Mangaluru ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಕ್ಕೆ ಸೂಚನೆ
Team Udayavani, Dec 13, 2023, 12:30 AM IST
ಮಂಗಳೂರು: ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅಸಮಾಧಾನ ವ್ಯಕ್ತಪಡಿಸಿದ್ದು, ತ್ವರಿತಗೊಳಿಸಲು ಸೂಚಿಸಿದ್ದಾರೆ.
ಮಂಗಳವಾರ ವಿವಿಧ ಯೋಜನೆ ಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಬಿ.ಸಿ.ರೋಡ್, ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ಬಹಳ ನಿಧಾನ ವಾಗಿದ್ದು ಸುಗಮ ಸಂಚಾರಕ್ಕೂ ತೀವ್ರ ತೊಂದರೆಯಾಗುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿ ನಡೆಸು ವಂತೆ ಅವರು ಹೆದ್ದಾರಿ ಇಲಾಖೆ ಅಧಿ ಕಾರಿಗಳಿಗೆ ತಾಕೀತು ಮಾಡಿದರು.
ಕದ್ರಿ ಪಾರ್ಕ್: ಕದ್ರಿ ಪಾರ್ಕ್ ವೀಕ್ಷಣೆಗೆ ಬಂದ ಸಾರ್ವಜನಿಕರಿಗೆ ಆಹ್ಲಾದಕರ ವಾತಾವರಣ ಇರಬೇಕು. ಕದ್ರಿ ಪಾರ್ಕಿಗೆ ಸಾಗುವ ರಸ್ತೆಯಲ್ಲಿ ಜನದಟ್ಟಣೆ ಆಗದ ಹಾಗೆ ನೋಡಿ ಕೊಳಬೇಕು. ಫುಟ್‌ಪಾತ್‌ಗಳ ಮೇಲಿರುವ ಬೀದಿ ವ್ಯಾಪಾರಿಗಳ ಬಗ್ಗೆ ಮತ್ತು ಪಾರ್ಕಿಂಗ್ ವ್ಯವಸ್ಥೆಗಳ ಬಗ್ಗೆ ಮತ್ತು ಸ್ವತ್ಛತೆಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಕಾವೂರು ಕೆರೆ ಹಾಗೂ ಗುಜ್ಜರೆ ಕೆರೆಗಳನ್ನು ಸ್ವತ್ಛವಾಗಿ ಇರಿಸಲು ಮತ್ತು ನೀರಿನ ಸೌಕರ್ಯಗಳು ಅಚ್ಚುಕಟ್ಟಾಗಿ ನಿರ್ವಹಿಸಲು ಸಮಿತಿ ರಚಿಸಲು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ, ಪ್ರಸ್ತಾವನೆ ಸಲ್ಲಿಸಲು ಅವರು ತಿಳಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.