Kundapur: ತಾಯಿ-ಮಕ್ಕಳ ಆಸ್ಪತ್ರೆಗೆ ತಜ್ಞ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಡಾ| ಜಿ.ಪರಮೇಶ್ವರ
Team Udayavani, Dec 12, 2023, 11:27 PM IST
ಬೆಳಗಾವಿ: ಕುಂದಾಪುರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆಯಲ್ಲಿ ಖಾಲಿ ಇರುವ ಮೂವರು ತಜ್ಞ ವೈದ್ಯರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ| ಜಿ.ಪರಮೇಶ್ವರ ಹೇಳಿದರು.
ವಿಧಾನಸಭೆಯಲ್ಲಿ ಶಾಸಕ ಎ. ಕಿರಣಕುಮಾರ ಕೊಡ್ಗಿ ಗಮನ ಸೆಳೆಯುವ ಸೂಚನೆ ಮಂಡಿಸಿ, ಕುಂದಾಪುರ ತಾಯಿ ಮತ್ತು ಮಕ್ಕಳ ಆಸ್ಪತ್ರೆ 100 ಹಾಸಿಗೆಯದ್ದಾಗಿದ್ದು, ತಿಂಗಳಿಗೆ ಸುಮಾರು 150 ಹೆರಿಗೆ ಆಗುತ್ತಿದೆ, ನಿತ್ಯ 80-100 ಹೊರರೋಗಿಗಳು ಬರುತ್ತಾರೆ. ಆದರೆ, ಸ್ತ್ರೀರೋಗ, ಮಕ್ಕಳ ತಜ್ಞರೆ ಇಲ್ಲವೆಂದರೆ ಹೇಗೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಪರವಾಗಿ ಉತ್ತರಿಸಿದ ಸಚಿವ ಡಾ| ಜಿ. ಪರಮೇಶ್ವರ, ಕುಂದಾಪುರದಲ್ಲಿ ತಾಯಿ-ಮಕ್ಕಳ ಆಸ್ಪತ್ರೆಗೆ 16 ಹುದ್ದೆಗಳು ಮಂಜೂರಾಗಿದ್ದು, 13 ಹುದ್ದೆಗಳು ಭರ್ತಿಯಾಗಿವೆ. ಮೂರು ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಅದೇ ಆಸ್ಪತ್ರೆ ಪಕ್ಕದಲ್ಲಿ ಸಾರ್ವಜನಿಕ ಆಸ್ಪತ್ರೆ ಇದ್ದು, ಅಲ್ಲಿ 182 ಹುದ್ದೆಗಳಲ್ಲಿ 143 ಹುದ್ದೆಗಳು ಭರ್ತಿಯಾಗಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.