High Court: ಜೀತದಾಳು ಪುನರ್ವಸತಿ: ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್
Team Udayavani, Dec 12, 2023, 1:01 PM IST
ಬೆಂಗಳೂರು: ಕೇಂದ್ರ ಸರ್ಕಾರದ ಜೀತದಾಳು ಪುನರ್ವಸತಿ ಯೋಜನೆಯ ಎರಡು ಷರತ್ತುಗಳನ್ನು ರದ್ದುಪಡಿಸುವುದೂ ಸೇರಿದಂತೆ ಇದಕ್ಕೆ ಸಂಬಂಧಿಸಿದ ವಿಚಾರದ ಬಗ್ಗೆ ಸಲ್ಲಿಸಲಾದ ಅರ್ಜಿ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ಜೀತದಾಳುಗಳನ್ನು ಗುರುತಿಸಿ ಪುನರ್ವಸತಿ ಕಲ್ಪಿಸುವುದು ಮತ್ತು ಜೀತಕ್ಕೆ ದುಡಿಸಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ದಿಷ್ಟ ಮಾರ್ಗಸೂಚಿಗಳನ್ನು ವಜಾಗೊಳಿಸಬೇಕು, ಜೀತ ಪದ್ಧತಿ (ನಿರ್ಮೂಲನೆ) ಕಾಯ್ದೆ- 1976ನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಕೇಂದ್ರ ಸರ್ಕಾರದ ಜೀತದಾಳು ಪುನರ್ವಸತಿ ಯೋಜನೆಯ ಎರಡು ಷರತ್ತುಗಳನ್ನು ರದ್ದುಪಡಿಸಬೇಕು ಎಂದು ಜೀತ ವಿಮುಕ್ತಿ-ಕರ್ನಾಟಕದ ಸಂಯೋಜಕ ಡಾ|ಕಿರಣ ಕಮಲ ಪ್ರಸಾದ್ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತ ಅರ್ಜಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾಯಮೂರ್ತಿ. ಕೃಷ್ಣ ಎಸ್ .ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ ತುರ್ತು ನೋಟಿಸ್ ಜಾರಿ ಮಾಡಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ನೋಟಿಸ್ ತಲುಪದ ಹಿನ್ನೆಲೆಯಲ್ಲಿ ಮತ್ತೂಂದು ಬಾರಿ ನೋಟಿಸ್ ಜಾರಿ ಮಾಡಿ ವಿಚಾರಣೆ ಮಂದೂಡಿದೆ.
ಈ ಹಿಂದೆ ಅರ್ಜಿ ವಿಚಾರಣೆ ನಡೆಸಿದ್ದ, ಪೀಠ, ಅರ್ಜಿ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಪ್ರಧಾನ ನಿರ್ದೇಶಕರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೋಟಿಸ್ ಜಾರಿಗೆ ಆದೇಶಿಸಿತ್ತು. ಅರ್ಜಿಯಲ್ಲಿ ಮನವಿ ಮಾಡಲಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸರ್ಕಾರ ಸೇರಿದಂತೆ ವಿವಿಧ ಸಕ್ಷಮ ಪ್ರಾಧಿಕಾರದ ಅಧಿಕಾರಿಗಳಿಗೆ ಸಲ್ಲಿಸಿರುವ ಮನವಿಗಳನ್ನು ಅರ್ಜಿಯೊಂದಿಗೆ ಅಡಕ ಮಾಡಬೇಕು ಎಂಬುದಾಗಿ ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
Karkala: ಈದು ಗ್ರಾಮವನ್ನು ಮರೆತು ಬಿಟ್ಟಿದೆಯೇ ಸರಕಾರ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.