Parliament ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹ ಅವರನ್ನೂ ವಿಚಾರಣೆ ಮಾಡಿ: ಸಿಎಂ
ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟ... ಪ್ರಧಾನಿ ಉತ್ತರಿಸಬೇಕಾಗಿದೆ
Team Udayavani, Dec 13, 2023, 6:46 PM IST
ಬೆಂಗಳೂರು: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು ಎಂದು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಸಿಎಂ ”ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ.
ಇಪ್ಪತ್ತೆರಡು ವರ್ಷಗಳ ಹಿಂದೆ (2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ.
ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ
ಸಂಗೀತ ವಿವಿಯಲ್ಲಿ ಕೋರ್ಸ್ ಆರಂಭ: ಕುಲಪತಿ ನಾಗೇಶ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.