Mangaluru, ಉಡುಪಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್
Team Udayavani, Dec 9, 2023, 11:22 PM IST
ದ.ಕ.: 13,618 ಪ್ರಕರಣ ಇತ್ಯರ್ಥ: 16,94,65,274 ಕೋ.ರೂ. ಪರಿಹಾರ ವಸೂಲು
ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ “ರಾಷ್ಟ್ರೀಯ ಲೋಕ ಅದಾಲತ್’ ಕಾರ್ಯಕ್ರಮವನ್ನು ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಒಟ್ಟು 47 ಬೈಠಕ್ಗಳು ನಡೆದವು. ಒಟ್ಟು 22,135 ಪ್ರಕರಣಗಳು ಪರಿಗಣಿಸಲಾಗಿದ್ದು, ಅದರಲ್ಲಿ 13,618 ಪ್ರಕರಣಗಳು ರಾಜಿಯಲ್ಲಿ ಇತ್ಯರ್ಥವಾದವು. ರಾಜಿ ಮೊತ್ತ ಒಟ್ಟು 16,94,65,274 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಹಾಗೂ ನ್ಯಾಯಾಧೀಶರಾದ ರವೀಂದ್ರ ಎಂ. ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ತಿಳಿಸಿದರು.
ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರ ರಾಜಿಯಾಗಬಹುದಾದ ಪ್ರಕರಣ ಗಳನ್ನು ಸಾರ್ವಜನಿಕರು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥ ಪಡಿಸಿಕೊಂಡರು.
ಉಡುಪಿ: 45,975 ಪ್ರಕರಣ ಇತ್ಯರ್ಥ: 19,94,22,086 ಪರಿಹಾರ ವಸೂಲು
ಉಡುಪಿ: ಉಡುಪಿಯಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ 45,975 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಉಡುಪಿ, ಕುಂದಾಪುರ, ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಯಿತು.
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ 40, ಚೆಕ್ ಅಮಾನ್ಯ 332, ಬ್ಯಾಂಕ್/ಹಣ ವಸೂಲಾತಿ 17, ಎಂವಿಸಿ 148, ಕೌಟುಂಬಿಕ 3, ಸಿವಿಲ್ 174, ಇತರ ಕ್ರಿಮಿನಲ್ ಪ್ರಕರಣ 1,641 ಹಾಗೂ ವಾಜ್ಯ ಪೂರ್ವ ದಾವೆ 43,620 ಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿ 19,94,22,086 ಪರಿಹಾರ ಮೊತ್ತ ಘೋಷಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.