Udupi Nejaru Case: ಚೌಗಲೆ ಹಲ್ಲೆಗೆ ಯತ್ನಿಸಿದವರಿಗೆ ನೋಟಿಸ್
Team Udayavani, Dec 12, 2023, 12:09 AM IST
ಮಲ್ಪೆ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 21 ಮಂದಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ಆರೋಪಿಯನ್ನು ಪತ್ತೆ ಹಚ್ಚಿದ ಅನಂತರ ಪೊಲೀಸರು ನ. 16ರಂದು ಆರೋಪಿಯನ್ನು ಸಂತ್ರಸ್ತರ ಮನೆಗೆ ಕರೆ ತಂದಿದ್ದರು. ಅ ವೇಳೆ ಮನೆ ಸಮೀಪದಲ್ಲಿ ಜಮಾಯಿಸಿದ ಸ್ಥಳೀಯರು ಆಕ್ರೋಶಿತಗೊಂಡು ಆರೋಪಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಈ ವೇಳೆ ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದರೂ, ಉದ್ರಿಕ್ತ ಗುಂಪನ್ನು ಚದುರಿಸಲು ಲಾಠಿ ಚಾರ್ಚ್ ಮಾಡಬೇಕಾಗಿ ಬಂದಿತ್ತು.
ಪೊಲೀಸರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆರೋಪಿ ಮೇಲೆ ಹಲ್ಲೆಗೆ ಯತ್ನಿಸಿದವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಈಗಾಗಲೇ ಮೂವರನ್ನು ವಿಚಾರಣೆ ಮಾಡಲಾಗಿದೆ. ಇನ್ನುಳಿದವರನ್ನೂ ಠಾಣೆಗೆ ಕರೆದು ವಿಚಾರಿಸಲಾಗುವುದು ಎಂದು ಮಲ್ಪೆ ಠಾಣಾಧಿಕಾರಿ ತಿಳಿಸಿದ್ದಾರೆ.
ಆರೋಪಿಯನ್ನು ಸಂತ್ರಸ್ತರ ನಿವಾಸಕ್ಕೆ ಕರೆ ತಂದಾಗ “ಸ್ಥಳೀಯರು ಆತನ ಕೊಲೆ ಮಾಡುವ ಸುವರ್ಣ ಅವಕಾಶವನ್ನು ಕಳೆದುಕೊಂಡಿದ್ದಾರೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಸಿಸಿ ಕೆಮರಾ ಅಳವಡಿಸಲು ಆಗ್ರಹ
ನೇಜಾರಿನ ಪರಿಸರದ ಸುತ್ತಮುತ್ತ ಎಲ್ಲೂ ಸಿಸಿ ಕೆಮರಾ ಇಲ್ಲ. ಈ ಕೊಲೆ ನಡೆದ ಬಳಿಕ ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರಿಗೆ ಬಹಳ ದೊಡ್ಡ ತೊಡಕಾಗಿತ್ತು. ಇದೀಗ ಪರಿಸರದ ಮುಖ್ಯ ಭಾಗಗಳಲ್ಲಿ ಕೆಮರಾ ಅಳವಡಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ. ಪೊಲೀಸರು ಈಗಾಗಲೇ ಪರಿಸರದ ಮನೆಯವರಿಗೆ ಸಿಸಿ ಕೆಮರಾ ಅಳವಡಿಸಲು ಸಲಹೆಗಳನ್ನು ನೀಡಿದ್ದಾರೆ. ನೇಜಾರಿನ ತೃಪ್ತಿ ಲೇಔಟ್‌ನ ನೂರ್ ಮಹಮ್ಮದ್ ಅವರ ನೆರೆಮನೆಯರು ತಮ್ಮ ಸುರಕ್ಷತೆಗೆ ಮನೆಯ ನಾಲ್ಕು ಸುತ್ತಲೂ ಸಿಸಿ ಕೆಮರಾ ಅಳವಡಿಸಲು ಮುಂದಾಗಿದ್ದಾರೆ.
ಭದ್ರತೆಗೆ ಸೂಕ್ತ ಕ್ರಮ: ಎಸ್ಪಿ ಡಾ| ಅರುಣ್
ನೇಜಾರಿನಲ್ಲಿ ಕೆಲವೊಂದು ಮನೆಗಳಲ್ಲಿ ಈಗಾಗಲೇ ಸಿಸಿ ಕೆಮರಾ ಅಳವಡಿಸಿಕೊಂಡಿದ್ದಾರೆ. ನೇಜಾರು, ಹಂಪನಕಟ್ಟೆ ಮುಖ್ಯ ಭಾಗಗಳಲ್ಲಿ ಸಿಸಿ ಕೆಮರಾ ಅಳವಡಿಸುವ ಬಗ್ಗೆ ಈಗಾಗಲೇ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ. ಜಿಲ್ಲಾಧಿಕಾರಿಗಳು ಈ ಬಗ್ಗೆ ಸಂಬಂಧಪಟ್ಟ ಆಡಳಿತಕ್ಕೆ ಸೂಚನೆಯನ್ನು ನೀಡಿದ್ದಾರೆ. ಅನುಮೋದನೆ ದೊರೆತ ಬಳಿಕ ಸಿಸಿ ಕೆಮರಾ ಸೇರಿದಂತೆ ಹೆಚ್ಚುವರಿ ಬೀದಿದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಎಸ್ಪಿ ಡಾ| ಅರುಣ್ ಕೆ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ
Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.