Sullia ಐವರ್ನಾಡು ಸರಕಾರಿ ಶಾಲೆಯಿಂದ ನಗದು ಕಳವು
Team Udayavani, Dec 9, 2023, 10:25 PM IST
ಸುಳ್ಯ: ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗ ಮುರಿದು ಒಳನುಗ್ಗಿ ನಗದು ಕಳವು ನಡೆಸಿರುವ ಘಟನೆ ಗುರುವಾರ ರಾತ್ರಿ ನಡೆದಿರುವುದು ಶುಕ್ರವಾರ ಬೆಳಕಿಗೆ ಬಂದಿದೆ.
ಮುಖ್ಯ ಶಿಕ್ಷಕರು ಶುಕ್ರವಾರ ಬೆಳಗ್ಗೆ ಶಾಲೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಶಾಲಾ ಮುಖ್ಯ ಶಿಕ್ಷಕರ ಕೊಠಡಿಯ ಗೋದ್ರೆಜ್ನಲ್ಲಿ ಇರಿಸಿದ್ದ ಮಕ್ಕಳ ಸಂಚಯಿತ ನಿಧಿಗೆ ಸಂಗ್ರಹವಾಗಿದ್ದ 9,380 ರೂ. ಹಾಗೂ ಶಾಲೆಯಿಂದ ಸ್ಟೇಷನರಿ ಸೊತ್ತನ್ನು ಮಕ್ಕಳಿಗೆ ಮಾರಾಟ ಮಾಡಿ ಬಂದ ಒಟ್ಟು 21,414 ರೂ ಹಣವನ್ನು ಕಳವುಗೈಯಲಾಗಿದೆ.
ಬಾಗಿಲಿನ ಬೀಗವನ್ನು ಮುರಿದು, ಡ್ರಾವರ್ನಲ್ಲಿದ್ದ ಕೀ ಸಹಾಯದಿಂದ ಗೋದ್ರೇಜ್ ತೆರೆದು ಕೃತ್ಯ ಎಸಗಿರುವುದು ಪತ್ತೆಯಾಗಿದೆ. ಒಟ್ಟು 30,794 ರೂ. ಕಳ್ಳರ ಪಾಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದರು. ಬೆಳ್ಳಾರೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ಮುಖ್ಯಗುರು ನೀಡಿದ ದೂರಿನಂತೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.