Udupi ಶಾಲೆಗಳಲ್ಲಿ ಸುರಕ್ಷೆಗೆ ಆದ್ಯತೆ:ನಿರ್ದೇಶ


Team Udayavani, Dec 10, 2023, 11:55 PM IST

Udupi ಶಾಲೆಗಳಲ್ಲಿ ಸುರಕ್ಷೆಗೆ ಆದ್ಯತೆ:ನಿರ್ದೇಶ

ಉಡುಪಿ: ಶಾಲಾ ಮಕ್ಕಳನ್ನು ಶೈಕ್ಷಣಿಕ ಚಟುವಟಿಕೆ ಹೊರತುಪಡಿಸಿ ಅನ್ಯ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತಿಲ್ಲ ಹಾಗೂ ಶಾಲೆಯನ್ನು ಮೇಲಧಿಕಾರಿಗಳ ಅನುಮತಿ ಇಲ್ಲದೇ ಶೈಕ್ಷಣಿಕೇತರ ಚಟುವಟಿಕೆಗೆ ಬಳಸುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಎಲ್ಲ ಶಾಲಾಡಳಿತ ಮಂಡಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆ (ಪಠ್ಯ/ ಪಠ್ಯೇತರ) ಹೊರತುಪಡಿಸಿ ಸಂಘ-ಸಂಸ್ಥೆಗಳ ಕಾರ್ಯಕ್ರಮ ಅಥವಾ ಇನ್ಯಾವುದೋ ಖಾಸಗಿ ಸಮಾರಂಭ, ರಾಜಕೀಯ ಪಕ್ಷಗಳ ಸಭೆ, ಸಮಾವೇಶ ಸಹಿತ ಯಾವುದೇ ಕಾರ್ಯಕ್ರಮಕ್ಕೂ ಶಾಲಾ ದಿನಗಳಲ್ಲಿ ಕಳಿಸುವಂತಿಲ್ಲ ಎಂಬ ಸ್ಪಷ್ಟ ನಿರ್ದೇಶನವಿದೆ.

ಆದರೆ ಕೆಲವು ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಈ ನಿಯಮ ಉಲ್ಲಂಘನೆಯಾಗುತ್ತಲೇ ಇರುತ್ತದೆ. ಇದಕ್ಕೆಲ್ಲ ಕಡಿವಾಣ ಹಾಕಲು ಇಲಾಖೆ ಈಗ ಮುಂದಾಗಿದೆ.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಹೊರತುಪಡಿಸಿ ಇತರ ಚಟುವಟಿಕೆಗಳಿಗೆ ಇಲಾಖೆಯ ಅನುಮತಿ ಇಲ್ಲದೇ ತೊಡಗಿಸಿಕೊಳ್ಳುವುದು ಅಥವಾ ಶಾಲಾ ಹಂತದಲ್ಲೇ ಇದಕ್ಕೆ ಅನುಮತಿ ನೀಡಲು ಅವಕಾಶ ಇರುವುದಿಲ್ಲ. ವಿದ್ಯಾರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ಶೈಕ್ಷಣಿಕ ಚಟು ವಟಿಕೆಗಳಲ್ಲೇ ತೊಡಗಿಸಿ ಕೊಳ್ಳಬೇಕು ಎಂದು ಶಾಲಾಡಳಿತ ಮಂಡಳಿಗಳಿಗೆ ಡಿಡಿಪಿಐ, ಬಿಇಒಗಳ ಮೂಲಕ ಸೂಚಿಸಿದೆ.

ಶಾಲಾವರಣದ ಸದ್ವಿನಿಯೋಗ
ಶಾಲಾವರಣವನ್ನು ಶಾಲಾ ಮಕ್ಕಳ ದೈನಂದಿನ ಪಾಠ, ಪ್ರವಚನ, ಪಠ್ಯೇತರ ಚಟುವಟಿಕೆಗಳು, ಕ್ರೀಡೆ, ಆಟೋಟ, ಶಾರೀರಿಕ ಶಿಕ್ಷಣ, ವ್ಯಾಯಾಮ ಮೊದಲಾದ ಚುಟವಟಿಕೆಗಳಿಗೆ ಮಾತ್ರ ಬಳಸಬೇಕು. ಶಾಲಾ ಮೈದಾನ ಅಥವಾ ಕೊಠಡಿಗಳನ್ನು ಶಿಕ್ಷಣಕ್ಕೆ ಹೊರತಾದ ಚಟುವಟಿಕೆಗಳಿಗೆ ಸರಕಾರ ಅಥವಾ ಇಲಾಖೆಯ ಅನುಮತಿ ಇಲ್ಲದೇ ಬಳಸುವಂತಿಲ್ಲ ಹಾಗೂ ಶಾಲಾ ಹಂತದಲ್ಲಿ ಇದಕ್ಕೆ ಅನುಮತಿ ನೀಡ ಬಾರದು. ಸರಕಾರದ ನಿಯಮ ಮೀರಿ ಅನುಮತಿ ನೀಡಿದಲ್ಲಿ ಸಂಬಂಧಪಟ್ಟ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪೊಲೀಸರಿಗೆ ಮಾಹಿತಿ ನೀಡಿ
ಶಾಲೆಗೆ ಸಂಬಂಧವಿರದ ಯಾವುದೇ ವ್ಯಕ್ತಿಗಳು ಶಾಲಾವರಣದಲ್ಲಿ ಅನಗತ್ಯವಾಗಿ ಸುತ್ತಾಡುತ್ತಿರುವುದು ಕಂಡುಬಂದಲ್ಲಿ ಅಥವಾ ಯಾವುದೇ ವ್ಯಕ್ತಿಗಳಿಂದ ಶಾಲೆಯ ಸುರಕ್ಷೆಗೆ ಭಂಗ ತರುವ ಘಟನೆ ನಡೆದರೆ, ಶೈಕ್ಷಣಿಕ ಚಟುವಟಿಕೆಗೆ ಅಡ್ಡಿ ಪಡಿಸಿರುವುದು ಕಂಡು ಬಂದಲ್ಲಿ ತತ್‌ಕ್ಷಣವೇ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು/ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಶಾಲಾ ಮುಖ್ಯಸ್ಥರು, ಉಸ್ತುವಾರಿ ಅಧಿಕಾರಿ, ಸಿಬಂದಿಗೆ ಇಲಾಖೆಯಿಂದ ನಿರ್ದೇಶಿಸಲಾಗಿದೆ.

ಟಾಪ್ ನ್ಯೂಸ್

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

BJP: ಇಂದು ಅಶೋಕ್‌ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್‌ ಕಮಿಟಿ ಸಭೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

CM DCM

Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್‌?

1-bbbbb

Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?

DCM-Fadnavis

Assembly Election: ಮಹಾರಾಷ್ಟ್ರಕ್ಕೆ ಫ‌ಡ್ನವೀಸ್‌ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.