Sirsi: ಕಾರ್ತಿಕೋತ್ಸವದಂದು ಕಲ್ಯಾಣಿಯಿಂದಲೇ ಹುಲಿದೇವರಿಗೆ ಜಲಾಭಿಷೇಕ
ಕಲ್ಯಾಣಿಗೆ ಕಳೆ ತಂದ ʻನರೇಗಾʼ
Team Udayavani, Dec 12, 2023, 3:08 PM IST
ಶಿರಸಿ : ಸ್ಥಳೀಯ ಐತಿಹಾಸಿಕ ಕಲ್ಯಾಣಿಯೊಂದು ದಶಕದಿಂದ ಕಸ, ಕಡ್ಡಿ, ಹೂಳು ತುಂಬಿ ಕಣ್ಮರೆಯಾಗುವ ಹಂತ ತಲುಪಿತ್ತು. ಆದರೆ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಲಾಗಿದ್ದು ಕಲ್ಯಾಣಿಗೆ ಹೊಸ ಕಳೆ ಬಂದಿದೆ. ಇದೀಗ ಹುಲಿದೇವರ ಕಲ್ಯಾಣಿಯಲ್ಲಿ ಸ್ವಚ್ಛ ನೀರು ಸಂಗ್ರಹಗೊಂಡು, ಎಲ್ಲರನ್ನು ಆಕರ್ಷಿಸುತ್ತಿದೆ.
ತಾಲ್ಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಗಾರ ಗ್ರಾಮದಲ್ಲಿ ಹುಲಿದೇವರ ಕಟ್ಟೆಯಿದ್ದು, ಪಕ್ಕದಲ್ಲೇ ಪವಿತ್ರ ಕಲ್ಯಾಣಿಯಿದೆ. ಹುಲಿದೇವರು ರಾತ್ರಿ ಇಲ್ಲಿಗೆ ನೀರು ಕುಡಿಯಲು ಬರುತ್ತಾರೆ ಎಂಬುದು ಸ್ಥಳೀಯರ ನಂಬಿಕೆ. ಪ್ರತಿ ವರ್ಷ ಕಾರ್ತಿಕೋತ್ಸವದಂದು ಹುಲಿದೇವರಿಗೆ ಈ ಕಲ್ಯಾಣಿಯಿಂದಲೇ ಜಲಾಭಿಷೇಕ ಮಾಡುವುದು ಇಲ್ಲಿಯ ವಿಶೇಷ. ಸಾವಿರಾರು ಜನ ಸೇರುವ ಈ ಕಾರ್ತಿಕೋತ್ಸವ ಎಲ್ಲೆಡೆ ‘ಕಲಗಾರ ಕಟ್ಟೆ ಕಾರ್ತಿಕ’ ಎಂದೇ ಪ್ರಸಿದ್ಧಿ ಪಡೆದಿದೆ.
ನರೇಗಾ ಅನುದಾನ ಬಳಕೆ: ಹೂಳಿನಿಂದ ಕಲ್ಯಾಣಿಯ ಸೆಲೆ ಮುಚ್ಚಿ, ನೀರಿಲ್ಲದೇ ಕಣ್ಮರೆಯಾಗುವ ಹಂತ ತಲುಪಿತ್ತು. ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕಲ್ಯಾಣಿ ಪುನಶ್ಚೇತನಗೊಳಿಸಲು ಕೂಲಿ ಕಾರ್ಮಿಕರಿಗೆ ₹1.11 ಲಕ್ಷ ಹಾಗೂ ಸಾಮಗ್ರಿಗಳ ವೆಚ್ಚಕ್ಕೆ ₹2.94 ಲಕ್ಷ ಬಳಸಲಾಗಿದೆ. ಕಲ್ಯಾಣಿಯಲ್ಲಿ ಬೆಳೆದಿದ್ದ ಗಿಡಗಂಟಿ ಸ್ವಚ್ಛಗೊಳಿಸಿ, ಹೂಳೆತ್ತಿ, ಅಡಿಪಾಯ ಭದ್ರಪಡಿಸಲಾಗಿದೆ. ಕಲ್ಯಾಣಿ ಸುತ್ತ ಲ್ಯಾಟರೈಟ್ ಕೆಂಪುಕಲ್ಲಿನ ರಕ್ಷಣಾ ಗೋಡೆ ನಿರ್ಮಿಸಿ, ಗೇಟು ಅಳವಡಿಸಿ, ನೆಲಹಾಸು ಸಹ ಹಾಕಲಾಗಿದೆ.
ವಿಶೇಷತೆ: 16ನೇ ಶತಮಾನದಲ್ಲಿ ಸೋಂದಾ ಅರಸರ ಕಾಲಾವಧಿಯಲ್ಲಿ ಈ ಕಲ್ಯಾಣಿಯನ್ನು ನಿರ್ಮಿಸಿರಬಹುದು ಎಂಬ ನಂಬಿಕೆ ಸ್ಥಳೀಯರಲ್ಲಿದೆ. ಕಲ್ಯಾಣಿಯ ತಳಭಾಗದ ರಚನೆ ಬಹುಭುಜಾಕೃತಿಯಲ್ಲಿದ್ದು, 8 ಶೃಂಗ ಬಿಂದುಗಳು 7 ಬಾಹುಗಳಿಂದ ಕೂಡಿದೆ. ನೋಡಲು ಚಿಕ್ಕದಾರೂ 26 ಅಡಿ ಆಳದ, ಆಕರ್ಷಕವಾಗಿರುವ ಕಲ್ಯಾಣಿಯಲ್ಲಿ ವರ್ಷಪೂರ್ತಿ ನೀರಿರುವುದು ವಿಶೇಷ. ಕಾರ್ತಿಕೋತ್ಸವದಂದು ಇಲ್ಲಿ ಹುಲಿದೇವರಿಗೆ ಪೂಜೆ ಸಲ್ಲಿಸುವುದರಿಂದ ತಮ್ಮ ಜಾನುವಾರುಗಳು ರೋಗರುಜಿನೆಗಳಿಂದ ಸುರಕ್ಷಿತವಾಗಿರುತ್ತವೆ ಎಂಬ ನಂಬಿಕೆಯಿದೆ. ಇದೇ ಡಿಸೆಂಬರ್ 13ರಂದು ಕಾರ್ತಿಕೋತ್ಸವ ನಡೆಯಲಿದೆ.
