Karwar; ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
Team Udayavani, Dec 9, 2023, 2:05 PM IST
ಕಾರವಾರ: ನಗರದ ಕೆ.ಇ. ಬಿ. ರಸ್ತೆಯಲ್ಲಿರುವ ಇಂದಿರಾ ಕ್ಯಾಂಟಿನ್ ಗೆ ಇಂದು ಅನಿರೀಕ್ಷಿತವಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಬೆಳಗಿನ ಉಪಹಾರ ಸೇವಿಸಿ, ಆಹಾರದ ರುಚಿ ಮತ್ತು ಗುಣಮಟ್ಟದ ಬಗ್ಗೆ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ಯಾಂಟಿನ್ ನಲ್ಲಿ ಶುಚಿ ಮತ್ತು ರುಚಿಗೆ ಯಾವಾಗಲೂ ಹೆಚ್ಚಿನ ಪ್ರಥಮಾದ್ಯತೆ ನೀಡುವಂತೆ ನಿರ್ದೇಶನ ನೀಡಿದ ಜಿಲ್ಲಾಧಿಕಾರಿಗಳು, ಕ್ಯಾಂಟಿನ್ ಉಪಯೋಗಕ್ಕೆ ನೀಡಿರುವ ಫ್ರಿಡ್ಜ್ ಮತ್ತಿತರ ಯಂತ್ರೋಪಕರಣಗಳನ್ನು ವ್ಯವಸ್ಥಿತವಾಗಿ ಬಳಸುವಂತೆ ಹಾಗೂ ಶುದ್ದ ಕುಡಿಯುವ ಯಂತ್ರದ ಮೂಲಕ ಗ್ರಾಹಕರಿಗೆ ನೀರು ಒದಗಿಸುವಂತೆ ಸೂಚನೆ ನೀಡಿದರು.
ಸರ್ಕಾರ ಸಾರ್ವಜನಿಕರಿಗೆ ಅತ್ಯಂತ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರ ಒದಗಿಸುವ ಉದ್ದೇಶದಿಂದ ಆರಂಭಿಸಿರುವ ಇಂದಿರಾ ಕ್ಯಾಂಟಿನ್ ಸೇವೆಯನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯುವ ಮೂಲಕ ಕಡಿಮೆ ವೆಚ್ಚದಲ್ಲಿ ಶುಚಿ ಮತ್ತು ರುಚಿಯಾದ ಆಹಾರ ಸೇವನೆ ಮಾಡುವಂತೆ ತಿಳಿಸಿದರು.
ಪ್ರತಿ ದಿನದ ಮೆನು ಪ್ರಕಾರವೇ ಆಹಾರ ತಯಾರಿಸಿ, ಗ್ರಾಹಕರಿಗೆ ವಿತರಿಸುವಂತೆ ಕ್ಯಾಂಟಿನ್ ಸಿಬ್ಬಂದಿಗೆ ಸೂಚನೆ ನೀಡಿದರು.
ಇಂದಿರಾ ಕ್ಯಾಂಟಿನ್ ನಲ್ಲಿ ಪ್ರತಿ ದಿನ ಬೆಳಗ್ಗೆ ಉಪಹಾರ ಮತ್ತು ಮಧ್ಯಾಹ್ನ ಹಾಗೂ ರಾತ್ರಿ ಊಟದ ವ್ಯವಸ್ಥೆಯಿದ್ದು, ಉಪಹಾರಕ್ಕೆ ರೂ.5 ಮತ್ತು ಊಟಕ್ಕೆ ರೂ.10 ದರ ಮಾತ್ರ ನಿಗದಿಪಡಿಸಿದೆ.
ಜಿಲ್ಲಾಧಿಕಾರಿ ಅವರು ಕ್ಯಾಂಟಿನ್ ನಲ್ಲಿ ತಯಾರಿಸಿದ್ದ ಮಸಾಲ ರೈಸ್ ಸವಿದು, ರುಚಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.