Chikaballapura: ನನೆಗುದಿಗೆ ಬಿದ್ದ ರೈಲ್ವೆ ಕಾಮಗಾರಿ ಫೇಸ್‌ ಬುಕ್ ನಲ್ಲಿ ಪೂರ್ಣ


Team Udayavani, Dec 10, 2023, 6:22 PM IST

Chikaballapura: ನನೆಗುದಿಗೆ ಬಿದ್ದ ರೈಲ್ವೆ ಕಾಮಗಾರಿ ಫೇಸ್‌ ಬುಕ್ ನಲ್ಲಿ ಪೂರ್ಣ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿನ ಚಿಕ್ಕಬಳ್ಳಾಪುರ-ಗೌರಿಬಿದ ನೂರು ನಡುವಿನ ಹಾಗೂ ಚಿಕ್ಕಬಳ್ಳಾಪುರ ಹಾಗೂ ಬಾಗೇಪಲ್ಲಿ ವಯಾ ಪುಟ್ಟಪರ್ತಿ ರೈಲ್ವೆ ಕಾಮಗಾರಿಗಳು ಹಲವು ವರ್ಷಗಳಿಂದ ತೀವ್ರ ನನೆಗುದಿಗೆ ಬಿದ್ದರೂ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಮಾತ್ರ ತಮ್ಮ ಫೇಸ್‌ಬುಕ್‌ನಲ್ಲಿ ರೈಲ್ವೆ ಕಾಮಗಾರಿಗಳು ಪೂರ್ಣಗೊಂಡಿ ರು ವುದಾಗಿ ಮಾಡಿರುವ ಪೋಸ್ಟರ್‌ಗಳು ಇದೀಗ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

ಹೌದು, 2009, 2014 ರಲ್ಲಿ ಎರಡು ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿ ಮೂರನೇ ಬಾರಿಗೆ ಹ್ಯಾಟ್ರಿಕ್‌ ಗೆಲುವು ಸಾಧಿಸಲಾಗದೇ ಸೋತ ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾಲ್ಕನೇ ಬಾರಿ 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಭರದ ತಯಾರಿ ನಡೆಸಿದ್ದಾರೆ.

ಸಾರ್ವಜನಿಕರ ವಲಯದಲ್ಲಿ ಚರ್ಚೆ:  ಆದರೆ, ಮೊಯ್ಲಿ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಫೇಸ್‌ಬುಕ್‌ನಲ್ಲಿ ಸಾಕಷ್ಟು ಅಕ್ಟೀವ್‌ ಆಗಿದ್ದು, ಪ್ರತಿ ದಿನ ಒಂದಲ್ಲ ಒಂದು ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಕುರಿತು ಅದರಲ್ಲೂ ,ಮುಖ್ಯಮಂತ್ರಿಯಾಗಿ ಹಾಗೂ ಸಂಸದ   ರಾಗಿ ಕೇಂದ್ರ ಸಚಿವರಾಗಿ ತಮ್ಮ ಅವಧಿಯಲ್ಲಿ ಮಾಡಿದ ಸಾಧನೆ, ಜನಪರ ಯೋಜನೆ, ಕಾರ್ಯಕ್ರಮಗಳ ಬಗ್ಗೆ ಪೋಸ್ಟರ್‌ಗಳನ್ನು ಅಪ್ಲೋಡ್‌ ಮಾಡುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳದೇ ರೈಲ್ವೆ ಕಾಮಗಾರಿಗಳ ವಿಚಾರದಲ್ಲಿ ಇನ್ನೂ ಕಾಮಗಾರಿ ದಶಕಗಳಿಗೆ ನನೆಗುದಿಗೆ ಬಿದ್ದರೂ, ರೈಲ್ವೆ ಕಾಮಗಾರಿಗಳು ಮುಗಿದು ಸಾರ್ವ ನಿಕರು ಬಳಸುತ್ತಿ ದ್ದಾರೆಂಬ ಪೋಸ್ಟರ್‌ಗಳು ಇದೀಗ ಜಿಲ್ಲೆಯ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗುರಿಯಾಗಿದೆ.

ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾದಂತೆ ಕಾಂಗ್ರೆಸ್‌, ಬಿಜೆಪಿ ವಲಯದಲ್ಲಿ ಟಿಕೆಟ್‌ ಆಕಾಂಕ್ಷಿ ಗಳು ಚುನಾವಣಾ ಅಖಾಡಕ್ಕೆ ಇಳಿದು ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ವಿವಿಧ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಚುನಾವಣಾ ಪ್ರಚಾರದ ಭರಾಟೆತನ್ನು ಶುರು ಮಾಡಿದ್ದಾರೆ. ಆದರೆ ಪ್ರಚಾರ ಭರಾಟೆಯಲ್ಲಿ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಈ ಹಿಂದೆ ತಮ್ಮ ಅಧಿಕಾರ ಅವಧಿಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳ ಪಕ್ಷಿನೋಟದ ಪೋಸ್ಟರ್‌ಗಳನ್ನು ಹಾಕುವ ಭರದಲ್ಲಿ ಕಾಮಗಾರಿಗಳು ನಡೆಯದಿದ್ದರೂ, ನಡೆದಿವೆಯೆಂದು ಹೇಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ.

ಏನಿದು ಮೊಯ್ಲಿ ಫೇಸ್‌ಬುಕ್‌ ಬರಹ?:

ಜಿಲ್ಲೆಯ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ನಡುವೆ ರೈಲ್ವೆ ಹಳಿ ನಿರ್ಮಾಣ ಕಾರ್ಯ ಸಮೀಕ್ಷೆ ಹಂತದಲ್ಲಿಯೆ ಇದ್ದರೂ ಮೊಯ್ಲಿ ಮಾತ್ರ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಡುವೆ 44 ಕಿ.ಮೀ ಉದ್ದದ ಹೊಸ ರೈಲು ಮಾರ್ಗದ ಯೋಜನೆ 367.77 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ ಎಂದು ಬರೆದುಕೊಂಡಿದ್ದಾರೆ. ಮತ್ತೂಂದು ಪೋಸ್ಟ್‌ನಲ್ಲಿ ಚಿಕ್ಕಬಳ್ಳಾಪುರ-ಬಾಗೇಪಲ್ಲಿ-ಸತ್ಯಸಾಯಿ ಪ್ರಶಾಂತಿ ನಿಲಯಂ (ಪುಟ್ಟಪರ್ತಿ) ನಡುವಿನ 103 ಕಿ,ಮೀ ಉದ್ದದ ಹೊಸ ಬ್ರಾಡ್‌ ಗೇಜ್‌ ರೈಲ್ವೆ ಮಾರ್ಗ ಯೋಜನೆಯು ಸುಮಾರು 692.43 ಕೊಟಿ ವೆಚ್ಚದಲ್ಲಿ ಯಶಸ್ವಿಯಾಗಿ ನಿರ್ಮಾಣಗೊಂಡಿದೆಂದು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ ನೆಟ್ಟಿಗರ ಟೀಕೆಗೆ ಗುರಿಯಾಗಿದ್ದಾರೆ.

ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Ola Scooter; ರಿಪೇರಿಗೆ 90000 ರೂ.ಬಿಲ್‌: ಸ್ಕೂಟರ್‌ ಒಡೆದು ಹಾಕಿದ ಗ್ರಾಹಕ

Police

Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು

1-yadu

Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್‌

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.