71.50 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ: ಪ್ರಿಯಾಂಕ್ ಖರ್ಗೆ
Team Udayavani, Dec 8, 2023, 11:51 PM IST
ಬೆಳಗಾವಿ: ಜಲ ಜೀವನ್ ಮಿಷನ್ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೆ 46.98 ಲಕ್ಷ ಮನೆಗಳಿಗೆ ಕಾರ್ಯಾತ್ಮಕ ನಳ್ಳಿ ಸಂಪರ್ಕ ಕಲ್ಪಿಸಲಾಗಿದೆ. 71.50 ಲಕ್ಷ ಗ್ರಾಮೀಣ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ವಿಧಾನ ಪರಿಷತ್ನಲ್ಲಿ ಸದಸ್ಯ ಕೇಶವ ಪ್ರಸಾದ್ ಎಸ್. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಒಟ್ಟು 101.17 ಲಕ್ಷ ಗ್ರಾಮೀಣ ಮನೆಗಳಿವೆ. ಜಲಜೀವನ್ ಮಿಷನ್ ಯೋಜನೆಯಡಿ ಇಲ್ಲಿಯವರೆಗೆ 71.50 ಲಕ್ಷ ಗ್ರಾಮೀಣ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಒದಗಿಸಲಾಗಿದೆ. ಈ ಯೋಜನೆಗೆ ಕೇಂದ್ರ ಸರಕಾರ 6,918.31 ಕೋಟಿ ರೂ.ಹಾಗೂ ರಾಜ್ಯ ಸರಕಾರ 9226.09 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಜಲಜೀವನ್ ಮಿಷನ್ ಕಾರ್ಯಕ್ರಮದಡಿ ಸುಸ್ಥಿರ ಜಲಮೂಲವನ್ನು ಆಧರಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯ ಕಳಪೆ ಕಾಮಗಾರಿಗಳ ದೂರುಗಳನ್ನು ಪರಿಗಣಿಸಿದ್ದು, ಕಾಮಗಾರಿಗಳನ್ನು 3ನೇ ವ್ಯಕ್ತಿ ತಪಾಸಣೆ ಸಂಸ್ಥೆಯಿಂದ ಪರಿಶೀಲಿಸಲು ತೀರ್ಮಾನಿಸಲಾಗಿದೆ. ಅದರಂತೆ ಬ್ಯೂರೋ ವೆರಿಟಿಸ್ (ಇಂ) ಸಂಸ್ಥೆಯಿಂದ ಮೂರನೇ ವ್ಯಕ್ತಿ ತಪಾಸಣೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.