ನಟಿ. 50 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ 600 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದರು. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಂತ ತುಕಾರಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಜನಪ್ರಿಯತೆಯ ಉತ್ತುಂಗಕ್ಕೆ ಏರಿದ್ದರು. ವರು 1999 ರಲ್ಲಿ ಡಾ. ರಾಜ್‌ಕುಮಾರ್ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ಚಂಚಲಾ ಕುಮಾರಿ ನಂತರ ಶಂಕರ್ ಸಿಂಗ್ ಅವರ ನಾಗ ಕನ್ನಿಕಾ ಚಿತ್ರದಲ್ಲಿ ಸಣ್ಣ ಪಾತ್ರಗಳ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಲೀಲಾವತಿ ಅವರು ಮಹಾಲಿಂಗ ಭಾಗವತರ್ ಅವರ ಶ್ರೀ ಸಾಹಿತ್ಯ ಸಾಮ್ರಾಜ್ಯ ನಾಟಕ ಕಂಪನಿಗೆ ಸೇರಿದರು.
ಸುಬ್ಬಯ್ಯ ನಾಯ್ಡು ಅವರ 1958 ರ ಸೂಪರ್ ಹಿಟ್ ಚಲನಚಿತ್ರ ಭಕ್ತ ಪ್ರಹ್ಲಾದ, ಬಳಿಕ ಮಾಂಗಲ್ಯ ಯೋಗ, ಧರ್ಮ ವಿಜಯ ಮತ್ತು ರಣಧೀರ ಕಂಠೀರವ ಮುಂತಾದ ಚಲನಚಿತ್ರಗಳಲ್ಲಿ ನಟಿಸಿ ಗಮನ ಸೆಳೆದರು.
ರಾಣಿ ಹೊನ್ನಮ್ಮ ಚಿತ್ರದಿಂದ ಲೀಲಾವತಿ ಪೂರ್ಣ ಪ್ರಮಾಣದ ನಾಯಕಿಯಾದರು. ಸಂತ ತುಕಾರಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ ಮತ್ತು ಮನ ಮೆಚ್ಚಿದ ಮಡದಿ ಚಿತ್ರಗಳಲ್ಲಿ ನಾಯಕಿ. ಅವರು ಗೆಜ್ಜೆ ಪೂಜೆ ಮತ್ತು ಡಾಕ್ಟರ್ ಕೃಷ್ಣ ಚಿತ್ರದಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದರು. ಮನೋಜ್ಞ ಅಭಿನಯಕ್ಕಾಗಿ ಕರ್ನಾಟಕ ರಾಜ್ಯ ಪ್ರಶಸ್ತಿಯನ್ನು ಪಡೆದಿದ್ದರು.
ಭೂದಾನ ಚಿತ್ರದಲ್ಲಿ ಡಾ. ರಾಜಕುಮಾರ್ ಅವರ ಮಗಳಾಗಿ, ವಾತ್ಸಲ್ಯ ಚಿತ್ರದಲ್ಲಿ ತಂಗಿಯಾಗಿ,ಪ್ರೇಮಮಯಿ ಚಿತ್ರದಲ್ಲಿ ಅತ್ತಿಗೆಯಾಗಿ ವಿವಿಧ ಚಿತ್ರಗಳಲ್ಲಿ ರಾಜಕುಮಾರ್ ಅವರೊಂದಿಗೆ ನಾಯಕಿಯಾಗಿ ಕೆಲಸ ಮಾಡಿದ ಜನ ಮೆಚ್ಚಿದ ಅಪೂರ್ವ ಜೋಡಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ. ಶ್ರಾವಣ ಬಂತು , ವಸಂತಗೀತೆ, ನಾ ನಿನ್ನ ಮರೆಯಲಾರೆ ಮತ್ತು ಜ್ವಾಲಾಮುಖಿಯಲ್ಲಿಯೂ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.