ಉತ್ತರ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಈಶ್ವರಕುಮಾರ ಕಾಂದೂ ಅವರು ಸ್ವತಃ ಈ ಕಲ್ಯಾಣಿ ಅಭಿವೃದ್ಧಿಗೆ ಆಸಕ್ತಿ ವಹಿಸಿ, ಮಾರ್ಗದರ್ಶನ ನೀಡಿದ್ದರಿಂದ ನಾವೆಲ್ಲರೂ ಒಗ್ಗಟ್ಟಿನಿಂದ ಅತ್ಯಲ್ಪ ಕಡಿಮೆ ಅವಧಿಯಲ್ಲಿ ಕಲ್ಯಾಣಿಯನ್ನು ಪುನಶ್ಚೇತನಗೊಳಿಸಿದ್ದೇವೆ ಎನ್ನುತ್ತಾರೆ ಇಟಗುಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ನಾಯ್ಕ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಯಲಕ್ಷ್ಮೀ, ಪಂಚಾಯಿತಿ ಸದಸ್ಯರು ಆಸಕ್ತಿ ವಹಿಸಿ ಕಲ್ಯಾಣಿ ಪುನಶ್ಚೇತನಗೊಳಿಸಿ, ಸಾರ್ವಜನಿಕ ಮಾಹಿತಿ ಫಲಕ ಅಳವಡಿಸುವ ಮೂಲಕ ಜನರಿಗೆ ಕಲ್ಯಾಣಿ ಮಹತ್ವ ತಿಳಿಸುತ್ತಿದ್ದಾರೆ. ಇದೊಂದು ದೇವರ ಕಲ್ಯಾಣಿ ಆದ್ದರಿಂದ ಪ್ರವಾಸಿಗರು ಸ್ಥಳದ ಪಾವಿತ್ರ್ಯತೆ ಕಾಪಾಡಬೇಕು ಎಂಬ ಮನವಿ ಗ್ರಾಮಸ್ಥರದ್ದು.
ಮಹಾತ್ಮಾ ಗಾಂಧಿ ನರೇಗಾದಡಿ ಉತ್ತರ ಕನ್ನಡ ಜಿಲ್ಲೆಯ 69 ಕಲ್ಯಾಣಿಗಳನ್ನು ಅಭಿವೃದ್ಧಿಪಡಿಸಲು ಆಯ್ಕೆ ಮಾಡಿಕೊಂಡಿದ್ದು, ಈ ಪೈಕಿ 19 ಕಲ್ಯಾಣಿಗಳ ಕಾಮಗಾರಿಗಳು ಪೂರ್ಣಗೊಂಡಿವೆ. ಇದರಲ್ಲಿ ಶಿರಸಿ ತಾಲೂಕಿನ ಕಲಗಾರ ಗ್ರಾಮದ ಹುಲಿದೇವರ ಕಲ್ಯಾಣಿಯೂ ಒಂದಾಗಿದ್ದು, ಪುನಶ್ಚೇತನಗೊಂಡ ಹುಲಿದೇವರ ಕಲ್ಯಾಣಿಗೆ ನರೇಗಾದಿಂದ ಹೊಸ ಕಳೆ ಬಂದಿದೆ. – ಈಶ್ವರ ಕಾಂದೂ, ಸಿಇಒ ಉತ್ತರ ಕನ್ನಡ ಜಿ.ಪಂ.
ಈಗಾಗಲೇ ಕಲ್ಯಾಣಿಗೆ ಜೀವಕಳೆ ಬಂದಿದ್ದು, ಮುಂದಿನ ದಿನಗಳಲ್ಲಿ ನರೇಗಾ ಅನುದಾನದಡಿ ಕಲ್ಯಾಣಿ ಆವರಣವನ್ನು ಮತ್ತಷ್ಟು ಸುಂದರಗೊಳಿಸಲು ಯೋಜನೆ ರೂಪಿಸಲಾಗಿದೆ. – ಕರೀಂ ಅಸದಿ, ಯೋಜನಾ ನಿರ್ದೇಶಕರು, ಉತ್ತರ ಕನ್ನಡ ಜಿ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Dandeli: ವಿದ್ಯುತ್ ಕಂಬದ ಜಿಓಎಸ್ ಕಳವು ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Dandeli:ತುಂಡಾಗಿ ಬಿದ್ದಿದ್ದ ಕೇಬಲ್ ವೈರ್ ಸುತ್ತಿ ದ್ವಿಚಕ್ರ ವಾಹನ ಸ್ಕಿಡ್: ಸವಾರನಿಗೆ ಗಾಯ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.