Hyderabad; ಆಸ್ಪತ್ರೆಗೆ ಭೇಟಿ ನೀಡಿ ಕೆಸಿಆರ್ ಯೋಗಕ್ಷೇಮ ವಿಚಾರಿಸಿದ ಸಿಎಂ ರೇವಂತ್ ರೆಡ್ಡಿ
Team Udayavani, Dec 10, 2023, 3:01 PM IST
ಹೈದರಾಬಾದ್: ತೆಲಂಗಾಣ ನೂತನ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಹೈದರಾಬಾದ್ನ ಯಶೋದಾ ಆಸ್ಪತ್ರೆಯಲ್ಲಿ ಬಿಆರ್ ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಸೊಂಟದ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ವಿಶ್ರಾಂತಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಕಲ್ವಕುಂಟ್ಲ ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದೆ ಎಂದು ರೆಡ್ಡಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವೆ ಡಿ. ಅನಸೂಯಾ ಸೀತಕ್ಕ ಮತ್ತು ಮಾಜಿ ಸಚಿವ ಶಬ್ಬೀರ್ ಅಲಿ ಜತೆಗಿದ್ದರು. ಸಿರ್ಸಿಲ್ಲಾ ಶಾಸಕ , ಕೆಸಿಆರ್ ಅವರ ಪುತ್ರ ಕೆ.ಟಿ. ರಾಮರಾವ್ ಆಸ್ಪತ್ರೆಯಲ್ಲಿ ಉಪಸ್ಥಿತರಿದ್ದರು.
ಆಸ್ಪತ್ರೆಯ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ರೆಡ್ಡಿ, ಕೆಸಿಆರ್ ಅವರು ಚೇತರಿಸಿಕೊಳ್ಳುತ್ತಿದ್ದು, ಮಾಜಿ ಸಿಎಂ ಅವರ ಆರೋಗ್ಯದ ಪ್ರಗತಿ ಪರಿಶೀಲನೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ರಾವ್ ಅವರು ವಿಧಾನಸಭೆಗೆ ಬಂದು ತಮ್ಮ ಅಮೂಲ್ಯ ಸಲಹೆಗಳನ್ನು ಸರಕಾರಕ್ಕೆ ನೀಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.