Kalburgi: ವಿಷ ಸೇವಿಸಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ
Team Udayavani, Dec 13, 2023, 2:35 PM IST
ವಾಡಿ: ಅಪ್ರಾಪ್ತ ಪ್ರೇಮಿಗಳಿಬ್ಬರೂ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ತಾಪುರ ತಾಲೂಕಿನ ಕೊಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ್ದು, ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ನಾಲವಾರ ಹೋಬಳಿ ವ್ಯಾಪ್ತಿಯ ರಾಮಂಪುರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ತರ್ಕಸ್ ಪೇಟೆ ಗ್ರಾಮದ ರಾಧಿಕಾ ಮೆತ್ತನ್ (14) ಹಾಗೂ ಯಾದಗಿರಿಯಲ್ಲಿ ಐಟಿಐ ಕಾಲೇಜಿನಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ಕೊಲ್ಲೂರ ಗ್ರಾಮ ನಿವಾಸಿ ಆಕಾಶ ಭೋವಿ (19) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಪ್ರೇಮಿಗಳು.
ತರ್ಕಸ್ ಪೇಟೆ ಸಮೀಪದ ಚೌಕಂಡಿ ತಾಂಡಾ ಪರಿಸರದ ನಿರ್ಜನ ಪ್ರದೇಶದಲ್ಲಿ ಸೇರಿದ ಈ ಪ್ರೇಮಿಗಳು, ಏಕಕಾಲಕ್ಕೆ ಕಿಟನಾಶಕ ಸೇವಿಸಿದ್ದಾರೆ ಎನ್ನಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಪ್ರೇಮಿಗಳನ್ನು ಗಮನಿಸಿದ ಸ್ಥಳೀಯರು ಖಾಸಗಿ ವಾಹನದಲ್ಲಿ ಕೊಲ್ಲೂರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮದ್ಯೆ ಇಬ್ಬರೂ ಅಸುನೀಗಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಅಪ್ರಾಪ್ತ ಪ್ರೇಮಿಗಳ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿರುವ ವಾಡಿ ಠಾಣೆಯ ಪಿಎಸ್ ಐ ತಿರುಮಲೇಶ ಕುಂಬಾರ ತನಿಖೆ ಕೈಗೊಂಡಿದ್ದಾರೆ.
ಈ ಕುರಿತು ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.