BJP; ಯತ್ನಾಳ್ ದೊಡ್ಡ ನಾಯಕನಾಗುವ ಹಗಲುಗನಸು ಬಿಟ್ಟು ಬಿಡಲಿ: ರೇಣುಕಾಚಾರ್ಯ

ಯತ್ನಾಳ್ ಅವರಿಗೆ ತತ್ ಕ್ಷಣವೇ ನೋಟಿಸ್ ನೀಡಬೇಕು...

Team Udayavani, Dec 10, 2023, 9:58 PM IST

renukaacharya

ದಾವಣಗೆರೆ: ವಿಜಯಪುರ ಶಾಸಕ ಯತ್ನಾಳ್ ಅವರು ಯಡಿಯೂರಪ್ಪ, ವಿಜಯೇಂದ್ರ ಅವರನ್ನ ಪದೆ ಪದೇ ಟೀಕೆ ಮಾಡುವುದರಿಂದ ದೊಡ್ಡ ಮಟ್ಟದ ನಾಯಕ ಆಗಬಹುದು ಎಂಬ ಹಗಲುಗನಸು ಕಾಣುವುದ ಬಿಡಿ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸಲಹೆ ನೀಡಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರು ದೊಡ್ಡ ನಾಯಕರ ಟೀಕೆ ಮಾಡು ವುದರಿಂದ ತಾವೂ ದೊಡ್ಡ ಮಟ್ಟದ ನಾಯಕರಾಗುತ್ತೇನೆ ಎಂಬ ಭ್ರಮಾಲೋಕದಲ್ಲಿರುವ ಅವರು ದೊಡ್ಡ ಮಟ್ಟದ ನಾಯಕನಾಗಲು ಸಾಧ್ಯವೇ ಇಲ್ಲ. ಗಲುಗನಸು,ಭ್ರಮಾಲೋಕದಿಂದ ಯತ್ನಾಳ್ ಹೊರ ಬರಬೇಕು ಎಂದು ಆಶಿಸಿದರು.

ನಮಗೂ ಯತ್ನಾಳ್ ಅವರಂತೆಯೇ ಏರುಧ್ವನಿಯಲ್ಲಿ ಮಾತನಾಡಲಿಕ್ಕೆ ಬರುತ್ತದೆ. ಯಡಿಯೂರಪ್ಪ ಅವರನ್ನ ಟೀಕೆ ಮಾಡುವುದರಿಂದ ದೊಡ್ಡ ನಾಯಕರಾಗಲು ಸಾಧ್ಯ ಇಲ್ಲ. ಪಕ್ಷದ ಸಂಘಟನೆಯಿಂದ ಮೇಲೆ ಬರಲಿ. ಯತ್ನಾಳ್ ಅವರನ್ನ ಬಿಜೆಪಿಗೆ ಕರೆತಂದು, ಸಚಿವರನ್ನಾಗಿ ಮಾಡಿದ್ದೇ ಯಡಿಯೂರಪ್ಪ ಅವರು. ಹಿಂದಿನ ಸರ್ಕಾರ ದಲ್ಲಿ ಮಂತ್ರಿ ಮಾಡಲಿಲ್ಲ ಎಂದು ಈಗಲೂ ಟೀಕೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನಗತ್ಯವಾಗಿ ವಿಜಯೇಂದ್ರ ಅವರನ್ನ ಟೀಕೆ ಮಾಡುವುದರಿಂದ ಯತ್ನಾಳ್ ಅವರಿಗೆ ಯಾವುದೇ ರೀತಿಯಲ್ಲಿ ಪ್ರಯೋಜನ ಆಗುವುದೂ ಇಲ್ಲ. ಅದು ಅವರಿಗೆ ಶೋಭೆಯೂ ಅಲ್ಲ. ಅವರ ವ್ಯಕ್ತಿತ್ವಕ್ಕೇ ಧಕ್ಕೆ ಆಗುತ್ತದೆ. ಯತ್ನಾಳ್ ಅಡ್ಜೆಸ್ಟ್‌ಮೆಂಟ್ ರಾಜಕಾರಣ ಮಾಡುತ್ತಾರೆ. ಕಾಲಕ್ಕೆ ತಕ್ಕಂತೆ ಬದಲಾಗುತ್ತಾರೆ. ಅವರ ಹೊಂದಾಣಿಕೆ ರಾಜಕಾರಣ ಯಾರೊಂದಿಗೆ ಇದೆ ಎಂಬುದು ಎಲ್ಲವೂ ಗೊತ್ತಿದೆ. ನನ್ನ ಮತ್ತು ಯತ್ನಾಳ್ ನಡುವಿನ ಸಂಬಂಧ ಚೆನ್ನಾಗಿಯೇ ಇದೆ. ಆದರೂ, ಅವರು ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಮಾತನಾಡುವುದೇಕೆ ಎಂದು ಪ್ರಶ್ನಿಸಿದರು.

ಪದೆ ಪದೇ ಪಕ್ಷದ ಮುಖಂಡರಾದ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಟೀಕೆ ಮಾಡುವ ಮೂಲಕ ಮುಜುಗರ ತರುತ್ತಿರುವ ಯತ್ನಾಳ್ ಅವರಿಗೆ ತತ್ ಕ್ಷಣವೇ ನೋಟಿಸ್ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.