NIA ದಾಳಿ; ಬೆಂಗಳೂರಿನ 6 ಸ್ಥಳಗಳಲ್ಲಿ ಶೋಧ: ಜೈಲಿನಲ್ಲಿ ಕೈದಿಗಳಿಗೆ ಉಗ್ರ ತರಬೇತಿ ಪ್ರಕರಣ
ಡಿಜಿಟಲ್ ಸಾಧನಗಳು, ದೋಷಾರೋಪಣೆ ದಾಖಲೆಗಳು 7.3 ಲಕ್ಷ ರೂ ಜಪ್ತಿ
Team Udayavani, Dec 13, 2023, 6:27 PM IST
ಬೆಂಗಳೂರು: ಲಷ್ಕರ್-ಎ-ತೊಯ್ಬಾ (LeT) ಉಗ್ರರು ಕೈದಿಗಳಿಗೆ ತರಬೇತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಆರು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ನಡೆಸಿದೆ.
ಕೈದಿಗಳಿಗೆ ತರಬೇತಿ ಪ್ರಕರಣಕ್ಕೆ ಸಂಬಂಧಿಸಿ NIA ತನಿಖೆಗಳ ಮುಂದುವರಿದ ಭಾಗವಾಗಿ ಇಂದು ನಾಲ್ವರು ಆರೋಪಿಗಳ ಮನೆಗಳು ಸೇರಿದಂತೆ ಒಟ್ಟು ಆರು ಸ್ಥಳಗಳಲ್ಲಿ ಶೋಧ ನಡೆಸಲಾಗಿದೆ. ಒಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ. ಶಂಕಿತರೊಂದಿಗೆ ಸಂಪರ್ಕ ಹೊಂದಿದ ಸ್ಥಳಗಳಲ್ಲಿ ವ್ಯಾಪಕವಾಗಿ ಶೋಧ ನಡೆಸಲಾಗಿದೆ.
ಮೊಹಮ್ಮದ್ ಉಮರ್, ಮೊಹಮ್ಮದ್ ಫೈಸಲ್ ರಬ್ಬಾನಿ, ತನ್ವೀರ್ ಅಹ್ಮದ್, ಮೊಹಮ್ಮದ್ ಫಾರೂಕ್ ಮತ್ತು ಪರಾರಿಯಾಗಿರುವ ಆರೋಪಿ ಜುನೈದ್ ಅಹಮದ್ ಗೆ ಸೇರಿದ ಸ್ಥಳಗಳಲ್ಲಿ ನಡೆಸಿದ ದಾಳಿಯಲ್ಲಿ ಎನ್‌ಐಎ ತಂಡಗಳು ಹಲವಾರು ಡಿಜಿಟಲ್ ಸಾಧನಗಳು, ವಿವಿಧ ದೋಷಾರೋಪಣೆ ದಾಖಲೆಗಳು ಮತ್ತು 7.3 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಂಡಿವೆ.
ಪ್ರಕರಣಕ್ಕೆ ಸಂಬಂಧಿಸಿ ಮೂವರು ತಲೆಮರೆಸಿಕೊಂಡಿದ್ದಾರೆ ಎಂದು NIA ತಿಳಿಸಿದೆ. ಸರಣಿ ಬಾಂಬ್ ಸ್ಪೋಟದ ಪ್ರಮುಖ ಆರೋಪಿ ಉಗ್ರ ನಾಸೀರ್ ಜೈಲಿನಲ್ಲಿ ಶಂಕಿತರಿಗೆ ತರಬೇತಿ ನೀಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಎನ್ ಐಎ ಪ್ರಕರಣದ ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.